ಪೆಗಾಸಸ್:ಬಿಜೆಪಿಯ ಅಭಿವೃದ‍್ದಿ ಯೋಜನೆಗಳನ್ನು ಕಾಂಗ್ರೆಸ್ ಗೆ ಸಹಿಸಿಕೊಳ್ಳಲಾಗುತ್ತಿಲ್ಲ: ಧಾಮಿ
ಬಿಜೆಪಿ ಅಭಿವೃದ್ಧಿಯ ಹೆಜ್ಜೆಗಳನ್ನು ಕುಂಟಿತಗೊಳಿಸುವುದಕ್ಕೆ ಕಾಂಗ್ರೆಸ್ ಶತ ಪ್ರಯತ್ನ ಮಾಡುತ್ತಿದೆ : ಪುಷ್ಕರ್ ಸಿಂಗ್ ಧಾಮಿ
Team Udayavani, Jul 21, 2021, 10:59 AM IST
ಉತ್ತರಾಖಂಡ : ಪೆಗಾಸಸ್ ಮೂಲಕ ಜಗತ್ತಿನ ಪ್ರಮುಖ ಪತ್ರಕರ್ತರು, ರಾಜಕೀಯ ಕ್ಷೇತ್ರದ ವ್ಯಕ್ತಿಗಳು, ಮಾನವ ಹಕ್ಕುಗಳ ಕಾರ್ಯಕರ್ತರು, ರಾಯಭಾರ ಕಚೇರಿಗಳಲ್ಲಿ ಕೆಲಸ ಮಾಡುವ ಪ್ರಮುಖರ ದೂರವಾಣಿ ಕದ್ದಾಲಿಸುವ ಪ್ರಯತ್ನ ಮತ್ತು ನಿಗಾ ಇರಿಸುವ ಪ್ರಯತ್ನ ನಡೆಸಲಾಗಿದೆ ಎಂಬ ಕಾಂಗ್ರೆಸ್ ನಾಯಕರ ಆರೋಪದ ವಿರುದ್ಧ ಉತ್ತರಾಖಂಡದ ನೂತನ ಮುಖ್ಯಮಂತ್ರಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮಾಧ್ಯಮಗಳೊಂದಿಗೆ ಮಾತನಾಡಿದ ಉತ್ತರಾಖಂಡದ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ, ಬಿಜೆಪಿ ಸರ್ಕಾರದ ಅಭಿವೃದ್ಧಿಯನ್ನು ಕಾಂಗ್ರೆಸ್ ಗೆ ಸಹಿಸಿಕೊಳ್ಳಲಾಗುತ್ತಿಲ್ಲ, ಹಾಗಾಗಿ ಕಾಂಗ್ರೆಸ್ ಈ ಕುತಂತ್ರವನ್ನು ಬಿಜೆಪಿ ವಿರುದ್ಧ ಪ್ರಯೋಗ ಮಾಡುತ್ತಿದೆ ಎಂದು ಅವರು ಇಂದು(ಬುಧವಾರ, ಜುಲೈ 21) ಹೇಳಿದ್ದಾರೆ.
ಇದನ್ನೂ ಓದಿ : ಸ್ಟಾರ್ಕ್, ಹ್ಯಾಜಲ್ ವುಡ್ ದಾಳಿಗೆ ನಲುಗಿದ ವೆಸ್ಟ್ ಇಂಡೀಸ್: ಆಸೀಸ್ ಗೆ 133 ರನ್ ಅಂತರದ ಜಯ
ಬಿಜೆಪಿ ಅಭಿವೃದ್ಧಿಯ ಹೆಜ್ಜೆಗಳನ್ನು ಕುಂಟಿತಗೊಳಿಸುವುದಕ್ಕೆ ಕಾಂಗ್ರೆಸ್ ಶತ ಪ್ರಯತ್ನ ಮಾಡುತ್ತಿದೆ. ಅದಕ್ಕಾಗಿಯೇ ಮುಂಗಾರು ಅಧಿವೆಶನದ ಹಿಂದಿನ ದಿನ ಈ ಪೆಗಾಸಸ್ ವಿಚಾರವನ್ನು ತಂದು ರಾಜಕೀಯದಲ್ಲಿ ಒಂದಿಷ್ಟು ಗೊಂದಲವನ್ನು ಸೃಷ್ಟಿ ಮಾಡುವ ಪ್ರಯತ್ನ ಮಾಡುತ್ತಿದೆ ಎಂದು ಅವರು ಕಿಡಿಕಾರಿದ್ದಾರೆ.
ಸಂಸತ್ತಿನಲ್ಲಿ ಅಭಿವೃದ್ಧಿ ಯೋಜನೆಗಳ ಬಗ್ಗೆ ಚರ್ಚೆ ಮಾಡುವುದಕ್ಕೆ ಅವಕಾಶ ಮಾಡಿಕೊಡಬಾರದು, ಬಿಜೆಪಿ ಸರ್ಕಾರದ ಅಭಿವೃದ‍್ದಿ ಕಾರ್ಯಗಳಿಗೆ ಮಸಿ ಬಳಿಯಬೇಕು ಎಂಬ ಉದ್ದೇಶದಿಂದ ಈ ಪೆಗಾಸಸ್ ಪ್ರಾಜೆಕ್ಟ್ ವಿಚಾರವನ್ನು ಕಾಂಗ್ರೆಸ್ ತನ್ನ ರಾಜಕೀಯ ಅಸ್ತ್ರವನ್ನಾಗಿ ಬಳಸಿಕೊಳ್ಳುತ್ತಿದೆ ಎಂದಿದ್ದಾರೆ.
ವಿದೇಶಿ ಸಂಸ್ಥೆಗಳೊಂದಿಗೆ ಒಪ್ಪಂದ ಮಾಡಿಕೊಳ್ಳುವ ಮೂಲಕ ದೇಶದ ಅಭಿವೃದ್ಧಿಯನ್ನು ತಡೆಯಲು ಕಾಂಗ್ರೆಸ್ ಬಯಸಿದೆ ಎಂದು ಅವರು ಆರೋಪಿಸಿದ್ದಾರೆ.
ಕೇಂದ್ರ ಬಿಜೆಪಿ ಕೂಡ ಕಾಂಗ್ರೆಸ್ ಆರೋಪವನ್ನು ಸಂಪೂರ್ಣವಾಗಿ ತಿರಸ್ಕರಿಸಿದ್ದು, 50 ವರ್ಷಕ್ಕೂ ಹೆಚ್ಚು ಕಾಲ ಈ ದೇಶವನ್ನು ಆಳಿದ ಕಾಂಗ್ರೆಸ್ ಗೆ ಇದೊಂದು ಹೊಸ ಅಸ್ತ್ರ ಸಿಕ್ಕಿದೆ. ಆಧಾರ ರಹಿತ ಆರೋಪ ಮಾಡುವುದು ಕಾಂಗ್ರೆಸ್ ಗೆ ರೂಢಿಯಾಗಿದೆ ಎಂದು ಬಿಜೆಪಿ ನಾಯಕ ರವಿಶಂಕರ್ ಪ್ರಸಾದ್ ಹೇಳಿದ್ದಾರೆ.
ದೇಶದ ಪ್ರಮುಖ ಸುದ್ದಿ ಸಂಸ್ಥೆಗಳಾದ ಹಿಂದೂಸ್ತಾನ್ ಟೈಮ್ಸ್, ದಿ ಹಿಂದೂ, ಇಂಡಿಯಾ ಟುಡೆ, ಇಂಡಿಯನ್ ಎಕ್ಸ್ ಪ್ರೆಸ್ ಮತ್ತು ನೆಟ್ ವರ್ಕ್ 18 ಗಳಲ್ಲಿ ಕಾರ್ಯ ಕಾರ್ಯನಿರ್ವಹಿಸುತ್ತಿರುವ ಪತ್ರಕರ್ತರು ರಕ್ಷಣಾ, ಗೃಹ ಸಚಿವಾಲಯ, ಚುನಾವಣಾ ಆಯೋಗ ಮತ್ತು ಕಾಶ್ಮೀರಕ್ಕೆ ಸಂಬಂಧಿಸಿದ ವಿಷಯಗಳ ಬಗ್ಗೆ ಸುದ್ದಿ ಮಾಡಿರುವುದಕ್ಕೆ ದೂರವಾಣಿ ಕದ್ದಾಲಿಸುವ ಪ್ರಯತ್ನ ಮತ್ತು ನಿಗಾ ಇರಿಸುವ ಪ್ರಯತ್ನ ನಡೆಸಲಾಗಿದೆ ಎಂದು ವರದಿ ತಿಳಿಸಿದೆ.
ಆದರೆ, ಕೇಂದ್ರ ಮಾಹಿತಿ ಹಾಗೂ ತಂತ್ರಜ್ಞಾನ ಸಚಿವ ಅಶ್ವಿನಿ ವೈಷ್ಣವ್, ಈ ವರದಿಯು ಭಾರತೀಯ ಪ್ರಜಾಪ್ರಭುತ್ವ ಮತ್ತು ಅದರ ಸುಸ್ಥಾಪಿತ ಸಂಸ್ಥೆಗಳನ್ನು ಕೆಣಕುವ ಪ್ರಯತ್ನ. ಈ ವರದಿಯಲ್ಲಿ ಯಾವುದೇ ಸತ್ಯಾಂಶವಿಲ್ಲ ಎಂದು ಹೇಳಿದ್ದಾರೆ.
ಇನ್ನು, ಈ ಬಗ್ಗೆ ಪ್ರತಿಕ್ರಿಯಿಸಿದ ಬ್ರಿಟಿಷ್ ಹೈಕಮಿಷನ್ ವಕ್ತಾರರು, ವೈಯಕ್ತಿಕ ಪ್ರಕರಗಳ ಬಗ್ಗೆ ಯಾವುದೇ ಊಹಾಪೋಹಗಳಿಗೆ ಒಳಗಾಗುವುದಿಲ್ಲ ಎಂದು ಹೇಳಿರುವುದಾಗಿ ಅಂತಾರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ.
ಇದನ್ನೂ ಓದಿ : ಒಂದು ಸಾವಿರ ವರ್ಷದಲ್ಲೇ ಇದೇ ಮೊದಲ ಬಾರಿ ಭಾರೀ ಮಳೆ, ಪ್ರವಾಹಕ್ಕೆ ತತ್ತರಿಸಿಹೋದ ಚೀನಾ!
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್
Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ
New Year: ಸ್ನೇಹಿತರ ಮನೆಗೆ ಪಾರ್ಟಿಗೆಂದು ಹೋದ ಬಾಲಕಿಯ ಮೇಲೆ ಅತ್ಯಾ*ಚಾರ
Miraculous; ಎರಡು ಬಸ್ ಗಳ ಮಧ್ಯ ಸಿಲುಕಿದರೂ ವ್ಯಕ್ತಿ ಬಚಾವ್: ವೈರಲ್ ವಿಡಿಯೋ
China; ಭಾರತದ ಭೂಭಾಗದಲ್ಲಿ ಎರಡು ಕೌಂಟಿಗಳು: ಕೇಂದ್ರದಿಂದ ಬಲವಾದ ಪ್ರತಿಭಟನೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.