ಶೇ. 10ರ ಮೀಸಲಾತಿಗಾಗಿ ಸೀಟು ಹೆಚ್ಚಳ: ಜಾವಡೇಕರ್
Team Udayavani, Jan 16, 2019, 3:50 AM IST
ನವದೆಹಲಿ: ಹೊಸದಾಗಿ ಜಾರಿಗೆ ಬಂದಿರುವ ಸಾಮಾನ್ಯ ವರ್ಗಕ್ಕೆ ಶೇ. 10ರಷ್ಟು ಮೀಸಲಾತಿ ನಿಯಮಕ್ಕನುಗುಣವಾಗಿ ದೇಶದ ಎಲ್ಲಾ ವಿಶ್ವವಿದ್ಯಾಲಯಗಳಲ್ಲಿನ ಸೀಟುಗಳ ಸಂಖ್ಯೆಯನ್ನು ಶೇ. 25ರಷ್ಟು ಹೆಚ್ಚಿಸುವುದಾಗಿ ಕೇಂದ್ರ ಮಾನವ ಸಂಪನ್ಮೂಲ ಸಚಿವ ಪ್ರಕಾಶ್ ಜಾವಡೇಕರ್ ತಿಳಿಸಿದ್ದಾರೆ. 2019-20ನೇ ಶೈಕ್ಷಣಿಕ ವರ್ಷದಿಂದಲೇ ಇದು ಜಾರಿಗೆ ಬರಲಿದೆ ಎಂದು ಹೇಳಲಾಗಿದೆ.
ವಿಶ್ವವಿದ್ಯಾಲಯ ಧನ ಸಹಾಯ ಆಯೋಗ (ಯುಜಿಸಿ) ಮತ್ತು ಆಲ್ ಇಂಡಿಯಾ ಕೌನ್ಸಿಲ್ ಆಫ್ ಟೆಕ್ನಿಕಲ್ ಎಜುಕೇಷನ್ (ಎಐಸಿಟಿಇ) ಪದಾಧಿಕಾರಿಗಳ ಜತೆಗೆ ಇತ್ತೀಚೆಗೆ ನಡೆದ ಸಭೆಯಲ್ಲಿ ಈ ಕುರಿತಂತೆ ನಿರ್ಧಾರ ಕೈಗೊಳ್ಳಲಾಗಿದೆ. ಎಸ್.ಸಿ., ಎಸ್.ಟಿ. ಮೀಸಲಾತಿಗೆ ತೊಂದರೆಯಾಗಬಾರದೆಂಬ ಉದ್ದೇಶದಿಂದ ಸೀಟುಗಳ ಹೆಚ್ಚಳಕ್ಕೆ ನಿರ್ಧರಿಸಲಾಗಿದೆ. ಇದೇ ವೇಳೆ, ಶೇ. 10ರ ಮೀಸಲಾತಿಯನ್ನು ಹೆಚ್ಚಿಸಲು ಖಾಸಗಿ ವಿವಿಗಳೂ ಉತ್ಸಾಹ ತೋರಿವೆ ಎಂದು ಅವರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ
Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು
Gujarat: 700 ಕೆ.ಜಿ. ಡ್ರಗ್ಸ್ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ
Bombay high court: ವಯಸ್ಕಳಲ್ಲದ ಪತ್ನಿ ಜತೆ ಒಪ್ಪಿತ ಲೈಂಗಿಕ ಸಂಬಂಧ ರೇ*ಪ್
Jharkhand; ವಿಮಾನದಲ್ಲಿ ತಾಂತ್ರಿಕ ದೋಷ: 2 ಗಂಟೆ ಕಾದ ಪ್ರಧಾನಿ ಮೋದಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.