ಮುಂದಿನ ವಾರಗಳಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆ
ಡ್ರೋನ್ ದಾಳಿ ಬಳಿಕ ಸೌದಿ ಅರಾಮ್ಕೋ ವ್ಯವಸ್ಥೆ ಪುನಃಸ್ಥಾಪನೆ
Team Udayavani, Oct 3, 2019, 4:35 PM IST
ಹೊಸದಿಲ್ಲಿ: ಪೆಟ್ರೋಲ್ ಬೆಲೆ ಏರಿಕೆಗೆ ಅ.3ರಂದು ತುಸು ಬ್ರೇಕ್ ಬಿದ್ದಿದೆ. ಮುಂದಿನ ವಾರಗಳಲ್ಲಿ ಇನ್ನಷ್ಟು ಬೆಲೆ ಇಳಿಯುವುದಾಗಿ ಸರಕಾರಿ ಸ್ವಾಮ್ಯದ ಇಂಡಿಯನ್ ಆಯಿಲ್ ಹೇಳಿದೆ.
ಗುರುವಾರ ಪೆಟ್ರೋಲ್ ಬೆಲೆ 10 ಪೈಸೆ ಇಳಿಕೆಯಾಗಿದ್ದು, ಡೀಸೆಲ್ ಬೆಲೆ 6 ಪೈಸೆ ಇಳಿಕೆಯಾಗಿದೆ. ಸೆ.14ರಂದು ಸೌದಿ ಅರೇಬಿಯಾದ ಅರಾಮ್ಕೋ ತೈಲ ಕಂಪೆನಿ ಮೇಲೆ ಡ್ರೋನ್ ದಾಳಿ ಬಳಿಕ ಪೆಟ್ರೋಲಿಯಂ ಉತ್ಪನ್ನಗಳ ಬೆಲೆ ಏರಿಕೆಯಾಗಿತ್ತು.
ಪೂರೈಕೆಯಲ್ಲಿ ವ್ಯತ್ಯಯ ಮತ್ತು ಅಂ.ರಾ. ಮಾರುಕಟ್ಟೆಯಲ್ಲಿಯ ಪರಿಣಾಮದಿಂದಾಗಿ ಬೆಲೆ ಏರಿಕೆ ಕಂಡಿತ್ತು. ಸದ್ಯ ಸಮಸ್ಯೆ ಸರಿಪಡಿಸಲಾಗಿದೆ. ಕಚ್ಚಾ ತೈಲದ ಬೆಲೆಯೂ ತುಸು ಇಳಿಕೆಯಾಗಿದ್ದು, ಪೆಟ್ರೋಲ್ ಬೆಲೆಯೂ ಇಳಿಯುವ ನಿರೀಕ್ಷೆ ಹೆಚ್ಚಿದ ಎಂದು ಇಂಡಿಯನ್ ಆಯಿಲ್ನ ಅಧ್ಯಕ್ಷ ಸಂಜೀವ್ ಸಿಂಗ್ ಹೇಳಿದ್ದಾರೆ.
ದಕ್ಷಿಣ ಏಷ್ಯಾ ದೇಶಗಳು ಅತಿ ಹೆಚ್ಚಾಗಿ ಅರಬ್ ದೇಶಗಳನ್ನು ತೈಲ ಪೂರೈಕೆಗೆ ನೆಚ್ಚಿಕೊಂಡಿದ್ದು, ಅಲ್ಲಿನ ತೈಲ ವ್ಯವಸ್ಥೆ, ಪೂರೈಕೆ ವ್ಯವಸ್ಥೆಯಲ್ಲಿ ತುಸು ಏರುಪೇರಾದರೂ ಅದರ ಪರಿಣಾಮ ಇಲ್ಲಿನ ಮಾರುಕಟ್ಟೆ ಮೇಲೆ ಆಗುಗುತ್ತದೆ. ಆದ್ದರಿಂದ ಇಂಧನ ವಲಯ ಸುರಕ್ಷತೆ ಮತ್ತು ಕ್ರಮಬದ್ಧ ಪೂರೈಕೆಗೆ ಆದ್ಯತೆ ಎಲ್ಲ ದೇಶಗಳ ಪ್ರಮುಖ ಅಜೆಂಡಾ ಆಗಿದೆ ಎಂದು ಕೇಂದ್ರ ಪೆಟ್ರೋಲಿಯಂ ಸಚಿವ ಧರ್ಮೇಂದ್ರ ಪ್ರಧಾನ್ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Parliament; ಸಂಸತ್ ಭವನ ಎದುರು ತಳ್ಳಾಟ; ಇಬ್ಬರು ಸಂಸದರಿಗೆ ಗಾಯ, ರಾಹುಲ್ ವಿರುದ್ದ ಆರೋಪ
ಕತ್ತರಿಸಿದ ಮೂಗನ್ನು ಚೀಲದಲ್ಲಿ ಇಟ್ಟು ಆಸ್ಪತ್ರೆಗೆ ಓಡಿ ಬಂದ ಮಹಿಳೆ, ಬೆಚ್ಚಿ ಬಿದ್ದ ವೈದ್ಯರು
Ambedkar row: ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜಕೀಯ ಬಿಟ್ಟು ಹೋಗಲಿ ಎಂದ ಲಾಲು ಪ್ರಸಾದ್
ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಪೊಲೀಸರು, ಎಲ್ಲಿ…? ಇಲ್ಲಿದೆ ನೋಡಿ ಮಾಹಿತಿ
K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ
MUST WATCH
ಹೊಸ ಸೇರ್ಪಡೆ
Parliament; ಸಂಸತ್ ಭವನ ಎದುರು ತಳ್ಳಾಟ; ಇಬ್ಬರು ಸಂಸದರಿಗೆ ಗಾಯ, ರಾಹುಲ್ ವಿರುದ್ದ ಆರೋಪ
BBK11: ಕೊನೆಗೂ ಬಿಗ್ ಬಾಸ್ ಬಿಟ್ಟು ಬಂದಿದ್ದಕ್ಕೆ ಕಾರಣ ಬಹಿರಂಗಪಡಿಸಿದ ಗೋಲ್ಡ್ ಸುರೇಶ್
ಕತ್ತರಿಸಿದ ಮೂಗನ್ನು ಚೀಲದಲ್ಲಿ ಇಟ್ಟು ಆಸ್ಪತ್ರೆಗೆ ಓಡಿ ಬಂದ ಮಹಿಳೆ, ಬೆಚ್ಚಿ ಬಿದ್ದ ವೈದ್ಯರು
Belthangady: ಕುತ್ಲೂರು ನಿವಾಸಿಗಳ ಕೂಗು ಅರಣ್ಯರೋದನ!
Viral Video: ಖ್ಯಾತ ನ್ಯೂಸ್ ಆ್ಯಂಕರ್ ನ ಖಾಸಗಿ ವಿಡಿಯೋ ಲೀಕ್..? ಸಿಕ್ಕಾಪಟ್ಟೆ ವೈರಲ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.