ಅಫ್ಘಾನ್ ನಿಂದ ಏರ್ ಲಿಫ್ಟ್: ವಿಮಾನದಲ್ಲಿ ಮೊಳಗಿದ ‘ಭಾರತ್ ಮಾತಾ ಕಿ ಜೈ’ ಘೋಷಣೆ
Team Udayavani, Aug 22, 2021, 8:51 AM IST
ಹೊಸದಿಲ್ಲಿ: ಕಾಬೂಲ್‌ನಿಂದ ಸ್ಥಳಾಂತರಿಸಲಾದ ಭಾರತೀಯರನ್ನು ಹೊತ್ತ ಎರಡು ವಿಮಾನಗಳು ಇಂದು ಬೆಳಿಗ್ಗೆ ತಜಕಿಸ್ತಾನದ ರಾಜಧಾನಿ ದುಶಾನ್ ಬೆ ಮತ್ತು ಕತಾರ್ ನ ದೋಹಾದಿಂದ ದೆಹಲಿಗೆ ಬಂದಿಳಿದವು. ಭಾರತೀಯ ವಾಯುಪಡೆಯ ಮೂರನೇ ವಿಶೇಷ ವಾಪಸಾತಿ ವಿಮಾನ – 107 ಭಾರತೀಯರು ಸೇರಿದಂತೆ 168 ಪ್ರಯಾಣಿಕರನ್ನು ಹೊತ್ತೊಯ್ದು ಕಾಬೂಲ್‌ನಿಂದ ದೆಹಲಿಗೆ ತೆರಳಿದೆ.
ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ಅರಿಂದಮ್ ಬಾಗ್ಚಿ ಅವರು ಕೆಲವು ಚಿತ್ರಗಳನ್ನು ಟ್ವಿಟರ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.
ಇದನ್ನೂ ಓದಿ:ಅಫ್ಘಾನ್ ವಿದ್ಯಾರ್ಥಿಗಳ ಆತಂಕ ಆಲಿಸಿದ ಪೊಲೀಸ್ ಆಯುಕ್ತ: ಸುರಕ್ಷೆಯ ಭರವಸೆ ನೀಡಿದ ಕಮಿಷನರ್
ಏರ್ ಇಂಡಿಯಾ ಮತ್ತು ಇಂಡಿಗೋ ವಿಮಾನಗಳ ಮೂಲಕ ಸ್ಥಳಾಂತರಿಸುವ ಪ್ರಯತ್ನಗಳ ವಿವರಗಳನ್ನು ಅವರು ಪೋಸ್ಟ್ ಮಾಡಿದ್ದಾರೆ. ಅವರು ಒಂದು ಸಣ್ಣ ವೀಡಿಯೋ ಕ್ಲಿಪ್ ಅನ್ನು ಸಹ ಪೋಸ್ಟ್ ಮಾಡಿದ್ದು, ಅದರಲ್ಲಿ ಸ್ಥಳಾಂತರಿಸಿದವರು “ಭಾರತ್ ಮಾತಾ ಕಿ ಜೈ” ಎಂದು ಘೋಷಣೆ ಕೂಗಿ ಸಂತಸಪಟ್ಟರು.
#WATCH | Evacuated Indians from Kabul, Afghanistan in a flight chant ‘Bharat Mata Ki Jai’ on board
“Jubilant evacuees on their journey home,”tweets MEA Spox
Flight carrying 87 Indians & 2 Nepalese nationals departed for Delhi from Tajikistan after they were evacuated from Kabul pic.twitter.com/C3odcCau5D
— ANI (@ANI) August 21, 2021
ಎಲ್ಲಾ ಪ್ರಯಾಣಿಕರು ವಿಮಾನ ನಿಲ್ದಾಣದಲ್ಲೇ ಆರ್‌ಟಿ-ಪಿಸಿಆರ್ ಪರೀಕ್ಷೆಗೆ ಒಳಗಾಗಬೇಕಾಗುತ್ತದೆ ಎಂದು ಸರ್ಕಾರದ ಉನ್ನತ ಮೂಲಗಳು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Train ಜನಶತಾಬ್ದಿ ಎಕ್ಸ್‌ಪ್ರೆಸ್‌ನಲ್ಲಿ ಹಾವು ಪ್ರತ್ಯಕ್ಷ: ತನಿಖೆಗೆ ಆದೇಶ
Himachal Pradesh;ನಷ್ಟದಲ್ಲಿರುವ ಹೊಟೇಲ್ ಮುಚ್ಚಲು ಹೈಕೋರ್ಟ್ ಆದೇಶ
Waqf ಮಸೂದೆ ಕರಡು ವರದಿ ಸಿದ್ಧ: ಜೆಪಿಸಿ ಅಧ್ಯಕ್ಷ ಪಾಲ್ ಘೋಷಣೆ
Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!
Adani Group; ಲಂಚದ ಆರೋಪ ಆಧಾರ ರಹಿತ, ಕಾನೂನು ಕ್ರಮ ಕೈಗೊಳ್ಳುತ್ತೇವೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.