ನಾಳೆಯಿಂದ ಸಂಸತ್ ಅಧಿವೇಶನ
ಪೌರತ್ವ ಮಸೂದೆ ಅಸ್ತು ನಿರೀಕ್ಷೆ ಸರ್ವ ಪಕ್ಷ ಸಭೆ ನಡೆಸಿದ ಸ್ಪೀಕರ್
Team Udayavani, Nov 18, 2019, 6:15 AM IST
ಹೊಸದಿಲ್ಲಿ: ಸೋಮವಾರದಿಂದ ಸಂಸತ್ತಿನ ಚಳಿಗಾಲದ ಅಧಿವೇಶನ ಆರಂಭವಾಗಲಿದ್ದು, ಮುಸ್ಲಿಮೇತರ ವಲಸಿಗರಿಗೆ ಭಾರತೀಯ ನಾಗರಿಕತ್ವವನ್ನು ಒದಗಿಸುವಂಥ ವಿವಾದಾತ್ಮಕ ಪೌರತ್ವ (ತಿದ್ದು ಪಡಿ) ಮಸೂದೆಯನ್ನು ಸಂಸತ್‌ನ ಚಳಿಗಾಲದ ಅಧಿವೇಶನದಲ್ಲಿ ಮಂಡಿಸಿ, ಅಂಗೀಕಾರ ಪಡೆಯಲು ಕೇಂದ್ರ ಸರಕಾರ ಉದ್ದೇಶಿಸಿದೆ.
ಚಳಿಗಾಲದ ಅಧಿವೇಶನವು ನ. 18ರಿಂದ ಡಿ.13ರ ವರೆಗೆ ನಡೆಯಲಿದೆ. ಮಸೂದೆಯನ್ನು ಅಧಿವೇಶನದ ಅಜೆಂಡಾವಾಗಿ ಸರಕಾರ ಪಟ್ಟಿ ಮಾಡಿದೆ. ಬಿಜೆಪಿ ನೇತೃತ್ವದ ಎನ್‌ಡಿಎ ಸರಕಾರವು ಹಿಂದಿನ ಅವಧಿಯಲ್ಲೇ ಈ ಮಸೂದೆಗೆ ಅಂಗೀಕಾರ ಪಡೆಯಲು ಪ್ರಯತ್ನಿಸಿತ್ತಾದರೂ ವಿಪಕ್ಷಗಳ ತೀವ್ರ ವಿರೋಧದ ಹಿನ್ನೆಲೆಯಲ್ಲಿ ಅದು ವಿಫಲವಾಗಿತ್ತು. ಈ ಮಸೂದೆಯು ಧಾರ್ಮಿಕ ತಾರತಮ್ಯದಿಂದ ಕೂಡಿದೆ ಎಂದು ಆರೋಪಿಸಿದ್ದ ವಿಪಕ್ಷಗಳು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದವು.
ಸುಗಮ ಕಲಾಪಕ್ಕೆ ಕೋರಿಕೆ
ಚಳಿಗಾಲದ ಅಧಿವೇಶನ ಆರಂಭದ ಹಿನ್ನೆಲೆಯಲ್ಲಿ ಶನಿವಾರ ಲೋಕಸಭೆ ಸ್ಪೀಕರ್ ಓಂ ಬಿರ್ಲಾ ನೇತೃತ್ವದಲ್ಲಿ ಸರ್ವ ಪಕ್ಷಗಳ ಸಭೆ ನಡೆಯಿತು. ಸುಗಮ ಕಲಾಪಕ್ಕೆ ಎಲ್ಲ ಪಕ್ಷಗಳೂ ಸಹಕಾರ ನೀಡಬೇಕು ಎಂದು ಸಭೆಯಲ್ಲಿ ಸ್ಪೀಕರ್ ಓಂ ಬಿರ್ಲಾ ಮನವಿ ಮಾಡಿದ್ದಾರೆ. ಎಲ್ಲ ಪಕ್ಷಗಳೂ ಸಾರ್ವ ಜನಿಕರ ಹಿತಾಸಕ್ತಿಯಿರುವ ವಿಚಾರಗಳ ಕುರಿತು ಚರ್ಚೆ ನಡೆಸಲಿ ಎಂದು ಸಲಹೆ ನೀಡಿದ್ದಾರೆ. ಸಭೆಯಲ್ಲಿ ಮೋದಿ ಅವರೂ ಭಾಗಿಯಾಗಿದ್ದರು.
ಏನಿದೆ ಮಸೂದೆಯಲ್ಲಿ ?
ಈ ಮಸೂದೆಯ ಪ್ರಕಾರ ಧಾರ್ಮಿಕ ಕಿರುಕುಳ ತಾಳಲಾರದೇ ಬಾಂಗ್ಲಾದೇಶ, ಪಾಕಿಸ್ಥಾನ ಮತ್ತು ಅಫ್ಘಾನಿಸ್ತಾನದಿಂದ ವಲಸೆ ಬಂದಿರುವಂಥ ಮುಸ್ಲಿಮೇತರರಿಗೆ ಅಂದರೆ, ಹಿಂದೂಗಳು, ಜೈನರು, ಕ್ರೈಸ್ತರು, ಸಿಕ್ಖರು, ಬೌದ್ಧ ಧರ್ಮೀಯರು ಮತ್ತು ಪಾರ್ಸಿಗಳಿಗೆ ಭಾರತದ ಪೌರತ್ವವನ್ನು ಒದಗಿಸಲಾಗುತ್ತದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Henley Passport Index: ಸಿಂಗಾಪುರಕ್ಕೆ ಮೊದಲ ಸ್ಥಾನ: ಭಾರತದ ಪಾಸ್‌ಪೋರ್ಟ್ ಎಷ್ಟು ಸದೃಢ?
Dense Fog: ದೆಹಲಿ-ಲಖನೌ ಹೆದ್ದಾರಿಯಲ್ಲಿ ಸರಣಿ ಅಪಘಾತ, ವಿಮಾನ, ರೈಲು ಸಂಚಾರದಲ್ಲಿ ವ್ಯತ್ಯಯ
ಸೊಸೆಯಾಗಿ ಬರಬೇಕಾಗಿದ್ದವಳನ್ನೇ ಮದುವೆಯಾದ ಅಪ್ಪ… ಬೇಸರದಿಂದ ಸನ್ಯಾಸಿಯಾಗಲು ಹೊರಟ ಮಗ
Bhopal: ಬಿಜೆಪಿ ಮಾಜಿ ಶಾಸಕ ಸಿಂಗ್ ನಿವಾಸದ ಮೇಲೆ ಐಟಿ ದಾಳಿ; ನಗದು, 3 ಮೊಸಳೆ ಪತ್ತೆ!
ಪರೀಕ್ಷೆಯಿಂದ ತಪ್ಪಿಸಿಕೊಳ್ಳಲು 23ಶಾಲೆಗೆ ಬಾಂಬ್ ಬೆದರಿಕೆ ಹಾಕಿದ್ದ 12ನೇ ತರಗತಿ ವಿದ್ಯಾರ್ಥಿ
MUST WATCH
ಹೊಸ ಸೇರ್ಪಡೆ
Vijayapura: ಕರ್ನಾಟಕ ಸಾವಿನ ಮನೆಯಾಗಿದೆ: ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
Viral: ಇದು ಇರುವೆಗಳ ಎಂಜಿನಿಯರಿಂಗ್ ಕೌಶಲ್ಯ! ನೀರು ದಾಟಲು ಇರುವೆಗಳ ಸೇತುವೆ ನಿರ್ಮಾಣ
Indian Cricket: ಕ್ರಿಕೆಟ್ ಜೀವನಕ್ಕೆ ಗುಡ್ ಬೈ ಹೇಳಿದ ಆರ್‌ಸಿಬಿ ಮಾಜಿ ಆಟಗಾರ
Nature: ಶ್ರೀಮಂತನಾದರೂ, ಬಡವನಾದರೂ ಪ್ರಕೃತಿಗೆ ಅವಲಂಬಿಯೇ ಅಲ್ಲವೇ?
Sandalwood: ‘ಕೋರ’ ಚಿತ್ರದ ಟ್ರೇಲರ್ ಬಂತು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.