ಪೆಗಾಸಸ್ ಗೂಢಚಾರಿಕೆ ಮಾಡಿಲ್ಲ!
Team Udayavani, Aug 26, 2022, 7:05 AM IST
ಹೊಸದಿಲ್ಲಿ: ದೇಶದ ಗಣ್ಯಾತಿಗಣ್ಯರ ಮೇಲೆ ಪೆಗಾಸಿಸ್ ಬಳಸಿ ಗೂಢಚಾರಿಕೆ ನಡೆಸ ಲಾಗಿದೆ ಎಂಬುದಕ್ಕೆ ಯಾವುದೇ ಸಾಕ್ಷ್ಯ ಸಿಕ್ಕಿಲ್ಲ. 29 ಫೋನ್‌ಗಳನ್ನು ಪರೀಕ್ಷಿಸಲಾಗಿದ್ದು, ಇವು ಗಳಲ್ಲಿ 5 ಫೋನ್‌ಗಳಲ್ಲಿ ಮಾತ್ರ ಮಾಲ್‌ವೇರ್ ಪತ್ತೆ ಯಾಗಿದೆ ಎಂದು ಸುಪ್ರೀಂ ಕೋರ್ಟ್ ನೇಮಿಸಿದ್ದ ತಾಂತ್ರಿಕ ಸಮಿತಿ ವರದಿ ನೀಡಿದೆ.
ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾ.ಎನ್.ವಿ. ರಮಣ, ನ್ಯಾಯಮೂರ್ತಿಗಳಾದ ಸೂರ್ಯಕಾಂತ್, ಹಿಮಾ ಕೊಹ್ಲಿ ಅವರಿದ್ದ ಪೀಠಕ್ಕೆ ವರದಿ ಸಲ್ಲಿಸಲಾಗಿದೆ.
ಕೇಂದ್ರದ ಇಬ್ಬರು ಸಚಿವರು, ಪತ್ರಕರ್ತರು, ವಿಪಕ್ಷಗಳ ನಾಯಕರು, ನ್ಯಾಯಮೂರ್ತಿಗಳು, ಉದ್ಯಮಿಗಳು ಸೇರಿ 300 ಮಂದಿ ಮೇಲೆ ಇಸ್ರೇಲ್ ಮೂಲದ ಪೆಗಾಸಿಸ್ ಎಂಬ ಸ್ಪೈವೇರ್ ಅನ್ನು ಬಿಟ್ಟು ಗೂಢಚಾರಿಕೆ ಮಾಡಿಸಲಾಗಿತ್ತು ಎಂಬ ಆರೋಪ ಸಂಬಂಧ ಯಾವುದೇ ಸಾಕ್ಷ್ಯ ಗಳು ಸಿಕ್ಕಿಲ್ಲ ಎಂದು ಸಮಿತಿ ವರದಿಯಲ್ಲಿ ತಿಳಿಸಿದೆ.
ಕೇಂದ್ರದ ಅಸಹಕಾರ:
ಪ್ರಕರಣಕ್ಕೆ ಸಂಬಂಧಿಸಿದ ತನಿಖೆ ನಡೆಸಿದ ನಿವೃತ್ತ ನ್ಯಾ| ಆರ್.ವಿ. ರವೀಂದ್ರನ್ ನೇತೃತ್ವದ ಸಮಿತಿ ಕೇಂದದ ವಿರುದ್ಧವೂ ಅತೃಪ್ತಿ ವ್ಯಕ್ತ ಪಡಿ ಸಿದೆ. ಒಟ್ಟಾರೆ 3 ಭಾಗಗಳಾಗಿ ಈ ವರದಿ ಸಲ್ಲಿ ಸಿದ್ದು, ಒಂದರಲ್ಲಿ ವ್ಯಕ್ತಿಗಳ ಖಾಸಗಿತನಕ್ಕೆ ಭದ್ರತೆ ನೀಡು ವಂಥ ಕಾನೂನು ತರಬೇಕು ಎಂದು ಹೇಳಿದೆ. ಅಲ್ಲದೆ, ದೇಶಕ್ಕೆ ಸೈಬರ್ ಭದ್ರತೆ ನೀಡ ಬೇಕಾದ ಅಗತ್ಯವಿದೆ ಎಂದು ಪ್ರತಿಪಾದಿಸಿದೆ.
ನಾಲ್ಕು ವಾರಗಳ ಬಳಿಕ ವಿಚಾರಣೆ:
ನಾಲ್ಕು ವಾರಗಳ ಬಳಿಕ ವಿಚಾರಣೆ ನಡೆ ಸುವುದಾಗಿ ಸುಪ್ರೀಂ ಕೋರ್ಟ್ ಹೇಳಿದೆ. ಜತೆಗೆ ರಾಷ್ಟ್ರೀಯ ಭದ್ರತೆ ವಿಚಾರದಲ್ಲಿ ಪ್ರತೀ ವಿಷಯ ದಲ್ಲೂ ಸರಕಾರಗಳಿಗೆ ವಿನಾಯಿತಿ ಸಿಗದು. ಈ ವಿಚಾರದಲ್ಲಿ ನ್ಯಾಯಾಲಯವೂ ಮೂಕನಂತೆ ಕುಳಿತುಕೊಳ್ಳುವುದಿಲ್ಲ ಎಂದು ಸ್ಪಷ್ಟಪಡಿಸಿದೆ.
ಕಾಂಗ್ರೆಸ್‌ಗೆ ಬಿಜೆಪಿ ತಿರುಗೇಟು :
ಪೆಗಾಸಸ್ ಬಳಸಿ ಗೂಢಚಾರಿಕೆ ನಡೆಸಲಾಗಿಲ್ಲ ಎಂದು ಸುಪ್ರೀಂ ಸಮಿತಿ ವರದಿ ನೀಡಿದ ಬೆನ್ನಲ್ಲೇ ಬಿಜೆಪಿ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ತಿರುಗಿಬಿದ್ದಿದೆ. ಈಗಲಾದರೂ ರಾಹುಲ್ ಗಾಂಧಿ ಕ್ಷಮೆ ಕೇಳುತ್ತಾರೆಯೇ ಎಂದು ಮಾಜಿ ಕಾನೂನು ಸಚಿವ ರವಿಶಂಕರ್ ಪ್ರಸಾದ್ ಪ್ರಶ್ನಿಸಿದ್ದಾರೆ. ಪೆಗಾಸಸ್ ಮೂಲಕ ಕೇಂದ್ರ ಸರಕಾರ ಪ್ರಜಾಪ್ರಭುತ್ವವನ್ನು ನಾಶ ಮಾಡುತ್ತಿದೆ ಎಂದು ರಾಹುಲ್ ಈ ಹಿಂದೆ ಆರೋಪಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Havyaka ಭಾಷೆಗೆ ಅಕಾಡೆಮಿ ಅಥವಾ ಅಧ್ಯಯನ ಪೀಠ ಅಗತ್ಯ: ರವಿಶಂಕರ್ ಭಟ್
Ramnagar; 30ಕ್ಕೂ ಅಧಿಕ ಊರುಗಳಲ್ಲಿ ಆತಂಕ ಹುಟ್ಟಿಸಿದ್ದ ಕಾಡಾನೆ ಸೆರೆ
Yakshagana;ಅಧ್ಯಯನ, ಪಾತ್ರ ಜ್ಞಾನದಿಂದಷ್ಟೇ ಕಲಾವಿದ ರಂಗಸ್ಥಳದಲ್ಲಿ ಮೆರೆಯಲು ಸಾಧ್ಯ
Drugs; ಮಾರಾಟ, ಸೇವನೆ : ಮಂಗಳೂರು 1,090, ಉಡುಪಿ 116 ಪ್ರಕರಣ ದಾಖಲು
Udupi; ಕ್ಯಾನ್ಸರ್‌ನಿಂದ ಬಳಲುತ್ತಿದ್ದ ರೋಗಿಯ ರಕ್ಷಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.