Pathanamthitta: ದಲಿತ ಬಾಲಕಿಯ ಮೇಲೆ ದೌರ್ಜನ್ಯ ಪ್ರಕರಣದಲ್ಲಿ 44 ಜನರ ಬಂಧನ
Team Udayavani, Jan 14, 2025, 7:15 PM IST
ಪಟ್ಟಣಂತಿಟ್ಟ: ಜಿಲ್ಲೆಯಲ್ಲಿ ದಲಿತ ಬಾಲಕಿಯ ಮೇಲೆ ನಡೆದ ಲೈಂಗಿಕ ದೌರ್ಜನ್ಯದ ಆರೋಪದ ಮೇಲೆ ತನಿಖೆ ನಡೆಸುತ್ತಿರುವ ಕೇರಳ ಪೊಲೀಸರ ವಿಶೇಷ ತನಿಖಾ ತಂಡ (ಎಸ್‌ಐಟಿ) ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇದುವರೆಗೆ 44 ಜನರನ್ನು ಬಂಧಿಸಿದೆ ಎಂದು ಜಿಲ್ಲೆಯ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಮಂಗಳವಾರ (ಜ.14) ತಿಳಿಸಿದ್ದಾರೆ.
ತನಿಖೆಯ ಮೇಲುಸ್ತುವಾರಿ ನೋಡಿಕೊಳ್ಳುತ್ತಿರುವ ಡಿಐಜಿ ಅಜೀತಾ ಬೇಗಮ್ ಈ ಬಗ್ಗೆ ಮಾಹಿತಿ ನೀಡಿದ್ದು, ಬಾಲಕಿಯ ಮೇಲಿನ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದಂತೆ 30 ಎಫ್‌ಐಆರ್‌ಗಳು ದಾಖಲಾಗಿದ್ದು, ಪ್ರಕರಣಗಳಲ್ಲಿ ಉಲ್ಲೇಖಿಸಲಾದ 59 ಆರೋಪಿಗಳಲ್ಲಿ 44 ಜನರನ್ನು ಬಂಧಿಸಲಾಗಿದೆ ಎಂದರು.
“ಇಬ್ಬರು ಆರೋಪಿಗಳು ಪರಾರಿಯಾಗಿದ್ದಾರೆ. ಅವರು ಪ್ರಸ್ತುತ ವಿದೇಶದಲ್ಲಿದ್ದಾರೆ. ಅವರಿಗಾಗಿ ಲುಕ್ ಔಟ್ ನೋಟಿಸ್ ಗಳನ್ನು ಹೊರಡಿಸುವ ಬಗ್ಗೆ ನಾವು ಯೋಚಿಸುತ್ತಿದ್ದೇವೆ. ಇಂಟರ್‌ಪೋಲ್ ಮೂಲಕ ಅವರಿಗಾಗಿ ರೆಡ್ ಕಾರ್ನರ್ ನೋಟಿಸ್ ಹೊರಡಿಸಲು ಸಹ ನಾವು ಯೋಜಿಸುತ್ತಿದ್ದೇವೆ” ಎಂದು ಅಧಿಕಾರಿ ತಿಳಿಸಿದರು.
ಇನ್ನೂ 13 ಜನರನ್ನು ಬಂಧಿಸಬೇಕಾಗಿದೆ ಎಂದು ಅವರು ಹೇಳಿದರು.
“ನಾವು ಅವರ ಸ್ಥಳಗಳನ್ನು ಹುಡುಕುತ್ತಿದ್ದೇವೆ. ಅವರನ್ನು ಶೀಘ್ರದಲ್ಲೇ ಬಂಧಿಸಲಾಗುವುದು. ಎಸ್‌ಐಟಿಯಿಂದ ಸಂಪೂರ್ಣ ಮತ್ತು ವೈಜ್ಞಾನಿಕ ತನಿಖೆ ನಡೆಸಲಾಗುವುದು. ನಾವು ಯಾವುದೇ ಆರೋಪಿಗಳನ್ನು ಬಿಡುವುದಿಲ್ಲ. ಯಾವುದೇ ರಾಜಿ ಮಾಡಿಕೊಳ್ಳುವುದಿಲ್ಲ. ಅವರೆಲ್ಲರನ್ನೂ ಕಾನೂನಿನ ಮುಂದೆ ತರುತ್ತೇವೆ” ಎಂದು ಅಧಿಕಾರಿ ಹೇಳಿದರು.
ಇದುವರೆಗಿನ ತನಿಖೆಯಲ್ಲಿ ಆರೋಪಿಗಳಲ್ಲಿ ಹಲವರು ಪತ್ತನಂತಿಟ್ಟದ ಖಾಸಗಿ ಬಸ್ ನಿಲ್ದಾಣದಲ್ಲಿ ಬಾಲಕಿಯನ್ನು ಭೇಟಿಯಾಗಿದ್ದರು ಎಂದು ತಿಳಿದುಬಂದಿದೆ. ನಂತರ ಆಕೆಯನ್ನು ವಾಹನಗಳಲ್ಲಿ ವಿವಿಧ ಸ್ಥಳಗಳಿಗೆ ಕರೆದೊಯ್ದು ದೌರ್ಜನ್ಯ ಎಸಗಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
2024 ರ ಜನವರಿಯಲ್ಲಿ ಕಾರಿನೊಳಗೆ ಮತ್ತು ಪಟ್ಟಣಂತಿಟ್ಟ ಜನರಲ್ ಆಸ್ಪತ್ರೆಯಲ್ಲಿ ನಡೆದ ಘಟನೆಗಳು ಸೇರಿದಂತೆ ಕನಿಷ್ಠ ಐದು ಬಾರಿ ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದೆ ಎಂದು ತನಿಖೆಯಲ್ಲಿ ತಿಳಿದುಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಕಳೆದ ವರ್ಷ ಬಾಲಕಿ ಹನ್ನೆರಡನೇ ತರಗತಿಯಲ್ಲಿ ಓದುತ್ತಿದ್ದಾಗ ಇನ್ಸ್ಟಾಗ್ರಾಮ್ ಮೂಲಕ ಪರಿಚಯವಾದ ಯುವಕನೊಬ್ಬ ರನ್ನಿಯ ರಬ್ಬರ್ ತೋಟಕ್ಕೆ ಕರೆದೊಯ್ದು, ಅಲ್ಲಿ ಇತರ ಮೂವರೊಂದಿಗೆ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ತನಿಖೆಯಲ್ಲಿ ಕಂಡುಬಂದಿದೆ.
ಈಗ 18 ವರ್ಷ ವಯಸ್ಸಿನ ಬಾಲಕಿ ತನ್ನ ದೂರಿನಲ್ಲಿ 13 ನೇ ವಯಸ್ಸಿನಿಂದ 62 ವ್ಯಕ್ತಿಗಳಿಂದ ಲೈಂಗಿಕ ದೌರ್ಜನ್ಯಕ್ಕೊಳಗಾಗಿದ್ದಾಳೆ ಎಂದು ಆರೋಪಿಸಿದ್ದಾಳೆ.
ಶಿಕ್ಷಣ ಸಂಸ್ಥೆಯಲ್ಲಿ ಸಂತ್ರಸ್ತೆಯ ಶಿಕ್ಷಕರು ಆಕೆಯ ನಡವಳಿಕೆಯಲ್ಲಿನ ಗಮನಾರ್ಹ ಬದಲಾವಣೆಗಳ ಬಗ್ಗೆ ಸಮಿತಿಗೆ ತಿಳಿಸಿದ ನಂತರ, ಮಕ್ಕಳ ಕಲ್ಯಾಣ ಸಮಿತಿ ನಡೆಸಿದ ಕೌನ್ಸೆಲಿಂಗ್ ಸಮಯದಲ್ಲಿ ಈ ವಿಷಯ ಬೆಳಕಿಗೆ ಬಂದಿದೆ.
ನಂತರ ಸಮಿತಿಯು ಪೊಲೀಸರಿಗೆ ಮಾಹಿತಿ ನೀಡಿತು ಮತ್ತು ತನಿಖೆ ನಡೆಯುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Narendra Modi: ಭೂಕಂಪದ ಮುನ್ನೆಚ್ಚರಿಕೆ ವ್ಯವಸ್ಥೆ ಅಭಿವೃದ್ಧಿಪಡಿಸಲು ಮೋದಿ ಕರೆ
TTD: ತಿರುಪತಿ ದೇಗುಲದಲ್ಲಿ ಅರ್ಧ ಕೆ.ಜಿ. ಚಿನ್ನ ಕಳವು: ನೌಕರನ ಬಂಧನ
Ayodhya Ram: ರಾಜಕೀಯಕ್ಕೆ ರಾಮನ ಬಳಸದಿರಿ: ಭಾಗವತ್‌ಗೆ ರಾವತ್ ತಿರುಗೇಟು
Editorial: ಅಪಘಾತ ಗಾಯಾಳು ರಕ್ಷಕರಿಗೆ ನೆರವು ಹೆಚ್ಚಳ ಶ್ಲಾಘನೀಯ
ವೀರಶೈವ ಲಿಂಗಾಯತ ಸಮುದಾಯ ಒಡೆಯುವ ಹುನ್ನಾರ: ಬಿ.ವೈ.ವಿಜಯೇಂದ್ರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.