ಇಂಡಿಯಾ ಗೇಟ್‌ಗಿಂತ ಎತ್ತರದ ಕಟ್ಟಡ ನಿರ್ಮಾಣಕ್ಕೆ ಬ್ರೇಕ್
Team Udayavani, Jan 1, 2020, 7:19 PM IST
ನವದೆಹಲಿ: ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಇನ್ನು ಮಂದೆ 42 ಮೀಟರ್‌ಗಿಂತ ಎತ್ತರದ ಕಟ್ಟಡ ನಿರ್ಮಿಸುವಂತಿಲ್ಲ. ಕೇಂದ್ರೀಯ ಭಾಗದಲ್ಲಿ ಕೇಂದ್ರ ಸರ್ಕಾರದ ಸಚಿವಾಲಯಗಳು, ನೂತನ ಸಂಸತ್ ಭವನ, ರಾಜಪಥವನ್ನು ನವೀಕರಣಗೊಳಿಸಲಾಗುತ್ತಿದ್ದು, ಎಲ್ಲ ಕಟ್ಟಡಗಳು ಕೂಡ ಏಕರೂಪತೆಯಿಂದ ಕೂಡಿರಲು ಕೇಂದ್ರ ನಗರಾಭಿವೃದ್ಧಿ ಸಚಿವಾಲಯ ಈ ನಿರ್ಧಾರ ಕೈಗೊಂಡಿದೆ.
ಐತಿಹಾಸಿಕ ದೆಹಲಿ ಗೇಟ್ 42 ಮೀಟರ್ ಎತ್ತರವಿದ್ದು, ಮುಂದೆ ನಿರ್ಮಾಣವಾಗುವ ಯಾವುದೇ ಕಟ್ಟಡಗಳು ಇದಕ್ಕಿಂತ ಒಂದು ಇಂಚು ಎತ್ತರ ಕೂಡ ಇರುವಂತಿಲ್ಲ.
ಈ ಮೂರು ಕಟ್ಟಡಗಳ ನಿರ್ಮಾಣದ ಗುತ್ತಿಗೆ ಗುಜರಾತ್ ಮೂಲದ ಎಚ್‌ಸಿಪಿ ಡಿಸೈನ್ ಸಂಸ್ಥೆಗೆ ನೀಡಲಾಗಿದೆ. 2022ಕ್ಕೆ 75ನೇ ಸ್ವಾತಂತ್ರೋತ್ಸವ ಆಚರಿಸಿಕೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸಂಸತ್ ಭವನವನ್ನು ಈ ಅವಧಿಯೊಳಗೆ ನಿರ್ಮಿಸಲು ಉದ್ದೇಶಿಸಲಾಗಿದೆ. ಉಳಿದ ಕಟ್ಟಡಗಳನ್ನು 2024ಕ್ಕೆ ಪೂರ್ಣಗೊಳಿಸಲು ತೀರ್ಮಾನಿಸಲಾಗಿದೆ. ಸುಮಾರು 12 ಸಾವಿರ ಕೋಟಿ ರೂ.ವೆಚ್ಚದ ಯೋಜನೆ ಇದಾಗಿದೆ.
ರಾಷ್ಟ್ರಪತಿ ಭವನವು 345 ಎಕರೆ ವಿಸ್ತೀರ್ಣ ಹೊಂದಿದ್ದು, ಈ ಪೈಕಿ 60 ಎಕರೆಯಲ್ಲಿ ಜೈವಿಕ ಉದ್ಯಾನ ನಿರ್ಮಿಸಲು ಪ್ರಸ್ತಾವನೆ ಇದೆ. ಜೊತೆಗೆ ಉಪರಾಷ್ಟ್ರಪತಿ ಹಾಗೂ ಪ್ರಧಾನಿ ನಿವಾಸವನ್ನು ಕೂಡ ನವೀಕರಿಸುವ ಸಾಧ್ಯತೆ ಇದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Sangli: ಮಹಾರಾಷ್ಟ್ರ ರಸಗೊಬ್ಬರ ಘಟಕದಲ್ಲಿ ವಿಷಾನಿಲ ಸೋರಿಕೆ: 3 ಸಾವು
ಮೆಜೆಂಟಾ ಮೊಬಿಲಿಟಿ ಸಂಸ್ಥೆ ವಾಹನ ಬಳಗಕ್ಕೆ ಟಾಟಾ ಏಸ್ ಇವಿ ಸೇರ್ಪಡೆ
Supreme Court: ತುರ್ತು ಪರಿಸ್ಥಿತಿ ವೇಳೆ ಸಂಸತ್ತು ಮಾಡಿದ್ದೆಲ್ಲ ತಪ್ಪಲ್ಲ
Gold Prices India:ಚಿನ್ನ ಮತ್ತೆ ದುಬಾರಿ: ದರ 870ರೂ. ಏರಿಕೆ: ಈಗ 10 ಗ್ರಾಂಗೆ 78,820 ರೂ.
Ullala: ದೇರಳಕಟ್ಟೆ: ರಸ್ತೆಯನ್ನು ಅತಿಕ್ರಮಿಸಿದ್ದ ಕಟ್ಟಡಗಳ ತೆರವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.