ಬೆಳ್ಳಂಬೆಳಗ್ಗೆ ಬಿಜೆಪಿ ಮುಖಂಡನ ಗುಂಡಿಕ್ಕಿ ಹತ್ಯೆ… CCTVಯಲ್ಲಿ ಸೆರೆಯಾಯ್ತು ದೃಶ್ಯ
Team Udayavani, Sep 9, 2024, 11:20 AM IST
ಪಾಟ್ನಾ: ಪಾಟ್ನಾದಲ್ಲಿ ಸೋಮವಾರ (ಸೆ. 09) ಬೆಳ್ಳಂಬೆಳಗ್ಗೆ ಬಿಜೆಪಿ ಮುಖಂಡರೊಬ್ಬರನ್ನು ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆಗೈದಿದ್ದಾರೆ. ಪಾಟ್ನಾ ನಗರದ ಮಂಗಲ್ ತಲಾಬ್ ಬಳಿಯ ಮನೋಜ್ ಕಮಾಲಿಯಾ ಗೇಟ್ ಬಳಿ ಈ ಘಟನೆ ನಡೆದಿದ್ದು ಮುಂಜಾನೆ ನಡೆದ ಗುಂಡಿನ ದಾಳಿ ರಾಜಧಾನಿಯನ್ನು ಬೆಚ್ಚಿಬೀಳಿಸಿದೆ.
ಮೃತರನ್ನು ಬಿಜೆಪಿ ಮುಖಂಡ ಶ್ಯಾಮ್ ಸುಂದರ್ ಅಲಿಯಾಸ್ ಮುನ್ನಾ ಶರ್ಮಾ ಎಂದು ಗುರುತಿಸಲಾಗಿದೆ.
ಮುಂಜಾನೆ 4 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ ಎನ್ನಲಾಗಿದೆ. ಶ್ಯಾಮ್ ಸುಂದರ್ ಮನೋಜ್ ಕಮಾಲಿಯಾ ಗೇಟ್ ಬಳಿ ಬಂದಿದ್ದಾಗ ವಾಹನದಲ್ಲಿ ಬಂದ ದುಷ್ಕರ್ಮಿಗಳು ಗುಂಡು ಹಾರಿಸಿದ್ದಾರೆ. ಶ್ಯಾಮ್ ಸುಂದರ್ ಬಿಜೆಪಿಯಿಂದ ಪಾಟ್ನಾ ಸಿಟಿ ಚೌಕ್ನ ಮಾಜಿ ಮುನ್ಸಿಪಲ್ ಬೋರ್ಡ್ ಅಧ್ಯಕ್ಷರಾಗಿದ್ದರು.
ಈ ಕುರಿತು ಮಾಹಿತಿ ನೀಡಿದ ಪೊಲೀಸ್ ಅಧಿಕಾರಿಗಳು’ ಸೋಮವಾರ ಬೆಳಿಗ್ಗೆ ದುಷ್ಕರ್ಮಿಗಳ ತಂಡ ಬಿಜೆಪಿ ನಾಯಕನನ್ನು ಹತ್ಯೆಮಾಡಿದ್ದು ಈ ಬಗ್ಗೆ ಬೆಳಗ್ಗೆ 6 ಗಂಟೆಗೆ ಮಾಹಿತಿ ಲಭಿಸಿದೆ. ಗುಂಡಿನ ದಾಳಿಯಿಂದ ಗಂಭೀರ ಗಾಯಗೊಂಡಿರುವ ಶ್ಯಾಮ್ ಸುಂದರ್ ಅವರನ್ನು ಆಸ್ಪತ್ರೆಗೆ ದಾಖಲಿಸಿದರೂ ಅಷ್ಟೋತ್ತಿಗಾಗಲೇ ಶ್ಯಾಮ್ ಸುಂದರ್ ಮೃತಪಟ್ಟಿದ್ದಾರೆ.
ಘಟನೆ ಸಂಬಂಧ ಅಲ್ಲಿನ ಸಿಸಿ ಕ್ಯಾಮೆರಾದಲ್ಲಿ ಘಟನೆಯ ದೃಶ್ಯ ಸೆರೆಯಾಗಿದ್ದು ಪೊಲೀಸರು ಸಿಸಿ ಕ್ಯಾಮೆರಾದ ಆಧಾರದ ಮೇಲೆ ದುಷ್ಕರ್ಮಿಗಳ ಪತ್ತೆಗೆ ಬಲೆ ಬೀಸಿದ್ದಾರೆ.
बिहार : पटना में BJP नेता श्याम सुंदर उर्फ मुन्ना शर्मा की गोली मारकर हत्या। वो सुबह 4 बजे रिश्तेदारों को ऑटो में बैठाकर लौट रहे थे। रास्ते में बदमाशों ने चेन लूटने की कोशिश की थी। pic.twitter.com/kMszJYzUCs
— Sachin Gupta (@SachinGuptaUP) September 9, 2024
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
Old cars ಬಿಕರಿಗೆ ಶೇ.18 ಜಿಎಸ್ಟಿ! ; ವಿತ್ತ ಸಚಿವೆ ನೇತೃತ್ವದ ಜಿಎಸ್ಟಿ ಸಭೆ ತೀರ್ಮಾನ
Maharashtra; ಫಡ್ನವೀಸ್ ಬಳಿ ಗೃಹ, ಶಿಂಧೆಗೆ ನಗರಾಭಿವೃದ್ಧಿ ಸೇರಿ 3 ಪ್ರಮುಖ ಖಾತೆ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.