Parliament: ʼಪ್ಯಾಲೆಸ್ತೀನ್ʼ ಬ್ಯಾಗ್‌ನೊಂದಿಗೆ ಸಂಸತ್ತಿಗೆ ಆಗಮಿಸಿದ ಪ್ರಿಯಾಂಕಾ ಗಾಂಧಿ!
ಸಾಮಾಜಿಕ ಜಾಲತಾಣದಲ್ಲಿ ಫೋಟೋ ಹಂಚಿಕೊಂಡಿದ್ದ ಕಾಂಗ್ರೆಸ್ ವಕ್ತಾರೆ, ತೀಕ್ಷ್ಣ ಪ್ರತಿಕ್ರಿಯೆ ನೀಡಿದ ಬಿಜೆಪಿ
Team Udayavani, Dec 16, 2024, 6:59 PM IST
ಹೊಸದಿಲ್ಲಿ: ವಯನಾಡು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ ‘ಪ್ಯಾಲೆಸ್ತೀನ್’ ಎಂದು ಬರೆದ ಬ್ಯಾಗ್‌ನೊಂದಿಗೆ ಸೋಮವಾರ ಸಂಸತ್ತಿಗೆ ಆಗಮಿಸಿರುವುದು ಚರ್ಚೆಗೆ ಕಾರಣವಾಗಿದೆ.
ಪ್ರಿಯಾಂಕಾ ಹಾಕಿದ್ದ ಬ್ಯಾಗ್‌ನಲ್ಲಿ ದೊಡ್ಡ ಅಕ್ಷರಗಳಲ್ಲಿ ಪ್ಯಾಲೆಸ್ತೀನ್ ಎಂದು ಬರೆದಿರುವ ಜೊತೆಗೆ ಪ್ಯಾಲೆಸ್ತೀನಿಯರೊಂದಿಗಿನ ಒಗ್ಗಟ್ಟಿನ ಸಂಕೇತಗಳೂ ಇದ್ದವು. ಇದರಲ್ಲಿ ಕಲ್ಲಂಗಡಿ ಹಣ್ಣು ಕೂಡ ಇತ್ತು. ಇದು ಈ ಪ್ರದೇಶದಲ್ಲಿ ಪ್ರತಿರೋಧದ ಸುದೀರ್ಘ ಸ್ವೀಕೃತ ಸಂಕೇತ. ಜೊತೆಗೆ ಐಕಮತ್ಯ ಸಂಕೇತಿಸುವ ಲಾಂಛನಗಳು ಹೊಂದಿದ್ದವು. ಪ್ರಿಯಾಂಕಾ ಪ್ಯಾಲೆಸ್ತೀನಿಯನ್ ದೀರ್ಘಾವಧಿಯ ಪ್ರತಿಪಾದಕರಾಗಿದ್ದು, ಗಾಜಾದಲ್ಲಿನ ಸಂಘರ್ಷಕ್ಕೆ ತಮ್ಮ ವಿರೋಧವನ್ನೂ ಬಲವಾಗಿ ವ್ಯಕ್ತಪಡಿಸಿದ್ದಾರೆ.
ಪ್ರಿಯಾಂಕಾ ವಾದ್ರಾ ಸಂಸತ್ತಿನ ಆವರಣದಲ್ಲಿ ಬ್ಯಾಗ್ ಹಾಕಿ ಪ್ರವೇಶಿಸುವ ಫೋಟೋವನ್ನು ಕಾಂಗ್ರೆಸ್ ವಕ್ತಾರೆ ಡಾ.ಶಾಮಾ ಮೊಹಮ್ಮದ್ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.
ಇದಕ್ಕೆ ಬಿಜೆಪಿ ಸಂಸದ ಸಂಬಿತ್ ಪಾತ್ರ ಕೂಡ ತೀಕ್ಷ್ಣ ಪ್ರತಿಕ್ರಿಯೆ ನೀಡಿದ್ದಾರೆ. ಈ ಬಗ್ಗೆ ಬಿಜೆಪಿ ಸಂಸದ ಸಂಬಿತ್ ಪಾತ್ರಾ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ‘ಗಾಂಧಿ ಕುಟುಂಬ ಯಾವಾಗಲೂ ತುಷ್ಟೀಕರಣದ ಬ್ಯಾಗ್ ಹಿಡಿದುಕೊಂಡೇ ಓಡಾಡುತ್ತಿದೆ. ಈ ತುಷ್ಟೀಕರಣದ ಬ್ಯಾಗ್‌ನಿಂದಾಗಿಯೇ ಚುನಾವಣೆಯಲ್ಲಿ ಸೋಲುತ್ತಿದೆ’ ಎಂದರು.
Smt. @priyankagandhi Ji shows her solidarity with Palestine by carrying a special bag symbolizing her support.
A gesture of compassion, commitment to justice and humanity! She is clear that nobody can violate the Geneva convention pic.twitter.com/2i1XtQRd2T
— Dr. Shama Mohamed (@drshamamohd) December 16, 2024
ಪ್ಯಾಲೆಸ್ತೀನ್ ರಾಯಭಾರಿ ಭೇಟಿಯಾಗಿದ್ದ ಪ್ರಿಯಾಂಕಾ:
ಕೆಲವು ದಿನಗಳ ಹಿಂದೆ ಪ್ರಿಯಾಂಕಾ ಗಾಂಧಿ ಪ್ಯಾಲೆಸ್ತೀನ್ ರಾಯಭಾರ ಕಚೇರಿಯ ಉಸ್ತುವಾರಿ ಅಬೆದ್ ಎಲ್ರಾಜೆಗ್ ಅಬು ಜಾಜರ್‌ರನ್ನು ಭೇಟಿಯಾಗಿದ್ದರು. ಈ ವೇಳೆ ಅವರು ಕಪ್ಪು ಮತ್ತು ಬಿಳಿ ಬಣ್ಣದ ಕೆಫಿಯೇಹ್ (ಸಾಂಪ್ರದಾಯಿಕ ಪ್ಯಾಲೆಸ್ತೀನಿಯನ್ ಶಾಲು) ಧರಿಸಿದ್ದರು. ವಯನಾಡು ಕ್ಷೇತ್ರದಿಂದ ಗೆದ್ದಿದ್ದಕ್ಕಾಗಿ ಪ್ರಿಯಾಂಕಾ ಗಾಂಧಿಯವರನ್ನು ಅಭಿನಂದಿಸಲು ಅಬು ಜಾಜರ್ ಬಂದಿದ್ದರು. ಈ ವೇಳೆ ಚರ್ಚೆಯ ಸಮಯದಲ್ಲಿ ಜಾಜರ್, ಗಾಜಾದಲ್ಲಿ ಯುದ್ಧ ವಿರಾಮಕ್ಕೆ ಭಾರತ ಒತ್ತಾಯಿಸಬೇಕು ಮತ್ತು ಗಾಜಾ ಪಟ್ಟಿಯ ಪುನರ್ ನಿರ್ಮಾಣದಲ್ಲಿ ನೆರವು ನೀಡಬೇಕು ಎಂದರು.
ಪ್ರಿಯಾಂಕಾ ಗಾಂಧಿ ಕೂಡ ಗಾಜಾ ಪಟ್ಟಿಯ ಮೇಲಿನ ಇಸ್ರೇಲ್ ದಾಳಿಯನ್ನೂ ಟೀಕಿಸಿ ಇದು ಅಂತಾರಾಷ್ಟ್ರೀಯ ಕಾನೂನಿನ ಉಲ್ಲಂಘನೆ ಎಂದು ಹೇಳಿದ್ದಾರೆ. ಇದರೊಂದಿಗೆ ಗಾಜಾದಲ್ಲಿ ಶಾಂತಿ ಸ್ಥಾಪಿಸಲು ಮೋದಿ ಸರ್ಕಾರ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nehru letters ಹಿಂತಿರುಗಿಸುವಂತೆ ಸೋನಿಯಾ ಗಾಂಧಿಗೆ ಬಿಜೆಪಿ ಒತ್ತಾಯ
Tirumala:ಇನ್ಮುಂದೆ ಭಕ್ತರು ಒಂದೇ ಗಂಟೆಯಲ್ಲಿ ತಿರುಪತಿ ತಿಮ್ಮಪ್ಪನ ದರ್ಶನ ಪಡೆಯಬಹುದು..!
Amazon,Flipkart ವಿರುದ್ಧ ತನಿಖೆ: ಸುಪ್ರೀಂನಿಂದ ಎಲ್ಲಾ ಪ್ರಕರಣಗಳು ಕರ್ನಾಟಕ ಹೈಕೋರ್ಟ್‌ಗೆ
Sri Lanka; ಭಾರತದ ವಿರುದ್ದ ನಮ್ಮ ಭೂಮಿಯನ್ನು ಬಳಸಲು ಬಿಡೆವು: ಲಂಕಾ ಅಧ್ಯಕ್ಷ ಡಿಸಾನಾಯಕೆ
Constitution Debate:ಸಚಿವೆ ನಿರ್ಮಲಾ Balraj,Sultanpuri ಬಂಧನ ಘಟನೆ ಉಲ್ಲೇಖಿಸಿದ್ದೇಕೆ?
MUST WATCH
ಹೊಸ ಸೇರ್ಪಡೆ
Zakir Hussain ; ಸರಸ್ವತಿ, ಗಣಪತಿಯ ಆರಾಧಕರಾಗಿದ್ದರು ತಬಲಾ ಮಾಂತ್ರಿಕ
RTE: ದ್ವಿತೀಯ ಪಿಯುವೆರೆಗೆ ವಿಸ್ತರಣೆ ಪ್ರಸ್ತಾವನೆ ಇಲ್ಲ: ಸಚಿವ ಮಧು ಬಂಗಾರಪ್ಪ
Channapatna: ಕೆಲಸದ ಒತ್ತಡ ತಾಳಲಾರದೆ ಮುಖ್ಯ ಶಿಕ್ಷಕ ವಿಷ ಸೇವಿಸಿ ಆತ್ಮಹ*ತ್ಯೆ
Save Life: ಚಾರ್ಮಾಡಿ ಘಾಟ್‌ನಲ್ಲಿ ವ್ಯಕ್ತಿ ಆತ್ಮಹತ್ಯೆಗೆ ಯತ್ನ; ಜೀವ ರಕ್ಷಿಸಿದ ಪೊಲೀಸರು
ಸ್ಪೀಕರ್, ನನ್ನ ನಡುವೆ ಯಾವುದೇ ಭಿನ್ನಾಭಿಪ್ರಾಯ ಇಲ್ಲ: ಸಭಾಪತಿ ಹೊರಟ್ಟಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.