ರೈಲ್ವೇ ನಿಲ್ದಾಣದ ಟಿವಿ ಸ್ಕ್ರೀನ್ ನಲ್ಲಿ ಅಶ್ಲೀಲ ವಿಡಿಯೋ ಪ್ರಸಾರ: ಮುಜುಗರಕ್ಕೊಳಗಾದ ಜನ
Team Udayavani, Mar 20, 2023, 10:00 AM IST
ಪಾಟ್ನಾ: ರೈಲ್ವೇ ನಿಲ್ದಾಣದಲ್ಲಿ ಹಾಕಿರುವ ಎಲ್ ಇಡಿ ಸ್ಕ್ರೀನ್ ( ಟಿವಿ ಸ್ಕ್ರೀನ್) ನಲ್ಲಿ ಏಕಾಏಕಿ ಅಶ್ಲೀಲ ದೃಶ್ಯಗಳು ಪ್ರಸಾರವಾಗಿ ನೂರಾರು ಮಂದಿ ಪ್ರಯಾಣಿಕರು ಮುಜುಗರಕ್ಕೊಳಗಾದ ಘಟನೆ ಬಿಹಾರದ ಪಾಟ್ನಾದಲ್ಲಿ ಭಾನುವಾರ ( ಮಾ.19 ರಂದು) ನಡೆದಿದೆ.
ಭಾನುವಾರ ಬೆಳಗ್ಗೆ 9:30 ರ ವೇಳೆಗೆ ಪಾಟ್ನಾ ರೈಲು ನಿಲ್ದಾಣದಲ್ಲಿ ಅಳವಡಿಸಿರುವ ಜಾಹೀರಾತನ್ನು ಪ್ರದರ್ಶಿಸುವ ಎಲ್ ಇಡಿ ಸ್ಕ್ರೀನ್ ಮೇಲೆ ಏಕಾಏಕಿ ವಯಸ್ಕ ವಿಡಿಯೋಗಳು ( ಅಶ್ಲೀಲ ದೃಶ್ಯಗಳು) ಪ್ರಸಾರವಾಗಿದೆ. 3 ನಿಮಿಷಗಳ ಕಾಲ ಸಾರ್ವಜನಿಕರ ಮುಂದೆ ಇಂಥ ದೃಶ್ಯಗಳು ಪ್ರಸಾರವಾದ ಹಿನ್ನೆಲೆ ಪ್ರತಿಯೊಬ್ಬರು ಮುಜುಗರಕ್ಕೆ ಒಳಗಾಗಿದ್ದಾರೆ.
ಇದನ್ನೂ ಓದಿ: ಧೋನಿ ಫಿಟ್ ಆಗಿದ್ದಾರೆ 3-4 ವರ್ಷ ಐಪಿಎಲ್ ಆಡಬಹುದು: ಆಸೀಸ್ ಮಾಜಿ ಆಟಗಾರ
ಕೂಡಲೇ ಕೆಲವರು ಸರ್ಕಾರಿ ರೈಲ್ವೆ ಪೊಲೀಸ್ (GRP) ಮತ್ತು ರೈಲ್ವೇ ರಕ್ಷಣಾ ಪಡೆ (RPF) ಯಲ್ಲಿ ದೂರು ನೀಡಿದ್ದಾರೆ.
ಪೊಲೀಸರು ಜಾಹೀರಾತು ಪ್ರದರ್ಶನ ಮಾಡುವ ಸಂಸ್ಥೆ ದತ್ತಾ ಕಮ್ಯುನಿಕೇಷನ್ ಅವರಲ್ಲಿ ಈ ಬಗ್ಗೆ ವಿಚಾರಿಸಿ ಮಹಿಳೆಯರು, ಮಕ್ಕಳು ಸೇರಿದಂತೆ ನೂರಾರು ಪ್ರಯಾಣಿಕರ ಮುಂದೆ ಈ ರೀತಿಯ ಅಸಭ್ಯ ದೃಶ್ಯಗಳನ್ನು ಪ್ರಸಾರ ಮಾಡಿದ್ದಕ್ಕೆ ಚಾಟಿ ಬೀಸಿ, ಸಂಸ್ಥೆಗೆ ಜಾಹೀರಾತು ಪ್ರಸಾರ ಮಾಡಲು ನೀಡಿದ ಜಾಹೀರಾತು ಗುತ್ತಿಗೆಯನ್ನು ರದ್ದುಗೊಳಿಸಿದೆ. ಅದರ ವಿರುದ್ಧ ಎಫ್ ಐಆರ್ ದಾಖಲಿಸಿದೆ ಎಂದು ವರದಿ ತಿಳಿಸಿದೆ.
ಈ ಕುರಿತು ರೈಲ್ವೆ ಇಲಾಖೆ ಪ್ರತ್ಯೇಕವಾಗಿ ತನಿಖೆ ನಡೆಸುತ್ತಿದೆ. ಪ್ಲಾಟ್‌ಫಾರ್ಮ್ ಸಂಖ್ಯೆ 10 ರಲ್ಲಿ ವೀಡಿಯೊವನ್ನು ನಿರ್ದಿಷ್ಟವಾಗಿ ಪ್ಲೇ ಮಾಡಲಾಗಿದೆ ಎನ್ನುವುದರ ಬಗ್ಗೆ ಗಮನ ಹರಿಸಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jammu – Kashmir: ಮತ್ತೆ ಅಟ್ಟಹಾಸ ಮೆರೆದ ಉಗ್ರರು… ಇಬ್ಬರನ್ನು ಅಪಹರಿಸಿ ಹ*ತ್ಯೆ
Maharashtra: ಮತ ನೀಡಿದರೆ ಮದುವೆ ಮಾಡಿಸುವೆ: ಶರದ್ ಬಣದ ನಾಯಕ
India-Afghanistan: ಆಫ್ಘನ್ ಜೊತೆಗೆ ಬಾಂಧವ್ಯ ಪುನಃಸ್ಥಾಪನೆಗೆ ಭಾರತ ಸಜ್ಜು?
Doctor: ಸೀರೆ ಉಟ್ಟ ಸ್ತ್ರೀಯರೇ,ಪೆಟಿಕೋಟ್ ಕ್ಯಾನ್ಸರ್ ಬಗ್ಗೆ ಎಚ್ಚರವಿರಲಿ
Panaji: ವಿದೇಶಿ ಪ್ರವಾಸಿಗರ ಕಳೆದುಕೊಂಡ ಗೋವಾ: ಆರ್ಥಿಕ ಅಪಾಯದ ಭೀತಿ!
MUST WATCH
ಹೊಸ ಸೇರ್ಪಡೆ
Hubli: ಜೆಪಿಸಿ ಬಗ್ಗೆ ಆರೋಪ ಮಾಡುವವರಿಗೆ ಸಂವಿಧಾನದ ಬಗ್ಗೆ ಗೌರವ ಇಲ್ಲ: ಬೊಮ್ಮಾಯಿ
Koppala: ಅಧಿಕಾರಿಗಳ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆಗೆ ಯತ್ನಿಸಿದ ಜೆಸ್ಕಾಂ ಗುತ್ತಿಗೆದಾರ
Tragedy: ಭೀಕರ ಬೈಕ್ ಅಪಘಾತ… ಕಾಲೇಜಿಗೆ ಹೊರಟಿದ್ದ ಇಬ್ಬರು ಯುವಕರು ಸ್ಥಳದಲ್ಲೇ ಮೃತ್ಯು
Mangaluru: ಬೆಳ್ಳಂಬೆಳಗ್ಗೆ ವಿಮಾನ ನಿಲ್ದಾಣದ ಪರಿಸರದಲ್ಲಿ ಚಿರತೆ ಓಡಾಟ… ಪರಿಶೀಲನೆ
Bengaluru: ದಾನದಲ್ಲಿ ಬೆಂಗಳೂರು ದೇಶದಲ್ಲೇ ನಂ.3
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.