ಕಾಶ್ಮೀರದಲ್ಲಿ ಇನ್ನೂ ಸಮಸ್ಯೆಯಿದೆ; ಆದರೆ ಜನರು ಸಂತೋಷದಲ್ಲಿದ್ದಾರೆ: ಬಿಜೆಪಿ ನಾಯಕ
Team Udayavani, Oct 5, 2019, 8:06 AM IST
ಹೈದರಾಬಾದ್: ಅನುಚ್ಛೇಧ 370ನ್ನು ರದ್ದುಗೊಳಿಸಿದ ನಂತರ ಜಮ್ಮು ಕಾಶ್ಮೀರ ಮತ್ತು ಲಡಾಖ್ ನ ಜನತೆ ಸಂತೋಷದಿಂದಿದ್ದಾರೆ. ಆದರೆ ಅಲ್ಲಿ ಇನ್ನೂ ಕೆಲವು ಸಮಸ್ಯೆಗಳು ಇವೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಾಮ್ ಮಾಧವ್ ಹೇಳಿಕೆ ನೀಡಿದ್ದಾರೆ.
ರಾಷ್ಟ್ರೀಯ ಏಕತಾ ಅಭಿಯಾನದಲ್ಲಿ ಮಾತನಾಡಿದ ಅವರು, ಜಮ್ಮುವಿನಲ್ಲಿ ಜನರು ಖುಷಿಯಿಂದಿದ್ದಾರೆ. ದೇಶದೊಂದಿಗೆ ಹೊಂದಿಕೊಂಡು ಹೋಗಲು ಸಿದ್ದರಾಗಿದ್ದಾರೆ. ಆದರೆ ಕಾಶ್ಮೀರ ಕಣಿವೆಯಲ್ಲಿ ಸ್ವಲ್ಪ ತೊಂದರೆಯಿದೆ ಎಂದು ರಾಮ್ ಮಾಧವ್ ಹೇಳಿದ್ದಾರೆ.
ಲಡಾಖ್ ಪ್ರಾಂತ್ಯದ ಜನರೂ ತುಂಬಾ ಸಂತೋಷದಿಂದ್ದಾರೆ. ಯಾಕೆಂದರೆ ಇದು ಅವರ ಬಹುದಿನಗಳ ಕನಸಾಗಿತ್ತು ಎಂದು ಅಭಿಪ್ರಾಯಪಟ್ಟಿದ್ದಾರೆ. ಲಡಾಖ್ ಅನ್ನು ಕೇಂದ್ರಾಡಳಿತ ಪ್ರದೇಶ ಎಂದು ಕೇಂದ್ರ ಸರಕಾರ ಘೋಷಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.