ಮಾನಸಿಕ ಆರೋಗ್ಯ ವಿಧೇಯಕ ಪಾಸ್
Team Udayavani, Mar 28, 2017, 11:40 AM IST
ಹೊಸದಿಲ್ಲಿ: ಮಾನಸಿಕವಾಗಿ ಅಸ್ವಸ್ಥಗೊಂಡವರು ಆತ್ಮಹತ್ಯೆಗೆ ಯತ್ನಿಸಿದರೆ ಅಪರಾಧ ಅಲ್ಲವೆಂಬ ಮಹತ್ವದ ತಿದ್ದುಪಡಿ ಇರುವ ‘ಮಾನಸಿಕ ಆರೋಗ್ಯ ವಿಧೇಯಕ’ಕ್ಕೆ ಲೋಕಸಭೆ ಸೋಮವಾರ ಅಂಗೀಕಾರ ನೀಡಿದೆ. ಎಲ್ಲದಕ್ಕಿಂತ ಹೆಚ್ಚಾಗಿ ಅಂಥ ಸಮಸ್ಯೆ ಇರುವ ವ್ಯಕ್ತಿಗಳ ಆಸ್ತಿ ಹಕ್ಕು ಕಾಪಿಡುವ ನಿಟ್ಟಿನಲ್ಲಿ ಪ್ರಮುಖ ಬದಲಾವಣೆ ಮಾಡಧಿಲಾಗಿದೆ. ಜತೆಗೆ ಅವರಿಗೆ ಉತ್ತಮ ಆರೋಗ್ಯ ವ್ಯವಸ್ಥೆ ನೀಡುವ ಅಂಶಕ್ಕೂ ಒತ್ತುಕೊಡಧಿಲಾಗಿದೆ. ಕಳೆದ ಆಗಸ್ಟ್‌ನಲ್ಲಿ ರಾಜ್ಯಸಭೆಯಲ್ಲಿ ಈ ವಿಧೇಯಕಕ್ಕೆ ಅನುಮೋದನೆ ದೊರೆತಿತ್ತು.
ಮಾನಸಿಕ ಸಮಸ್ಯೆಯಿಂದ ಬಳಲುತ್ತಿರುವವ ಆತ್ಮಹತ್ಯೆ ಮಾಡಿಕೊಳ್ಳುವ ಪ್ರಯತ್ನ ಮಾಡಿಕೊಂಡಿದ್ದಾನೆ ಎಂಬ ವಿಚಾರ ಸಾಬೀತಾದರೆ ಮಾತ್ರ ಆತನ ವಿರುದ್ಧ ಕ್ರಮ ಕೈಗೊಳ್ಳಬೇಕು. ಅಂಥವರ ವಿರುದ್ಧ ಕಾನೂನು ರೀತಿಯಲ್ಲಿ ಕ್ರಮ ಕೈಗೊಳ್ಳಬಾರದು ಎಂದು ತಿದ್ದುಪಡಿ ಮಾಡಲಾಗಿದೆ. ಅದಕ್ಕೆ ಸಂಬಂಧಿಸಿದಂತೆ ಪ್ರತಿಪಕ್ಷಗಳು ಸೂಚಿಸಿದ್ದ ತಿದ್ದುಪಡಿಗಳನ್ನು ಲೋಕಸಭೆ ತಿರಸ್ಕರಿಸಿದೆ. ಒಂದು ವೇಳೆ ಮಹಿಳೆ ಮಾನಸಿಕ ಸಮಸ್ಯೆ ಎದುರಿಸುತ್ತಿದ್ದರೆ ಆಕೆಯ ಚಿಕಿತ್ಸೆಗೆ ಹೆಚ್ಚಿನ ಒತ್ತು ನೀಡಬೇಕೆಂದು ಸಲಹೆ ಮಾಡಲಾಗಿದೆ. 1987ರ ಕಾಯ್ದೆ ಸಾಂಸ್ಥಿಕವಾಗಿತ್ತು. ತಿದ್ದುಪಡಿ ಕಾಯ್ದೆಯಲ್ಲಿ ಸಮುದಾಯವನ್ನು ಕೇಂದ್ರೀಕರಿಸಿ ರೂಪಿಸಲಾಗಿದೆ. ಎಲ್ಲರನ್ನೂ ಒಳಗೊಂಡಂತೆ ಕಾನೂನು ರೂಪಿಸಲಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವ ಜೆ.ಪಿ.ನಡ್ಡಾ ಹೇಳಿದ್ದಾರೆ. ತಿದ್ದುಪಡಿ ವಿಧೇಯಕದಲ್ಲಿ ಸಮಸ್ಯೆಗೆ ಒಳಗಾದ ವ್ಯಕ್ತಿ ತನಗೆ ಯಾವ ರೀತಿಯ ಚಿಕಿತ್ಸೆ ಬೇಕು, ತನ್ನ ವ್ಯವಹಾರಗಳನ್ನು ಗಮನಿಸಲು ಪ್ರತಿನಿಧಿಯನ್ನು ನೇಮಿಸಲೂ ಅವಕಾಶ ಕಲ್ಪಿಸಿಕೊಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
GST: ಪರೀಕ್ಷಾ ಫಾರಂ ಮೇಲೆ ಜಿಎಸ್‌ಟಿ: ಸರಕಾರ ವಿರುದ್ಧ ಪ್ರಿಯಾಂಕಾ ವಾಗ್ಧಾಳಿ
JPC: ಒಂದು ರಾಷ್ಟ್ರ ಒಂದು ಚುನಾವಣೆ: ಜ.8ಕ್ಕೆ ಮೊದಲ ಜೆಪಿಸಿ ಸಭೆ
Nitish Kumar ನೇತೃತ್ವದಲ್ಲೇ ಬಿಹಾರ ಚುನಾವಣೆಗೆ ಎನ್‌ಡಿಎ ಸ್ಪರ್ಧೆ: ಬಿಜೆಪಿ
Hindu Temple: ಸಂಭಲ್ ಬಳಿಕ ಬುಲಂದ್‌ಶಹರ್‌ನಲ್ಲಿ ಮತ್ತೊಂದು ಹಳೇ ದೇವಾಲಯ ಪತ್ತೆ
Rahul Gandhi: ದಲಿತನೆಂಬ ಕಾರಣಕ್ಕೆ ಪೊಲೀಸ್ ವಶದಲ್ಲಿ ವ್ಯಕ್ತಿ ಕೊ*ಲೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
GST: ಪರೀಕ್ಷಾ ಫಾರಂ ಮೇಲೆ ಜಿಎಸ್‌ಟಿ: ಸರಕಾರ ವಿರುದ್ಧ ಪ್ರಿಯಾಂಕಾ ವಾಗ್ಧಾಳಿ
JPC: ಒಂದು ರಾಷ್ಟ್ರ ಒಂದು ಚುನಾವಣೆ: ಜ.8ಕ್ಕೆ ಮೊದಲ ಜೆಪಿಸಿ ಸಭೆ
Udupi; ಗೀತಾರ್ಥ ಚಿಂತನೆ 134: ಮನುಷ್ಯ ದೇಹದೊಳಗೆ ಯಾವ ಜೀವವೂ ಇರಬಹುದು
Nitish Kumar ನೇತೃತ್ವದಲ್ಲೇ ಬಿಹಾರ ಚುನಾವಣೆಗೆ ಎನ್‌ಡಿಎ ಸ್ಪರ್ಧೆ: ಬಿಜೆಪಿ
Hindu Temple: ಸಂಭಲ್ ಬಳಿಕ ಬುಲಂದ್‌ಶಹರ್‌ನಲ್ಲಿ ಮತ್ತೊಂದು ಹಳೇ ದೇವಾಲಯ ಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.