ನಿತೀಶ್ ಸರಕಾರದ ಲಿಕ್ಕರ್ ಬ್ಯಾನ್: ಪಟ್ನಾ ಹೈಕೋರ್ಟ್ ಪ್ರಹಾರ
Team Udayavani, Nov 6, 2017, 7:14 PM IST
ಪಟ್ನಾ : ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಸರಕಾರದ ಮದ್ಯ ನಿಷೇಧ ಉಪಕ್ರಮಕ್ಕೆ ಪಟ್ನಾ ಹೈಕೋರ್ಟ್ ಭಾರೀ ದೊಡ್ಡ ಹೊಡೆತ ನೀಡಿದೆ.
ಮದ್ಯ ನಿಷೇಧ ಕಾಯಿದೆಯ ಕೇಸ್ನಲ್ಲಿ ಆರೋಪಿಗಳಿಗೆ ನಿರೀಕ್ಷಣಾ ಜಾಮೀನು ಸಿಗುವಂತಾಗಬೇಕು ಎಂದು ಅಪ್ಪಣೆ ಕೊಡಿಸಿರುವ ಪಟ್ನಾ ಹೈಕೋರ್ಟ್, ಬಿಹಾರ ಮದ್ಯ ನಿಷೇಧ ಮತ್ತು ಅಬಕಾರಿ ಕಾಯಿದೆಯ ಸೆ.76(2) ಅಸಾಂವಿಧಾನಿಕವಾಗಿದೆ ಎಂದು ಹೇಳಿದೆ.
ಬಿಹಾರ ಸರಕಾರ ರೂಪಿಸಿದ್ದ ಈ ಕಾಯಿದೆಯಡಿ ಆರೋಪಿಗೆ ನಿರೀಕ್ಷಣಾ ಜಾಮೀನು ಮಂಜೂರಾಗುವಂತಿರಲಿಲ್ಲ. ಬಿಹಾರ ಮದ್ಯ ನಿಷೇಧ ಮತ್ತು ಅಬಕಾರಿ ಕಾಯಿದೆಯ ಸೆ.76(2)ನ್ನು ಅಸಾಂವಿಧಾನಿಕವೆಂದು ಘೋಷಿಸುವ ತನಕ ಆರೋಪಿಗಳಿಗೆ ನಿರೀಕ್ಷಣಾ ಜಾಮೀನು ನೀಡುವಂತಿಲ್ಲ ಎಂದು ಈ ಹಿಂದೆ ಪಟ್ನಾ ಹೈಕೋರ್ಟಿನ ಏಕ ನ್ಯಾಯಾಧೀಶ ಪೀಠ ಹೇಳಿತ್ತು.
ಈ ವಿಷಯದಲ್ಲೀಗ ಪಟ್ನಾ ಹೈಕೋರ್ಟ್ ನೀಡಿರುವ ತೀರ್ಪಿನ ಪ್ರಕಾರ ಕೆಳ ನ್ಯಾಯಾಲಯವು ಮದ್ಯ ನಿಷೇಧ ಕೇಸಿನಡಿ ಆರೋಪಿಗೆ ನಿರೀಕ್ಷಣಾ ಜಾಮೀನನ್ನು ನಿರಾಕರಿಸಿದರೆ, ಅದನ್ನು ಯಾಕಾಗಿ ನಿರಾಕರಿಸಲಾಯಿತು ಎಂಬ ವಿವರಣೆಯನ್ನು ನೀಡಬೇಕಾಗುತ್ತದೆ.
ಪಟ್ನಾ ಹೈಕೋರ್ಟ್ ನಲ್ಲಿ ಮಾಜಿ ಸೈನಿಕರೊಬ್ಬರು ಕೋರ್ಟಿಗೆ ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿಯ ಅರ್ಜಿಯಲ್ಲಿ , ಜನರಿಗೆ ತಾವು ಏನನ್ನು ತಿನ್ನಬೇಕು, ಏನನ್ನು ಕುಡಿಯಬೇಕು ಎಂದು ತೀರ್ಮಾನಿಸುವ ಹಕ್ಕು ಮೂಲಭೂತವಾಗಿ ಸಂವಿಧಾನದಿಂದ ದೊರಕಿದೆ; ಬಿಹಾರ ಸರಕಾರದ ಈ ಕಾಯಿದೆಯು ಸಂವಿಧಾನ ನೀಡಿರುವ ಮೂಲಭೂತ ಹಕ್ಕನ್ನು ಉಲ್ಲಂಘನೆ ಮಾಡುತ್ತದೆ ಎಂದು ವಾದಿಸಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು
Notice: ಸಂಗೀತ ಕಾರ್ಯಕ್ರಮಕ್ಕೂ ಮುನ್ನ ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್
Media powerhouse: ರಿಲಯನ್ಸ್- ಡಿಸ್ನಿ ಕಂಪನಿ ವಿಲೀನ ಈಗ ಅಧಿಕೃತ
PM ನರೇಂದ್ರ ಮೋದಿಗೆ ಡೊಮಿನಿಕಾದ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಗೌರವ
CBSE; ಮುಂದಿನ ವರ್ಷ ಪಠ್ಯ ಶೇ. 15 ಕಡಿತಕ್ಕೆ ಚಿಂತನೆ
MUST WATCH
ಹೊಸ ಸೇರ್ಪಡೆ
Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು
Bhairathi Ranagal: ಭೈರತಿ ಪಾತ್ರಕ್ಕೊಂದು ಸದುದ್ದೇಶವಿದೆ..: ಶಿವರಾಜ್ ಕುಮಾರ್
Hunsur: ಅಪ್ರಾಪ್ತ ಬಾಲಕಿ ಗರ್ಭಿಣಿ ಪ್ರಕರಣ; ಯುವಕನ ಬಂಧನ
Notice: ಸಂಗೀತ ಕಾರ್ಯಕ್ರಮಕ್ಕೂ ಮುನ್ನ ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್
Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.