ರಾಜ್ಯಸಭೆಯಲ್ಲಿ 7 ಮಸೂದೆ ಅಂಗೀಕಾರ
Team Udayavani, Sep 23, 2020, 6:20 AM IST
ಹೊಸದಿಲ್ಲಿ: ಸಂಸತ್ ಅಧಿವೇಶನ ಸಮಾಪ್ತಿಯಾಗಲು ಒಂದು ದಿನ ಬಾಕಿ ಇರುವಂತೆಯೇ ಒಗ್ಗಟ್ಟು ಪ್ರದರ್ಶಿಸಿರುವ ವಿಪಕ್ಷಗಳು ಉಭಯ ಸದನಗಳನ್ನು ಬಹಿಷ್ಕರಿಸಿ ಸಭಾತ್ಯಾಗ ಮಾಡಿವೆ. ಇದರ ಬೆನ್ನಲ್ಲೇ ರಾಜ್ಯಸಭೆಯ ಇತಿಹಾಸದಲ್ಲಿಯೇ ಮೊದಲ ಬಾರಿಗೆ ಮೂರೂವರೆ ತಾಸುಗಳ ಅವಧಿಯಲ್ಲಿ ಮಂಗಳವಾರ ಏಳು ಪ್ರಮುಖ ಮಸೂದೆಗಳನ್ನು ಅಂಗೀಕರಿಸಲಾಯಿತು.
ಈ ಬೆಳವಣಿಗೆಯ ಬೆನ್ನಲ್ಲೇ ಅಮಾನತಾಗಿರುವ 8 ಸದಸ್ಯರು ಸಂಸತ್ ಭವನದ ಹೊರಗೆ ಸೋಮವಾರ ಆರಂಭಿಸಿದ್ದ ಅನಿರ್ದಿಷ್ಟಾವಧಿ ಧರಣಿಯನ್ನು ಕೈಬಿಟ್ಟಿದ್ದಾರೆ. ಕೃಷಿ ಮಸೂದೆಗಳ ವಿರುದ್ಧ ಹೋರಾಟವನ್ನು ಬೀದಿಗಿಳಿಯುವ ಮೂಲಕ ಮುಂದುವರಿಸುವುದಾಗಿ ಘೋಷಿಸಿದ್ದಾರೆ.
ಅಮಾನತು ಪ್ರಶ್ನಿಸಿ 8 ಸದಸ್ಯರು ಧರಣಿ ಆರಂಭಿಸಿದ್ದರು. ಸಂಸದರಾದ ಫಾರೂಕ್ ಅಬ್ದುಲ್ಲಾ, ಜಯಾ ಬಚ್ಚನ್, ಅಹ್ಮದ್ ಪಟೇಲ್, ದಿಗ್ವಿಜಯ್ ಸಿಂಗ್, ಶಶಿ ತರೂರ್ ಸಹಿತ ವಿಪಕ್ಷಗಳ ನಾಯಕರು ಧರಣಿನಿರತರ ಬಳಿಗೆ ಆಗಮಿಸಿ ಅವರಿಗೆ ಬೆಂಬಲ ಘೋಷಿಸಿದ್ದರು. ಇದೇ ವೇಳೆ ಎನ್‌ಸಿಪಿ ವರಿಷ್ಠ ಶರದ್ ಪವಾರ್ ಅವರು ಅಮಾನತಾದ ಸದಸ್ಯರಿಗೆ ಬೆಂಬಲವಾಗಿ ಮಂಗಳವಾರ ಇಡೀ ದಿನ ಆಹಾರ ಸೇವಿಸುವುದಿಲ್ಲ ಎಂದು ಘೋಷಿಸಿದ್ದಾರೆ.
ಯಾವೆಲ್ಲ ಮಸೂದೆ?
ಸಹಕಾರ ಕ್ಷೇತ್ರದ ಬ್ಯಾಂಕ್‌ಗಳನ್ನು ಆರ್‌ಬಿಐ ನಿಯಂತ್ರಣಕ್ಕೆ ಒಳಪಡಿಸುವ ಬ್ಯಾಂಕಿಂಗ್ ನಿಯಂತ್ರಣ ಮಸೂದೆಯ ಸಹಿತ 7 ಮಸೂದೆಗಳನ್ನು ಅಂಗೀಕರಿಸಲಾಗಿದೆ. ಮಸೂದೆಗಳ ಪೈಕಿ ಅಗತ್ಯ ವಸ್ತುಗಳ ಕಾಯ್ದೆ ವ್ಯಾಪ್ತಿಯಿಂದ ಬೇಳೆ-ಕಾಳುಗಳು, ಅಡುಗೆ ಎಣ್ಣೆ, ಈರುಳ್ಳಿ, ಬಟಾಟೆಯನ್ನು ಕೈಬಿಡುವ ತಿದ್ದುಪಡಿ ಮಸೂದೆ ಸೇರಿದೆ. ರಾಷ್ಟ್ರೀಯ ವಿಧಿ ವಿಜ್ಞಾನ ವಿ.ವಿ. ಮಸೂದೆ, ಕಂಪೆನಿಗಳ (ತಿದ್ದುಪಡಿ) ಮಸೂದೆ, ತೆರಿಗೆ ಮತ್ತು ಇತರ ಕಾಯ್ದೆಗಳು (ರಿಯಾ ಯಿತಿ ಮತ್ತು ಕೆಲವು ನಿಯಮ ಗಳಿಗೆ ತಿದ್ದುಪಡಿ) ಮಸೂದೆಗಳಿಗೆ ಅಂಗೀಕಾರ ನೀಡಲಾಗಿದೆ.
ವಿಪಕ್ಷಗಳು ಮತ್ತು ಆಡಳಿತ ಪಕ್ಷಗಳು ಕುಳಿತು ಮಾತನಾಡಿ ವಿಷಯ ಬಗೆಹರಿಸಿಕೊಳ್ಳಬೇಕು. ಈ ಮೂಲಕ ಸದನ ಸುಸೂತ್ರವಾಗಿ ನಡೆಯುವಂತೆ ನೋಡಿಕೊಳ್ಳಬೇಕು.
– ಎಚ್.ಡಿ. ದೇವೇಗೌಡ, ಮಾಜಿ ಪ್ರಧಾನಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Supreme Court: ತುರ್ತು ಪರಿಸ್ಥಿತಿ ವೇಳೆ ಸಂಸತ್ತು ಮಾಡಿದ್ದೆಲ್ಲ ತಪ್ಪಲ್ಲ
Delhi: ಕೇಜ್ರಿವಾಲ್‌ಗಿಂತ ಆತಿಶಿ ಸಾವಿರಪಟ್ಟು ಉತ್ತಮ: ಲೆ.ಗ.ಸಕ್ಸೇನಾ!
Uttar Pradesh ಈಗ ರಾಜಕಾರಣಿಗಳಿಂದ “ಬಿಳಿಟವಲ್’ ರಾಜಕೀಯ!
Andhra Pradesh: ಲಡ್ಡು ಪ್ರಸಾದ ವಿವಾದ: ತಿರುಪತಿಗೆ ಎಸ್‌ಐಟಿ ಭೇಟಿ
Choreographer ರೆಮೋ ಡಿಸೋಜಾ ವಿರುದ್ಧದ ಪ್ರಕರಣ ದೆಹಲಿ ಕೋರ್ಟ್ ಗೆ ವರ್ಗಾಯಿಸಿದ ಸುಪ್ರೀಂ
MUST WATCH
ಹೊಸ ಸೇರ್ಪಡೆ
Supreme Court: ತುರ್ತು ಪರಿಸ್ಥಿತಿ ವೇಳೆ ಸಂಸತ್ತು ಮಾಡಿದ್ದೆಲ್ಲ ತಪ್ಪಲ್ಲ
Gold Prices India:ಚಿನ್ನ ಮತ್ತೆ ದುಬಾರಿ: ದರ 870ರೂ. ಏರಿಕೆ: ಈಗ 10 ಗ್ರಾಂಗೆ 78,820 ರೂ.
Ullala: ದೇರಳಕಟ್ಟೆ: ರಸ್ತೆಯನ್ನು ಅತಿಕ್ರಮಿಸಿದ್ದ ಕಟ್ಟಡಗಳ ತೆರವು
Adani; ಆಸೀಸ್ ಕಲ್ಲಿದ್ದಲು ಗಣಿಯಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ಆರೋಪ
London: ಶಂಕಾಸ್ಪದ ಲಗೇಜ್ ಪತ್ತೆ: ಲಂಡನ್ ಏರ್‌ಪೋರ್ಟ್ ಖಾಲಿ ಮಾಡಿಸಿ ತನಿಖೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.