ಹಿಂದಿ ಹೇರಿಕೆ ಸಹಿಸೆವು; ಸಂಪರ್ಕ ಭಾಷೆಯಾಗಿ ಹಿಂದಿ ಬಳಸಬೇಕೆಂದ ಅಮಿತ್ ಶಾ
ಕಾಂಗ್ರೆಸ್, ಜೆಡಿಎಸ್, ಡಿಎಂಕೆ, ಟಿಎಂಸಿಯಿಂದ ವಿರೋಧ
Team Udayavani, Apr 9, 2022, 7:10 AM IST
ಹೊಸದಿಲ್ಲಿ/ಬೆಂಗಳೂರು: “ರಾಜ್ಯಗಳು ಪರಸ್ಪರ ಸಂಪರ್ಕ ಭಾಷೆಯಾಗಿ ಇಂಗ್ಲಿಷ್‌ಗೆ ಬದಲಾಗಿ ಹಿಂದಿಯನ್ನೇ ಬಳಸಬೇಕು’ ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಹೇಳಿಕೆಗೆ ಕರ್ನಾಟಕ, ತಮಿಳುನಾಡು ಸಹಿತ ಹಲವು ರಾಜ್ಯಗಳಿಂದ ತೀವ್ರ ಆಕ್ಷೇಪ ವ್ಯಕ್ತವಾಗಿದೆ.
“ಕರ್ನಾಟಕದಲ್ಲಿ ಕನ್ನಡಕ್ಕೆ ಮೊದಲ ಸ್ಥಾನ. ಯಾವುದೇ ಒಂದು ಭಾಷೆ ಹೇರಲು ಹೊರಟರೆ ಸಹಿಸಲು ಸಾಧ್ಯವಿಲ್ಲ’ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದರೆ, “ಹಿಂದಿ ಹೇರಿಕೆ ಮಾಡುವ ನಿಮ್ಮ ಯತ್ನ ಫಲಿಸುವುದಿಲ್ಲ’ ಎಂದು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಹೇಳಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಮಾಜಿ ಸಚಿವ ದಿನೇಶ್ ಗುಂಡೂರಾವ್, ಡಿಎಂಕೆ ಸಂಸದೆ ಕನಿಮೋಳಿ, ಪಿಎಂಕೆ ಸ್ಥಾಪಕ ಎಸ್.ರಾಮದಾಸ್, ಜೆಡಿಎಸ್, ತೃಣಮೂಲ ಕಾಂಗ್ರೆಸ್ ನಾಯಕರು ಸಹಿತ ಹಲವರು ಶಾ ಹೇಳಿಕೆಯನ್ನು ಖಂಡಿಸಿದ್ದಾರೆ.
ಶಾ ಹೇಳಿದ್ದೇನು?
ಸಂಸದೀಯ ಅಧಿಕೃತ ಭಾಷಾ ಸಮಿತಿಯ 37ನೇ ಸಭೆಯಲ್ಲಿ ಶುಕ್ರವಾರ ಮಾತನಾಡಿದ ಅಮಿತ್ ಶಾ, “ಪ್ರಧಾನಿ ನರೇಂದ್ರ ಮೋದಿಯವರು ಸರಕಾರದ ವ್ಯವಹಾರವನ್ನು ಅಧಿಕೃತ ಭಾಷೆಯಲ್ಲೇ ನಡೆಸಲು, ಆ ಮೂಲಕ ಹಿಂದಿಗೆ ಹೆಚ್ಚಿನ ಪ್ರಾಮುಖ್ಯ ನೀಡಲು ನಿರ್ಧರಿಸಿದ್ದಾರೆ.
ಈಗ ಅಧಿಕೃತ ಭಾಷೆಯನ್ನು ದೇಶದ ಏಕತೆಗಾಗಿ ಬಳಸುವ ಸಂದರ್ಭ ಬಂದಿದೆ. ಬೇರೆ ಬೇರೆ ರಾಜ್ಯಗಳಿಗೆ ಸೇರಿರುವ ಬೇರೆ ಬೇರೆ ಭಾಷೆ ಗಳನ್ನಾಡುವ ಜನರು ಒಂದೆಡೆ ಸೇರಿದಾಗ ಇಂಗ್ಲಿಷ್‌ನಲ್ಲಿ ಮಾತನಾ ಡುವ ಬದಲು, ಹಿಂದಿಯಲ್ಲೇ ಮಾತನಾಡಬೇಕು’ ಎಂದಿದ್ದಾರೆ. ಹಾಗಂತ ಹಿಂದಿಯನ್ನು ಇಂಗ್ಲಿಷ್‌ನ ಪರ್ಯಾಯವೆಂದು ಸ್ವೀಕರಿಸಬೇಕೇ ಹೊರತು ಸ್ಥಳೀಯ ಭಾಷೆ ಎಂದು ಸ್ವೀಕರಿಸಬೇಕಾಗಿಲ್ಲ ಎಂದೂ ಅವರು ಹೇಳಿದ್ದಾರೆ. ಜತೆಗೆ 9ನೇ ತರಗತಿಯವರೆಗೆ ಪ್ರಾಥಮಿಕ ಶಾಲೆ ಮಕ್ಕಳಿಗೆ ಹಿಂದಿ ಭಾಷೆಯ ಜ್ಞಾನವನ್ನು ನೀಡಬೇಕು ಮತ್ತು ಹಿಂದಿ ಕಲಿಸುವ ಪರೀಕ್ಷೆಗಳಿಗೆ ಹೆಚ್ಚಿನ ಒತ್ತು ನೀಡಬೇಕು ಎಂದೂ ಶಾ ಹೇಳಿದ್ದಾರೆ.
ಇದನ್ನೂ ಓದಿ:ಸೆಲ್ಟೋಸ್, ಸಾನೆಟ್ ಫೇಸ್‌ಲಿಫ್ಟ್ ; 2022ರ ಹೊಸ ವರ್ಷನ್; ಸಾನೆಟ್ ಎರಡು ಬಣ್ಣಗಳಲ್ಲಿ ಲಭ್ಯ
ಶಾ ಅವರ ಹೇಳಿಕೆಯು ಭಾರತದ ಏಕತೆಗೆ ಧಕ್ಕೆ ತರುವಂಥದ್ದು. ಇಂತಹ ಹೇಳಿಕೆಗಳ ಮೂಲಕ ಬಿಜೆಪಿಯು ಭಾರತದ ವೈವಿಧ್ಯವನ್ನು ನಾಶ ಮಾಡಲು ಹೊರಟಿದೆ. ಬಿಜೆಪಿ ಪದೇಪದೆ ಈ ತಪ್ಪನ್ನು ಮಾಡುತ್ತಿದೆ. ನೀವು ಇದರಲ್ಲಿ ಯಾವತ್ತೂ ಯಶಸ್ವಿಯಾಗಲು ಸಾಧ್ಯವಿಲ್ಲ.
– ಎಂ.ಕೆ. ಸ್ಟಾಲಿನ್, ತಮಿಳುನಾಡು ಸಿಎಂ
ನಾವು ಹಿಂದಿಯನ್ನು ಗೌರವಿಸುತ್ತೇವೆ. ಆದರೆ, ಹೇರಿಕೆಯನ್ನು ಒಪ್ಪುವುದಿಲ್ಲ. ಇಂಗ್ಲಿಷ್ ಭಾಷೆಯನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ಬಳಸಲಾಗುತ್ತದೆ. ಭಾರತದಲ್ಲಿ ಹಲವು ರಾಜ್ಯಗಳಿವೆ, ಹಲವು ಭಾಷೆಗಳಿವೆ. ತಮ್ಮ ಹೇಳಿಕೆ ಬಗ್ಗೆ ಶಾ ಮತ್ತೂಮ್ಮೆ ಯೋಚಿಸಲಿ.
– ಕುನಾಲ್ ಘೋಷ್, ಟಿಎಂಸಿ ವಕ್ತಾರ
ಒಬ್ಬ ಸ್ವಾಭಿಮಾನಿ ಕನ್ನಡಿಗನಾಗಿ ಈ ಹೇಳಿಕೆ ಯನ್ನು ತೀವ್ರವಾಗಿ ಖಂಡಿಸುತ್ತೇನೆ. ಶಾ ಅವರ ಹೇಳಿಕೆ ಒಕ್ಕೂಟ ವ್ಯವಸ್ಥೆಯ ಆಶಯಗಳಿಗೆ ವಿರುದ್ಧ ವಾದದ್ದು ಮಾತ್ರವಲ್ಲ, ಮಾತೃ ಭಾಷೆಗೆ ಮಾಡಿರುವ ಅವಮಾನ. ಹಿಂದಿ ಯಲ್ಲೇ ವ್ಯವಹರಿಸಬೇಕು ಎನ್ನು ವುದು ಸಾಂಸ್ಕೃತಿಕ ಭಯೋತ್ಪಾದನೆ.
-ಸಿದ್ದರಾಮಯ್ಯ, ವಿಪಕ್ಷ ನಾಯಕ
ಹಿಂದಿ ಭಾಷೆಯನ್ನು ಆಂಗ್ಲ ಭಾಷೆಗೆ ಪರ್ಯಾಯ ವಾಗಿ ಬಳಸಬೇಕೆಂಬ ಶಾ ಹೇಳಿಕೆ ಖಂಡನೀಯ. ಒಕ್ಕೂಟ ವ್ಯವಸ್ಥೆ ಯನ್ನೇ ಬುಡಮೇಲು ಮಾಡಲು ಹೊರಟಿರುವ ಕೇಂದ್ರ ಸರಕಾರದ ಈ ಭಾಷಾ ಭಯೋತ್ಪಾದನೆಯನ್ನು ನಾವೆಲ್ಲರೂ ಖಂಡಿಸಬೇಕು.
– ಜೆಡಿಎಸ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Goa: ಕ್ಯಾಲಂಗುಟ್ ಬೀಚ್‌ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾ*ವು, 20 ಮಂದಿ ರಕ್ಷಣೆ
Uttar Pradesh: 6 ಪುರುಷರ ವರಿಸಿ ವಂಚಿಸಿದ ಯುವತಿಯ ಗ್ಯಾಂಗ್ ಜೈಲಿಗೆ
Road Project: ಶಿರಾಡಿ ಘಾಟ್ ಸುರಂಗ ಯೋಜನೆಗೆ ಡಿಪಿಆರ್ ರಚಿಸಿ: ಕೇಂದ್ರ ಸೂಚನೆ
Hosur ವಿಮಾನ ನಿಲ್ದಾಣಕ್ಕೆ 2 ಸ್ಥಳ ನಿಗದಿಪಡಿಸಿದ ತಮಿಳುನಾಡು
GST: ಖರೀದಿ, ಮಾರಾಟ ದರದ ವ್ಯತ್ಯಾಸಕ್ಕಷ್ಟೇ 18% ಜಿಎಸ್‌ಟಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Fraud Case: ಡಿಕೆಸು ಹೆಸರಿನಲ್ಲಿ 8.4 ಕೋಟಿ ರೂ. ವಂಚನೆ; ಆರೋಪಿಗಳಿಗೆ ನೋಟಿಸ್
Arrested: ಸ್ನೇಹಿತನ ಹತ್ಯೆಗೈದಿದ್ದ ಆರೋಪಿ ಬಂಧನ
Toll fee: ಹೆಬ್ಬಾಳ-ಸಿಲ್ಕ್ ಬೋರ್ಡ್ ಸುರಂಗ ರಸ್ತೆ: ಕೇವಲ 18 ಕಿ.ಮೀ.ಗೆ 288 ರೂ. ಸುಂಕ?
Bengaluru: ಕ್ಯಾಬ್ ಡಿಕ್ಕಿ;ಬುಲೆಟ್‌ನಲ್ಲಿ ತೆರಳುತ್ತಿದ್ದ ಸಾಫ್ಟ್ವೇರ್ ಎಂಜಿನಿಯರ್ ಸಾವು
Belagavi: ಹುತಾತ್ಮ ಯೋಧರ ಕುಟುಂಬಕ್ಕೆ ಸರ್ಕಾರದಿಂದ ನೆರವು: ಸಿಎಂ ಘೋಷಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.