Mishap; ಆಂಧ್ರ ಪ್ರದೇಶದಲ್ಲಿ ರೈಲುಗಳ ಢಿಕ್ಕಿ: 8 ಪ್ರಯಾಣಿಕರು ಮೃತ್ಯು ,ಹಲವರಿಗೆ ಗಾಯ
Team Udayavani, Oct 29, 2023, 9:08 PM IST
ವಿಶಾಖಪಟ್ಟಣಂ : ಆಂಧ್ರ ಪ್ರದೇಶದಲ್ಲಿ ಭಾನುವಾರ ಸಂಜೆ ರೈಲು ಅವಘಡ ಸಂಭವಿಸಿದ್ದು, ವಿಶಾಖಪಟ್ಟಣಂ-ಪಲಾಸ ಪ್ಯಾಸೆಂಜರ್ ರೈಲು ಮತ್ತು ವಿಶಾಖಪಟ್ಟಣಂ-ರಗಡ ಪ್ಯಾಸೆಂಜರ್ ರೈಲಿನ ನಡುವೆ ಹಿಂಬದಿ ಢಿಕ್ಕಿ ಸಂಭವಿಸಿದ್ದು,8 ಪ್ರಯಾಣಿಕರು ಮೃತ ಪಟ್ಟಿದ್ದು, ಹಲವು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿರುವ ಬಗ್ಗೆ ವರದಿಯಾಗಿದೆ.
ಅಪಘಾತದಲ್ಲಿ 3 ಕೋಚ್‌ಗಳು ಹಳಿ ತಪ್ಪಿದ್ದು, ರಕ್ಷಣಾ ಕಾರ್ಯಾಚರಣೆಗಳು ನಡೆಯುತ್ತಿವೆ, ಸಹಾಯ ಮತ್ತು ಆಂಬ್ಯುಲೆನ್ಸ್‌ಗಾಗಿ ಸ್ಥಳೀಯ ಆಡಳಿತ ಮತ್ತು ಎನ್‌ಡಿಆರ್‌ಎಫ್‌ಗೆ ತಿಳಿಸಲಾಗಿದೆ. ಅಪಘಾತ ಪರಿಹಾರಕ್ಕಾಗಿ ತಂಡಗಳು ರೈಲುಗಳ ಸ್ಥಳಕ್ಕೆ ತಲುಪಿವೆ ಎಂದು ವಿಭಾಗೀಯ ರೈಲ್ವೆ ವ್ಯವಸ್ಥಾಪಕರು ತಿಳಿಸಿದ್ದಾರೆ.
ಆಂಧ್ರಪ್ರದೇಶದ ಮುಖ್ಯಮಂತ್ರಿ ವೈ.ಎಸ್.ಜಗನ್ ಮೋಹನ್ ರೆಡ್ಡಿ ಅವರು ತತ್ ಕ್ಷಣ ಪರಿಹಾರ ಕ್ರಮಗಳನ್ನು ಕೈಗೊಳ್ಳಲು ಮತ್ತು ವಿಜಯನಗರದ ಹತ್ತಿರದ ಜಿಲ್ಲೆಗಳಾದ ವಿಶಾಖಪಟ್ಟಣಂ ಮತ್ತು ಅನಕಾಪಲ್ಲಿಯಿಂದ ಸಾಧ್ಯವಾದಷ್ಟು ಆಂಬ್ಯುಲೆನ್ಸ್‌ಗಳನ್ನು ಕಳುಹಿಸಲು, ಉತ್ತಮ ವೈದ್ಯಕೀಯ ಸೇವೆಯನ್ನು ಒದಗಿಸಲು ಹತ್ತಿರದ ಆಸ್ಪತ್ರೆಗಳಲ್ಲಿ ಎಲ್ಲ ರೀತಿಯ ವ್ಯವಸ್ಥೆಗಳನ್ನು ಮಾಡಲು ಆದೇಶಿಸಿದ್ದಾರೆ.
ಹೆಚ್ಚಿನ ವಿವರ ನಿರೀಕ್ಷಿಸಲಾಗುತ್ತಿದೆ…
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai Coast: ಗೇಟ್‌ವೇ ಆಫ್ ಇಂಡಿಯಾ ಬಳಿ ದೋಣಿ ದುರಂತ: 13 ಮಂದಿ ದುರ್ಮರಣ!
Narendra Modi: 43 ವರ್ಷದ ಬಳಿಕ ಭಾರತ ಪ್ರಧಾನಿ ಕುವೈಟ್ ಭೇಟಿ: 21ರಿಂದ ಮೋದಿ ಪ್ರವಾಸ
GST: ಜೊಮ್ಯಾಟೊ, ಸ್ವಿಗ್ಗಿ ತಾಣಗಳ ಮೇಲೆ ಶೇ.5 ಜಿಎಸ್‌ಟಿ ಕಡಿತ?
Ambedkar Remarks: ಕನಸಲ್ಲೂ ಅಂಬೇಡ್ಕರ್‌ರನ್ನು ಅವಮಾನಿಸಿಲ್ಲ: ಅಮಿತ್ ಶಾ
Hydarabad: ಪುಷ್ಪ-2 ಚಿತ್ರದ ಪ್ರದರ್ಶನ ವೇಳೆ ಗಾಯಗೊಂಡಿದ್ದ ಬಾಲಕನ ಸ್ಥಿತಿ ಗಂಭೀರ
MUST WATCH
ಹೊಸ ಸೇರ್ಪಡೆ
Mangaluru: ಆನ್‌ಲೈನ್ ಗೇಮ್‌ನಲ್ಲಿ ವಂಚಕರ ಪರಿಚಯ; ಜಾಲ ಸೇರಿದ್ದ ಯುವಕ
Mangaluru: ಸಾಲಗಾರನ ಆತ್ಮಹ*ತ್ಯೆಗೆ ಪ್ರಚೋದನೆ ಆರೋಪ: ಎಂಸಿಸಿ ಬ್ಯಾಂಕ್ ಅಧ್ಯಕ್ಷನ ಬಂಧನ
Over Remarks: ʼಸಿದ್ದರಾಮೋತ್ಸವʼ ಮಾಡಿಸುವ ನೀವು ‘ಅಂಬೇಡ್ಕರ್ ಉತ್ಸವ’ ಮಾಡಲ್ಲ: ಬಿಜೆಪಿ
Mumbai Coast: ಗೇಟ್‌ವೇ ಆಫ್ ಇಂಡಿಯಾ ಬಳಿ ದೋಣಿ ದುರಂತ: 13 ಮಂದಿ ದುರ್ಮರಣ!
Daily Horoscope: ಸಕಾರಾತ್ಮಕ ಚಿಂತನೆಯಿಂದ ಯಶಸ್ಸು, ಪ್ರತಿಭೆ ವೃದ್ಧಿಗೆ ಅವಕಾಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.