“ಪಪ್ಪು’ ಜಾಗಕ್ಕೆ ಯುವರಾಜ
Team Udayavani, Nov 16, 2017, 11:45 AM IST
ಅಹಮದಾಬಾದ್: ಗುಜರಾತ್ ಚುನಾವಣಾ ಪ್ರಚಾರ ಜಾಹೀರಾತಿನಲ್ಲಿ ಬಿಜೆಪಿ ಬಳಸಿದ್ದ “ಪಪ್ಪು’ ಪದಕ್ಕೆ ಚುನಾವಣಾ ಆಯೋಗ ಆಕ್ಷೇಪ ವ್ಯಕ್ತಪಡಿಸಿದ ಬೆನ್ನಲ್ಲೇ ಪಕ್ಷವು ಆ ಪದದ ಬದಲಿಗೆ “ಯುವರಾಜ’ ಎಂಬ ಪದ ಬಳಕೆ ಮಾಡಿದೆ.
ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರನ್ನು ಅವಹೇಳನ ಮಾಡಲು ಪಪ್ಪು ಎಂಬ ಪದ ಬಳಸಲಾಗಿದೆ ಎಂಬ ಆರೋಪಕ್ಕೆ ಸಂಬಂಧಿಸಿ ಪ್ರತಿಕ್ರಿಯಿಸಿದ್ದ ಚುನಾವಣಾ ಆಯೋಗ ಮಂಗಳವಾರವಷ್ಟೇ ಆ ಪದವನ್ನು ನಿಷೇಧಿಸಿ ಆದೇಶ ಹೊರಡಿಸಿತ್ತು. ಈ ಹಿನ್ನೆಲೆಯಲ್ಲಿ ಬುಧವಾರ ಪದವನ್ನು ಬದಲಿಸಿರುವ ಬಿಜೆಪಿ, “ಪಪ್ಪು ಎಂಬ ಪದ ಯಾವ ವ್ಯಕ್ತಿಗೂ ಸಂಬಂಧಿ ಸಿದ್ದಲ್ಲ. ಆದರೂ, ನಾವು ಆಯೋಗದ ಸೂಚ ನೆಗೆ ಒಪ್ಪಿ ಪದವನ್ನು ಬದಲಿಸಿದ್ದೇವೆ’ ಎಂದಿದೆ.
ಈ ನಡುವೆ, ಗುಜರಾತ್ ಕಾಂಗ್ರೆಸ್‌ನ ಹಿರಿಯ ನಾಯಕ ವಿಜಯ್ ಕೆಲ್ಲಾ ಬುಧವಾರ ರಾಜೀನಾಮೆ ನೀಡಿದ್ದಾರೆ. ಪಕ್ಷವು ನಿರ್ದಿಷ್ಟ ಸಮುದಾಯ ಮತ್ತು ಜಾತಿಯ ಜನರಿಗಷ್ಟೇ ಆದ್ಯತೆ ನೀಡುತ್ತಿದೆ. ನಿಷ್ಠಾವಂತ ಕಾರ್ಯ ಕರ್ತರನ್ನು ಕಡೆಗಣಿಸುತ್ತಿದೆ. ಹೀಗಾಗಿ ರಾಜೀ ನಾಮೆ ನೀಡುತ್ತಿದ್ದೇನೆ ಎಂದಿದ್ದಾರೆ ಕೆಲ್ಲಾ.
ಹಾರ್ದಿಕ್ ಬೆನ್ನಿಗೆ ನಿಂತ ಮೆವಾನಿ: ಇದೇ ವೇಳೆ, ಪಟೇಲ್ ಮೀಸಲಾತಿ ಪರ ಹೋರಾಟಗಾರ ಹಾರ್ದಿಕ್ ಪಟೇಲ್ ಅವರ ವಿವಾದಾತ್ಮಕ ವಿಡಿಯೋ ಬಿಡುಗಡೆಯಾದ ಬೆನ್ನಲ್ಲೇ ದಲಿತ ಹೋರಾಟ ಗಾರ ಜಿಗ್ನೇಶ್ ಮೆವಾನಿ ಅವರು ಹಾರ್ದಿಕ್‌ಗೆ ಬೆಂಬಲ ವ್ಯಕ್ತ ಪಡಿಸಿದ್ದಾರೆ. ಈ ಕುರಿತು ಫೇಸ್‌ಬುಕ್ ಪುಟದಲ್ಲಿ ಬರೆದಿರುವ ಮೆವಾನಿ, “ರಾಜಕಾರ ಣಿಗಳು ಎಷ್ಟು ಕೀಳುಮಟ್ಟಕ್ಕೆ ಇಳಿಯುತ್ತಾರೆ ಎನ್ನುವುದಕ್ಕೆ ಇದೇ ಸಾಕ್ಷಿ. ಪ್ರೀತಿಯ ಹಾರ್ದಿಕ್ ಪಟೇಲ್, ನಾನು ನಿಮ್ಮೊಂದಿಗಿದ್ದೇನೆ. ಲೈಂಗಿಕ ಕ್ರಿಯೆ ನಡೆಸುವಂಥ ಹಕ್ಕು ಎಲ್ಲರ ಮೂಲಭೂತ ಹಕ್ಕುಗಳಲ್ಲಿ ಒಂದು. ನಿಮ್ಮ ಖಾಸಗಿತನವನ್ನು ಪ್ರಶ್ನಿಸುವ ಅಧಿಕಾರ ಯಾರಿಗೂ ಇಲ್ಲ’ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha:ರೈಲಿನಲ್ಲಿ ಪ್ರಯಾಣಿಕರಿಗೆ ನೀಡುವ ಹೊದಿಕೆ ಎಷ್ಟು ದಿನಗಳಿಗೊಮ್ಮೆ ತೊಳೆಯಲಾಗುತ್ತದೆ
Oath: ಕೇರಳ ಸೀರೆ ತೊಟ್ಟು, ಕೈಯಲ್ಲಿ ಸಂವಿಧಾನ ಹಿಡಿದು ಪ್ರಮಾಣ ವಚನ ಸ್ವೀಕರಿಸಿದ ಪ್ರಿಯಾಂಕಾ
Railway: ಪ್ರತಿ ಪ್ರಯಾಣದ ಬಳಿಕ ಹೊದಿಕೆಗಳನ್ನು ತೊಳೆಯುತ್ತಾರಾ? ಸಚಿವರು ಕೊಟ್ಟ ಉತ್ತರವೇನು?
Cyber Fraud Case: ದಾಳಿ ನಡೆಸಲು ಹೋದ ಇಡಿ ಅಧಿಕಾರಿಗಳ ಮೇಲೆಯೇ ತಂಡದಿಂದ ಹಲ್ಲೆ
Ranchi: ಪ್ರೇಯಸಿಯನ್ನು ಕೊಂದು 40ರಿಂದ 50 ತುಂಡು ಮಾಡಿದ ಕಟುಕ!
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Kota: ರಾಷ್ಟ್ರೀಯ ಹೆದ್ದಾರಿಯಲ್ಲಿ ಸೌಲಭ್ಯ ಕೊರತೆ
Hubli: ಸಮಾಜದಹಿತಕ್ಕಾಗಿ ಪಕ್ಷ ಮರೆತು ಹೋರಾಡಬೇಕು: ಕಾಶನ್ನಪ್ಪನವರ ವಿರುದ್ದ ಬೆಲ್ಲದ್ ಟೀಕೆ
Mangaluru: ವೆನ್ಲಾಕ್ ಆಸ್ಪತ್ರೆ ಹೊರರೋಗಿ ವಿಭಾಗ ವಿಸ್ತರಣೆ
Bengaluru ಭಯೋ*ತ್ಪಾದಕ ಚಟುವಟಿಕೆ ಆರೋಪಿ, ಉ*ಗ್ರ ಖಾನ್ ರುವಾಂಡದಿಂದ ಭಾರತಕ್ಕೆ ಗಡಿಪಾರು!
Kundapura: ಹತ್ತೂರು ಸೇರುವ ಮುಳ್ಳಿಕಟ್ಟೆಗೆ ಬೇಕು ಬಸ್ ನಿಲ್ದಾಣ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.