ಉಗ್ರ ಸಂಘಟನೆ ಸೇರುವ ಪ್ರಮಾಣದಲ್ಲಿ ಇಳಿಕೆ
Team Udayavani, Feb 21, 2020, 9:49 PM IST
ಶ್ರೀನಗರ: ಭಯೋತ್ಪಾದನೆ ಪೀಡಿತ ಜಮ್ಮು-ಕಾಶ್ಮೀರದಲ್ಲಿ ಸ್ಥಳೀಯ ಯುವಕರು ಉಗ್ರ ಸಂಘಟನೆಗಳಿಗೆ ಸೇರುವ ಪ್ರಮಾಣ ತೀವ್ರವಾಗಿ ಕಡಿಮೆಯಾಗಿದೆ. ಇದಕ್ಕೆ ಕಾರಣ ಸೇನೆಯ ಜನಸ್ನೇಹಿ “ಮಾ’ ಕಾರ್ಯಾಚರಣೆ ಎಂದು ಲೆಫ್ಟಿನೆಂಟ್ ಜನರಲ್ ಕನ್ವಲ್‌ಜೀತ್ ಸಿಂಗ್ ಧಿಲ್ಲೋನ್ ಹೇಳಿದ್ದಾರೆ. ಈ ಕಾರ್ಯಾಚರಣೆ ನಡೆಸುವ ಸೇನಾತಂಡವನ್ನು ಧಿಲ್ಲೋನ್ ಮುನ್ನಡೆಸುತ್ತಿದ್ದಾರೆ.
ಎನ್‌ಕೌಂಟರ್ ವೇಳೆ ಸಿಕ್ಕಿಬೀಳುವ ಸ್ಥಳೀಯ ಉಗ್ರರನ್ನು, ಅವರ ತಾಯಂದಿರೊಂದಿಗೆ ಮುಖಾಮುಖೀ ಮಾಡಿಸುವುದು ಮಾ ಕಾರ್ಯಾಚರಣೆಯ ಉದ್ದೇಶ. ಅದು ಹಲವು ಯುವಕರನ್ನು ಸಹಜ ಜೀವನಕ್ಕೆ ಹಿಂತಿರುಗುವಂತೆ ಮಾಡಿದೆ.
ನಮ್ಮೆಲ್ಲ ಕಾರ್ಯಾಚರಣೆಗಳಲ್ಲಿ, ಸ್ಥಳೀಯ ಭಯೋತ್ಪಾದಕರನ್ನು ಮುಖ್ಯವಾಹಿನಿಗೆ ಹಿಂತಿರುಗಲು ಗರಿಷ್ಠ ಅವಕಾಶ ನೀಡಿದ್ದೇವೆ. ಕೆಲವೊಮ್ಮೆ ಅರ್ಧಕ್ಕೆ ಎನ್‌ಕೌಂಟರ್ ನಿಲ್ಲಿಸಿ, ಹಿರಿಯರನ್ನು ಭಯೋತ್ಪಾದನೆ ಜಾಲಕ್ಕೆ ಸಿಕ್ಕಿಬಿದ್ದ ಯುವಕರ ಮನವೊಲಿಸಲು ಬಳಸುತ್ತಿದ್ದೇವೆ. ಇದರಿಂದ ಸಾಕಷ್ಟು ಯಶಸ್ಸು ಸೇನೆಗೆ ಸಿಕ್ಕಿದೆ ಎಂದು ಅವರು ಹೇಳಿದ್ದಾರೆ.
ಜಮ್ಮುಕಾಶ್ಮೀರವು ಎರಡು ಕೇಂದ್ರಾಡಳಿತ ಪ್ರದೇಶಗಳಾದ ನಂತರ ಉಗ್ರ ಜಾಲ ಸೇರಿಕೊಳ್ಳುವವರ ಸಂಖ್ಯೆ ಬಹಳ ಕಡಿಮೆಯಾಗಿದೆ. ಸರಾಸರಿ ಐವರು ಮಾತ್ರ ಭಯೋತ್ಪಾದಕ ತಂಡ ಸೇರುತ್ತಿದ್ದಾರೆ. ಇದಕ್ಕೂ ಮುನ್ನ ತಿಂಗಳಿಗೆ 14 ಮಂದಿ ಸೇರುತ್ತಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Andaman: ಕೋಸ್ಟ್ ಗಾರ್ಡ್ ಕಾರ್ಯಾಚರಣೆ… ಮೀನುಗಾರಿಕಾ ದೋಣಿಯಲ್ಲಿದ್ದ 5ಟನ್ ಮಾದಕ ವಸ್ತು ವಶ
Maharashtra: ಕಾಂಗ್ರೆಸ್ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ
Politics: ಫಡ್ನವೀಸ್ ಗೆ ಬೆಂಬಲ ನೀಡಿದ ಅಜಿತ್; ಮಹಾರಾಷ್ಟ್ರದಲ್ಲಿ ಮುಗಿಯದ ಸಿಎಂ ತಿಕ್ಕಾಟ
Video: ನೋಟಿನ ಮಾಲೆಯ ನೋಟು ಎಗರಿಸಿದ ಕಳ್ಳ… ಮದುವೆ ಬಿಟ್ಟು ಕಳ್ಳನ ಹಿಂದೆ ಓಡಿದ ವರ
Sambhal Case Follow Up:ಹೊರಗಿನವರಿಗೆ ಸಂಭಾಲ್ ಪ್ರವೇಶಕ್ಕೆ ನಿರ್ಬಂಧ,ಜಲ್ಲಿ ಮಾರಾಟ ನಿಷೇಧ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
ಮುಧೋಳ: ಹಲಗಲಿಯಲ್ಲಿ ಸಾಂಸ್ಕೃತಿಕ ಭವನ ನಿರ್ಮಾಣಕ್ಕೆ ಸಾಥ್
Waqf; ದಾನದ ಆಸ್ತಿ ಬೇರೆ, ಕಂಡವರ ಆಸ್ತಿ ವಕ್ಫ್ ಬೋರ್ಡ್ ಗೆ ಬರೆಯುವುದು ಬೇರೆ: ಸಿ.ಟಿ ರವಿ
Belthangady: ಕಡೆಗೂ ಬಂತು ಇಂದಿರಾ ಕ್ಯಾಂಟೀನ್
World Test Championship: ಪರ್ತ್ ಗೆಲುವಿನೊಂದಿಗೆ ಅಂಕಪಟ್ಟಿಯಲ್ಲಿ ಭಾರೀ ಬದಲಾವಣೆ
Beirut ಮೇಲೆ ದಾಳಿ…ಇಸ್ರೇಲ್ ಮೇಲೆ 250 ರಾಕೆಟ್ ದಾಳಿ ನಡೆಸಿದ ಹೆಜ್ಬುಲ್ಲಾ; ಪ್ರತಿದಾಳಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.