Passes Away: ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ವಿಧಿವಶ
ದೇಶದ ಆರ್ಥಿಕ ವ್ಯವಸ್ಥೆ ಸುಧಾರಣೆ ಶಿಲ್ಪಿ ದಿಲ್ಲಿ ಏಮ್ಸ್ ಆಸ್ಪತ್ರೆಯಲ್ಲಿ ನಿಧನ
Team Udayavani, Dec 26, 2024, 10:35 PM IST
ಹೊಸದಿಲ್ಲಿ: ತೀವ್ರ ಆರೋಗ್ಯ ಹದಗೆಟ್ಟ ಹಿನ್ನೆಲೆಯಲ್ಲಿ ಗುರುವಾರ ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದ ಮನಮೋಹನ್ ಸಿಂಗ್ (92 ವರ್ಷ) ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ.
ಅವರಿಗೆ 92 ವರ್ಷ ವಯಸ್ಸಾಗಿತ್ತು. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಮನ ಮೋಹನ್ ಸಿಂಗ್ ಕಳೆದ ಕೆಲವು ತಿಂಗಳುಗಳಿಂದ ಆಸ್ಪತ್ರೆಗೆ ದಾಖಲಾಗಿ ಬಿಡುಗಡೆ ಆಗುತ್ತಿದ್ದರು. ಗುರುವಾರ ಸಂಜೆಯ ವೇಳೆಗೆ ಆರೋಗ್ಯದಲ್ಲಿ ತೀವ್ರ ಏರುಪೇರು ಉಂಟಾಗಿದ್ದರಿಂದ ದಿಲ್ಲಿಯ ಏಮ್ಸ್‌ಗೆ ದಾಖಲಿಸಲಾಗಿತ್ತು.
ಮನಮೋಹನ್ ಸಿಂಗ್ ಅವರು ಇತ್ತೀಚಿನ ವರ್ಷಗಳಲ್ಲಿ ಆರೋಗ್ಯದ ಕಾರಣಗಳಿಂದ ರಾಜಕೀಯದಿಂದ ದೂರವಿದ್ದರು ಮತ್ತು 2024ರ ಆರಂಭದಿಂದಲೂ ಅವರ ಆರೋಗ್ಯ ಚೆನ್ನಾಗಿರಲಿಲ್ಲ. 2024ರ ಜನವರಿಯಲ್ಲಿ ಅವರು ಕೊನೆಯ ಬಾರಿಗೆ ಸಾರ್ವಜನಿಕವಾಗಿ ಕಾಣಿಸಿಕೊಂಡಿದ್ದರು. ಪುತ್ರಿಯ ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಭಾಗಿಯಾಗಿದ್ದರು.
ಡಾ. ಮನಮೋಹನ್ ಸಿಂಗ್ ಅವರು ಪತ್ನಿ ಗುರುಶರಣ್ ಕೌರ್ ಮತ್ತು ಮೂವರು ಪುತ್ರಿಯರ ಅಗಲಿದ್ದಾರೆ. 1991ರಲ್ಲಿ ರಾಜ್ಯಸಭೆಗೆ ಪ್ರವೇಶಿಸುವ ಮೂಲಕ ರಾಜಕೀಯ ಇನ್ನಿಂಗ್ಸ್ ಆರಂಭಿಸಿ, 2024ರ ಏಪ್ರಿಲ್ನಲ್ಲಿ ರಾಜ್ಯಸಭೆ ಅಧಿಕಾರವಧಿ ಅಂತ್ಯವಾಗಿತ್ತು. ಈ ಮೂಲಕ ಅವರು ಸಂಸತ್ತಿನ ಮೇಲ್ಮನೆಯಲ್ಲಿ 33 ವರ್ಷ ಕಾಲ ಕಾರ್ಯನಿರ್ವಹಿಸಿದ್ದರು.
ಆರ್ಥಿಕ ಸುಧಾರಣೆಯ ಶಿಲ್ಪಿ:
ದೇಶದ ಆರ್ಥಿಕ ಸುಧಾರಣೆಗಳ ದಿಟ್ಟ ಹೆಜ್ಜೆ ಕೈಗೊಂಡು, ಆಧುನಿಕ ಭಾರತದ ಆರ್ಥಿಕತೆಯ ರೂವಾರಿ ಎನಿಸಿದ್ದ ಸಿಂಗ್, 1991ರ ಅಕ್ಟೋಬರ್‌ನಲ್ಲಿ ಮೊದಲ ಬಾರಿಗೆ ರಾಜ್ಯಸಭೆ ಪ್ರವೇಶಿಸಿದ್ದರು. ಅವರು 1991ರಿಂದ 1996ರವರೆಗೆ ಪಿ.ವಿ.ನರಸಿಂಹ ರಾವ್ ನೇತೃತ್ವದ ಸಂಪುಟದಲ್ಲಿ ಹಣಕಾಸು ಸಚಿವರಾಗಿದ್ದರು. ಬಳಿಕ 2004 ರಿಂದ 2014ರವರೆಗೆ ದೇಶದ ಪ್ರಧಾನಿಯಾಗಿದ್ದರು.
ಆರಂಭಿಕ ಜೀವನ:
ಮನಮೋಹನ್ ಸಿಂಗ್ 1932ರ ಸೆ. 26ರಂದು ಅವಿಭಜಿತ ಭಾರತದ ಪಂಜಾಬ್ ಪ್ರಾಂತ್ಯದಲ್ಲಿ ಜನಿಸಿದ್ದರು. ಡಾ. ಸಿಂಗ್ ಮೆಟ್ರಿಕ್ಯುಲೇಷನ್ ಪರೀಕ್ಷೆಯನ್ನು 1948ರಲ್ಲಿ ಪಂಜಾಬ್ ವಿಶ್ವವಿದ್ಯಾಲಯದಿಂದ ಪೂರ್ಣಗೊಳಿಸಿದ್ದರು. ಅವರ ಶೈಕ್ಷಣಿಕ ಸಾಧನೆ ಅವರನ್ನು ಪಂಜಾಬ್ ನಿಂದ ಇಂಗ್ಲೆಂಡ್ ನ ಕೇಂಬ್ರಿಜ್ ವಿಶ್ವವಿದ್ಯಾಲಯಕ್ಕೆ ಕರೆದೊಯಿತು. ಅಲ್ಲಿ ಅವರು 1957ರಲ್ಲಿ ಪ್ರಥಮ ದರ್ಜೆಯೊಂದಿಗೆ ಅರ್ಥಶಾಸ್ತ್ರದಲ್ಲಿ ಆನರ್ಸ್ ಪದವಿ ಪಡೆದರು. ನಂತರ ಅವರು 1962ರಲ್ಲಿ ಆಕ್ಸ್ ಫರ್ಡ್ ವಿಶ್ವವಿದ್ಯಾಲಯದ ನಫ್ ಫೀಲ್ಡ್ ಕಾಲೇಜಿನಿಂದ ಅರ್ಥಶಾಸ್ತ್ರದಲ್ಲಿ ಡಿ.ಫಿಲ್ ಗೌರವ ಪಡೆದರು.
ಗಣ್ಯರಿಂದ ಸಂತಾಪ:
ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ನಿಧನಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹಾಗೂ ಹಲವು ಕೇಂದ್ರ ಸಚಿವರು, ಕಾಂಗ್ರೆಸ್ ವರಿಷ್ಠೆ ಸೋನಿಯಾ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ, ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ, ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ, ಪ್ರಿಯಾಂಕಾ ಪತಿ ರಾಬರ್ಟ್ ವಾದ್ರಾ, ರಾಜ್ಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಹಾಗೂ ಸಚಿವರು ಸೇರಿ ಹಲವು ಮಂದಿ ಗಣ್ಯರು ಸಂತಾಪ ಸೂಚಿಸಿದ್ದಾರೆ.
With profound grief, we inform the demise of the former Prime Minister of India, Dr Manmohan Singh, aged 92. He was being treated for age-related medical conditions and had a sudden loss of consciousness at home on 26 December 2024. Resuscitative measures were started immediately… pic.twitter.com/ZX9NakKo7Y
— ANI (@ANI) December 26, 2024
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Video: ತನ್ನ ಮನೆಯ ಮುಂದೆಯೇ ತನ್ನನ್ನು ಚಾಟಿಯಿಂದ ಹೊಡೆದುಕೊಂಡ ಅಣ್ಣಾಮಲೈ…
Substitutes: ರಾಜಕೀಯ ಬಿರುಗಾಳಿ ಎಬ್ಬಿಸಿದ ಮಧ್ಯಪ್ರದೇಶ ಶಿಕ್ಷಣ ಸಚಿವರ ಬದಲಿ ಹೇಳಿಕೆ
ನನ್ನ ಮಾರ್ಗದರ್ಶಕರನ್ನು ಕಳೆದುಕೊಂಡಿದ್ದೇನೆ… ಮಾಜಿ ಪ್ರಧಾನಿ ನಿಧನಕ್ಕೆ ರಾಹುಲ್ ಸಂತಾಪ
Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ
Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಟಿಪ್ಸ್ ಕೊಡದಿದ್ದಕ್ಕೆ ಗರ್ಭಿಣಿ ಮಹಿಳೆಯನ್ನೇ 14 ಬಾರಿ ಇರಿದ ಪಿಜ್ಜಾ ಡೆಲಿವರಿ ಮಹಿಳೆ
Bajpe: ತರಕಾರಿ ಬೀಜ ಬಿತ್ತನೆಗೆ ಹಿಂದೇಟು
Manmohan Singh: ಮನಮೋಹನ್ ಸಿಂಗ್ ಇಷ್ಟದ ಮೆನು ಯಾವುದು? ಸಸ್ಯಹಾರಿಯಾಗಿದ್ರೂ…ಆದರೆ ಒಮ್ಮೆ
Puttur ನಗರಕ್ಕೂ ಬೇಕು ಟ್ರಾಫಿಕ್ ಸಿಗ್ನಲ್
INDvAUS; ಮೆಲ್ಬೋರ್ನ್ ನಲ್ಲಿ ಆಸೀಸ್ ಬಿಗಿ ಹಿಡಿತ; ಭಾರೀ ಹಿನ್ನಡೆಯಲ್ಲಿ ಟೀಂ ಇಂಡಿಯಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.