Parliament ;ದುಸ್ಸಾಹಸ ಮೆರೆದಿದ್ದು 6 ಮಂದಿ: ಇನ್ನಿಬ್ಬರಿಗಾಗಿ ತೀವ್ರ ಶೋಧ
ಯಾವುದೇ ಸಂಘಟನೆಯೊಂದಿಗೆ ಒಡನಾಟವಿಲ್ಲ?
Team Udayavani, Dec 13, 2023, 5:24 PM IST
ಹೊಸದಿಲ್ಲಿ: ಲೋಕಸಭಾ ಕಲಾಪದ ವೇಳೆ ಸಂಸತ್ ನೊಳಕ್ಕೆ ನುಗ್ಗಿ ದುಷ್ಕೃತ್ಯ ಎಸಗಲು ಒಟ್ಟು ಆರು ಮಂದಿ ಸಂಚು ರೂಪಿಸಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಲೋಕಸಭೆಯೊಳಗೆ ನುಗ್ಗಿದ ಇಬ್ಬರು ಸೇರಿ ಒಟ್ಟು ನಾಲ್ವರನ್ನು ಸಂಸತ್ ಭವನದ ಭದ್ರತಾ ಅಧಿಕಾರಿಗಳು ಬಂಧಿಸಿ ತೀವ್ರ ವಿಚಾರಣೆ ನಡೆಸುತ್ತಿದ್ದಾರೆ.
ಸಂಸತ್ ನೊಳಗೆ ಪಾಸ್ ಪಡೆದು ತೆರಳಿದ್ದ ಇಬ್ಬರು ಸಾರ್ವಜನಿಕ ಗ್ಯಾಲರಿಯಿಂದ ಸಂಸದರು ಕುಳಿತುಕೊಳ್ಳುವ ಪ್ರದೇಶಕ್ಕೆ ಜಿಗಿದು, ಹಳದಿ ಬಣ್ಣದ ಸ್ಪ್ರೇ ಹೊಡೆದು ಘೋಷಣೆಗಳನ್ನು ಕೂಗಿದ್ದರು. ಈ ವೇಳೆ ಸಂಸದರು ಇಬ್ಬರನ್ನು ಥಳಿಸಿದ್ದಾರೆ. ಭದ್ರತಾ ಪಡೆಗಳ ಕಣ್ತಪ್ಪಿಸಿ ಶೂ ಗಳ ಒಳಗೆ ಕಲರ್ ಸ್ಪ್ರೇ ತೆಗೆದುಕೊಂಡು ಹೋಗಿದ್ದರು ಎನ್ನುವುದು ಸ್ಪಷ್ಟವಾಗಿದೆ.
ಇದನ್ನೂ ಓದಿ: Parliament: ಸಂಸತ್ ಗೆ ನುಗ್ಗಿದ ಇಬ್ಬರ ಗುರುತು ಪತ್ತೆ; ಯಾರೀತ ಮೈಸೂರು ಮೂಲದ ಮನೋರಂಜನ್?
ಬಂಧನಕ್ಕೊಳಗಾದವರು ಉತ್ತರ ಭಾರತ ಮೂಲದ ಸಾಗರ್ ಶರ್ಮಾ ಮತ್ತು ಮೈಸೂರಿನ ಮನೋರಂಜನ್ ಡಿ ಎಂದು ಗುರುತಿಸಲಾಗಿದೆ.ಸಂಸತ್ತಿನ ಆವರಣದ ಹೊರಗೆ ಘೋಷಣೆಗಳನ್ನು ಕೂಗಿ ಕಲರ್ ಸ್ಪ್ರೇ ಹಾರಿಸಿದವರು ಅನ್ಮೋಲ್ ಮತ್ತು ನೀಲಂ ಎಂದು ಗುರುತಿಸಲಾಗಿದೆ. ಇನ್ನಿಬ್ಬರು ಸಂಚಿನಲ್ಲಿ ಭಾಗಿಯಾಗಿದ್ದು ಪೊಲೀಸರು ತೀವ್ರ ಶೋಧ ನಡೆಸುತ್ತಿದ್ದಾರೆ.
ದೆಹಲಿಯ ಹೊರಗಿನಿಂದ ಆಗಮಿಸಿದ ಎಲ್ಲಾ ಐವರು ಗುರುಗ್ರಾಮ್‌ನಲ್ಲಿ ಲಲಿತ್ ಝಾ ಎಂಬವನ ನಿವಾಸದಲ್ಲಿ ಒಟ್ಟಿಗೆ ತಂಗಿದ್ದರು ಎಂದು ಮೂಲಗಳು ತಿಳಿಸಿವೆ. ಆರನೇ ವ್ಯಕ್ತಿಯ ಗುರುತು ಇನ್ನಷ್ಟೇ ಪತ್ತೆಯಾಗಬೇಕಿದೆ. ನಿಖರವಾಗಿ ಯೋಜಿಸಿಯೇ ಕೃತ್ಯ ಎಸಗಲಾಗಿದೆ ಎಂದು ಮೂಲಗಳು ತಿಳಿಸಿವೆ.
ಮೂಲಗಳ ಪ್ರಕಾರ ಎಲ್ಲರಿಗೂ ಪರಸ್ಪರ ಪರಿಚಯವಿರುವುದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಅವರು ಸಾಮಾಜಿಕ ಮಾಧ್ಯಮದಲ್ಲಿ ಪರಸ್ಪರ ಸಂಪರ್ಕ ಹೊಂದಿದ್ದರು ಮತ್ತು ಯೋಜನೆಯನ್ನು ರೂಪಿಸಿದ್ದರು ಎಂದು ಮೂಲಗಳು ತಿಳಿಸಿವೆ.
“ನಾವಾಗಿಯೇ ಸಂಸತ್ತನ್ನು ತಲುಪಿದ್ದು, ನಮಗೆ ಯಾವುದೇ ಸಂಘಟನೆಯೊಂದಿಗೆ ಒಡನಾಟವಿಲ್ಲ ಎಂದು ಅವರು ಹೇಳಿರುವುದಾಗಿ, ವಿಚಾರಣೆಗಾಗಿ ವಿಶೇಷ ತಂಡವನ್ನು ರಚಿಸಲಾಗುತ್ತಿದೆ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
DGP: ಮಹಾರಾಷ್ಟ್ರದ ನೂತನ ಡಿಜಿಪಿ ಆಗಿ ಐಪಿಎಸ್ ಅಧಿಕಾರಿ ಸಂಜಯ್ ವರ್ಮಾ ನೇಮಕ
Threat: ತಪ್ಪಾಯಿತೆಂದು ಕ್ಷಮೆ ಕೇಳಿ ಇಲ್ಲ 5ಕೋಟಿ ನೀಡಿ.. ಸಲ್ಮಾನ್ ಖಾನ್ ಗೆ ಮತ್ತೆ ಬೆದರಿಕೆ
Maharashtra poll ; ಕಣದಲ್ಲಿ ಉಳಿದಿದ್ದು 4,140 ಅಭ್ಯರ್ಥಿಗಳು
DMK ನಾಶವೇ ಹೊಸ ಪಕ್ಷದ ಉದ್ದೇಶ: ವಿಜಯ್ ವಿರುದ್ಧ ಸ್ಟಾಲಿನ್ ಕಿಡಿ
WhatsApp ನಲ್ಲಿ ಧರ್ಮ ಆಧರಿತ ಗುಂಪು: ಕೇರಳ ಐಎಎಸ್ ಅಧಿಕಾರಿ ದೂರು
MUST WATCH
ಹೊಸ ಸೇರ್ಪಡೆ
Vyasanagar: ಮಣ್ಣಿನ ಒಳ ರಸ್ತೆಗಳಿಗೆ ಬೇಕು ಬೀದಿದೀಪ
Mangalore: ಅಡ್ಯಾರ್ ಕಣ್ಣೂರಿನಲ್ಲಿ ತ್ಯಾಜ್ಯ ಸುಡುವಿಕೆಯಿಂದ ಪರಿಸರ ಮಾಲಿನ್ಯ
Dandeli ನಗರ ಠಾಣೆಯ ತನಿಖಾ ವಿಭಾಗದ ಪಿಎಸ್ಐಯಾಗಿ ಕಿರಣ್ ಪಾಟೀಲ್ ಅಧಿಕಾರ ಸ್ಬೀಕಾರ
Thirthahalli: ತುಂಗಾ ನದಿಯಲ್ಲಿ ಅಪರಿಚಿತ ಮೃತದೇಹ ಪತ್ತೆ
Waqf issue: ಅಲ್ಲಾನ ಹೆಸರಲ್ಲಿ ಅಲ್ಲಾನಿಗೆ ದೋಖಾ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.