Parliament; ಸಂಸತ್ ಭವನ ಎದುರು ತಳ್ಳಾಟ; ಇಬ್ಬರು ಸಂಸದರಿಗೆ ಗಾಯ, ರಾಹುಲ್ ವಿರುದ್ದ ಆರೋಪ
Team Udayavani, Dec 19, 2024, 1:31 PM IST
ಹೊಸದಿಲ್ಲಿ: ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಅವರ ಅಂಬೇಡ್ಕರ್ ಹೇಳಿಕೆ ಬಳಿಕ ಆರಂಭವಾದ ಆಡಳಿತ ಪಕ್ಷ ಮತ್ತು ವಿಪಕ್ಷಗಳ ನಡುವಿನ ಹೋರಾಟ ಇದೀಗ ತಿರುವು ಪಡೆದಿದೆ. ಪ್ರತಿಭಟನೆಯ ವೇಳೆ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ (Rahul Gandhi) ಅವರು ಬಿಜೆಪಿ ಸಂಸದರೊಬ್ಬರನ್ನು ತಳ್ಳಿದ್ದಾರೆ ಎಂದು ಆರೋಪಿಸಲಾಗಿದ್ದು, ಗಾಯಗೊಂಡಿರುವ ಸಂಸದರನ್ನು ಆಸ್ಪತ್ರೆಗೆ ದಾಖಲಾದ ಘಟನೆ ಗುರುವಾರ (ಡಿ.19) ನಡೆದಿದೆ.
ಸಂಸತ್ತಿನ ಮಕರ ದ್ವಾರದ ಬಳಿ ಈ ಘಟನೆ ನಡೆದಿದೆ. ಬಿಜೆಪಿ ಸಂಸದ ಪ್ರತಾಪ್ ಚಂದ್ರ ಸಾರಂಗಿ ಮತ್ತು ಮುಕೇಶ್ ರಾಜಪುತ್ ಅವರು ಗಾಯಗೊಂಡಿದ್ದಾರೆ.
ಗಾಯಗೊಂಡಿರುವ ಬಿಜೆಪಿ ಸಂಸದ ಮುಖೇಶ್ ರಜಪೂತ್ ಸ್ಥಿತಿ ಗಂಭೀರವಾಗಿದೆ. ಅವರನ್ನು ದೆಹಲಿಯ ರಾಮ್ ಮನೋಹರ್ ಲೋಹಿಯಾ (ಆರ್‌ಎಂಎಲ್) ಆಸ್ಪತ್ರೆಯಲ್ಲಿ ಐಸಿಯುಗೆ ದಾಖಲಿಸಲಾಗಿದೆ ಎಂದು ಎಎನ್‌ಐ ವರದಿ ಮಾಡಿದೆ. ಸಾರಂಗಿ ಅವರನ್ನೂ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಪ್ರತಾಪ್ ಚಂದ್ರ ಸಾರಂಗಿ ಅವರ ತಲೆಗೆ ಗಾಯವಾಗಿದೆ. ರಾಹುಲ್ ಗಾಂಧಿ ಅವರು ಸಂಸದರೊಬ್ಬರನ್ನು ತಳ್ಳಿದರು. ಆ ಸಂಸದರು ನನ್ನ ಮೇಲೆ ಬಿದ್ದರು. ಇದರಿಂದ ನಾನು ಕೆಳಗೆ ಬಿದ್ದೆ. ನಾನು ಮೆಟ್ಟಿಲುಗಳ ಬಳಿ ನಿಂತಿದ್ದಾಗ ರಾಹುಲ್ ಗಾಂಧಿ ಬಂದು ನನ್ನ ಮೇಲೆ ಬಿದ್ದ ಸಂಸದರನ್ನು ತಳ್ಳಿದರು ಎಂದು ಸಾರಂಗಿ ಹೇಳಿದ್ದಾರೆ.
ಬಿಜೆಪಿ ಸಂಸದರ ಆರೋಪಗಳಿಗೆ ಪ್ರತಿಕ್ರಿಯಿಸಿದ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಬಿಜೆಪಿ ಸಂಸದರು ಸಂಸತ್ ಭವನದ ಪ್ರವೇಶವನ್ನು ತಡೆಯಲು ಪ್ರಯತ್ನಿಸಿದರು ಮತ್ತು ನನ್ನನ್ನು ತಳ್ಳಿದ್ದಾರೆ ಎಂದು ಆರೋಪಿಸಿದರು. “ನಾನು ಸಂಸತ್ತಿಗೆ ಪ್ರವೇಶಿಸಲು ಪ್ರಯತ್ನಿಸುತ್ತಿದ್ದೆ ಮತ್ತು ಬಿಜೆಪಿ ಸಂಸದರು ನನ್ನನ್ನು ತಡೆದರು, ನನ್ನನ್ನು ತಳ್ಳಿದರು ಮತ್ತು ನನಗೆ ಬೆದರಿಕೆ ಹಾಕಿದರು” ಎಂದು ಘಟನೆಯ ನಂತರ ರಾಹುಲ್ ಗಾಂಧಿ ಸುದ್ದಿಗಾರರಿಗೆ ತಿಳಿಸಿದರು.
मैं संसद के अंदर जाने की कोशिश कर रहा था।
लेकिन BJP के सांसद मुझे रोकने की कोशिश कर रहे थे, धक्का दे रहे थे और धमका रहे थे।
ये संसद है और अंदर जाना हमारा अधिकार है।
: नेता विपक्ष श्री @RahulGandhi pic.twitter.com/wfwAGAeruf
— Congress (@INCIndia) December 19, 2024
“ಇದು ಸಂಸತ್ತಿನ ಪ್ರವೇಶ ದ್ವಾರ. ನಮಗೆ ಒಳಗೆ ಹೋಗುವ ಹಕ್ಕಿದೆ. ಆದರೆ ಬಿಜೆಪಿ ಸದಸ್ಯರು ನಮ್ಮನ್ನು ತಡೆದರು” ಎಂದು ರಾಹುಲ್ ಹೇಳಿದರು.
ಸಂಸತ್ತಿನ ಮಕರ ದ್ವಾರದ ಬಳಿ ಪ್ರತಿಭಟನಾ ನಿರತ ಇಂಡಿಯಾ ಬ್ಲಾಕ್ ಸಂಸದರು ಬಿಜೆಪಿ ಸಂಸದರನ್ನು ಎದುರಾದರು. ಎರಡೂ ಕಡೆಯವರು ಘೋಷಣೆಗಳನ್ನು ಕೂಗಿ, ಪರಸ್ಪರ ಬೈಯಲು ಯತ್ನಿಸಿದರು. ಸಂಸದರು ಸಂಸತ್ ಭವನದತ್ತ ತೆರಳುತ್ತಿದ್ದಂತೆ ಹೈಡ್ರಾಮಾ ನಡೆಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು
ಕತ್ತರಿಸಿದ ಮೂಗನ್ನು ಚೀಲದಲ್ಲಿ ಇಟ್ಟು ಆಸ್ಪತ್ರೆಗೆ ಓಡಿ ಬಂದ ಮಹಿಳೆ, ಬೆಚ್ಚಿ ಬಿದ್ದ ವೈದ್ಯರು
Ambedkar row: ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜಕೀಯ ಬಿಟ್ಟು ಹೋಗಲಿ ಎಂದ ಲಾಲು ಪ್ರಸಾದ್
ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಪೊಲೀಸರು, ಎಲ್ಲಿ…? ಇಲ್ಲಿದೆ ನೋಡಿ ಮಾಹಿತಿ
K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ
MUST WATCH
ಹೊಸ ಸೇರ್ಪಡೆ
Atlee Kumar; ಸಲ್ಮಾನ್ ಖಾನ್ ಜತೆಗೆ ಅಟ್ಲಿ ಸಿನಿಮಾ
ಪ್ರಧಾನ ಸಂಪಾದಕ ನ್ಯೂಯಾರ್ಕ್ ನ ಬೆಂಕಿ ಬಸಣ್ಣ ವಿರಚಿತ ‘ವಿಶ್ವಕನ್ನಡ ಕೂಟಗಳ ಕೈಪಿಡಿ’ ಬಿಡುಗಡೆ
Tumkur: ನೀರಾವರಿ ವಿದ್ಯುತ್ ಬಿಲ್ ಪಾವತಿ ಮಾಡುವಂತೆ ಸಿದ್ದಗಂಗಾ ಮಠಕ್ಕೆ ಪತ್ರ
Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು
Kadur: ದೇಗುಲ ಕಂಪೌಂಡ್ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.