ಮಾಸ್ಕ್ ಧರಿಸಲು ನಿರಾಕರಿಸಿದಕ್ಕೆ ವಿಶೇಷಚೇತನ ಮಗನನ್ನೇ ಹತ್ಯೆಗೈದ ತಂದೆ


Team Udayavani, Apr 19, 2020, 8:06 AM IST

face mask

ಕೊಲ್ಕತ್ತಾ: ಲಾಕ್ ಡೌನ್ ಹಿನ್ನಲೆಯಲ್ಲಿ ಅಗತ್ಯ ವಸ್ತುಗಳನ್ನು ತರಲೆಂದು ಮನೆಯಿಂದ ಹೊರಗೆ ಹೋಗುವ ಸಂದರ್ಭದಲ್ಲಿ ಮಾಸ್ಕ್ ಧರಿಸಲು ನಿರಾಕರಿಸಿದಕ್ಕೆ ತಂದೆಯೇ ವಿಶೇಷ  ಚೇತನ ಮಗನನ್ನು ಹತ್ಯೆಗೈದ ಘಟನೆ ಶನಿವಾರ ಉತ್ತರ ಕೊಲ್ಕತ್ತಾದಲ್ಲಿ ನಡೆದಿದೆ ಎಂದು ವರದಿಯಾಗಿದೆ.

ಹತ್ಯೆಗೈದ ಆರೋಪಿಯನ್ನು ಬನ್ಸಿಧರ್ ಮಲ್ಲಿಕ್ (75) ಎಂದು ಗುರುತಿಸಲಾಗಿದ್ದು  ಆತನ ಮಗ ಶಿರ್ಷೆಂದು ಮಲ್ಲಿಕ್ (45) ವಿಕಲಚೇತನನಾಗಿದ್ದ.

ಮಗನನ್ನು ಹತ್ಯೆಗೈದ ನಂತರ ಬನ್ಸಿಧರ್ ಮಲ್ಲಿಕ್ ಸ್ಥಳೀಯ ಪೊಲೀಸ್ ಠಾಣೆಗೆ ತೆರಳಿ ಶರಣಾಗಿದ್ದಾನೆ.

ಶನಿವಾರ ಸಂಜೆ ಸುಮಾರು 7 ಗಂಟೆಯ ವೇಳೆಗೆ ಆರೋಪಿ  ಬನ್ಶಿಧರ್ ಮಲ್ಲಿಕ್ ಶ್ಯಾಂಪುಕೂರ್ ಪೊಲೀಸ್ ಠಾಣೆಗೆ ಶರಣಾಗಿದ್ದು,  ಸಂಜೆ 5:30 ರ ಸುಮಾರಿಗೆ ತನ್ನ ಮಗ ಸಿರ್ಷೆಂದು ಮಲ್ಲಿಕ್‌ನನ್ನು ಕತ್ತು ಹಿಸುಕಿ  ಹತ್ಯೆಗೈದಿರುವುದಾಗಿ ಒಪ್ಪಿಕೊಂಡಿದ್ದಾನೆ ಎಂದು ಕೋಲ್ಕತಾ ಪೊಲೀಸ್ ಉನ್ನತ ಅಧಿಕಾರಿ ತಿಳಿಸಿದ್ದಾರೆ.

ತನಿಖಾ ಅಧಿಕಾರಿಗಳ ಪ್ರಕಾರ, ಆರೋಪಿ ತನ್ನ ಮಗನೊಂದಿಗೆ ಸೌಹಾರ್ದಯುತ ಸಂಬಂಧವನ್ನು ಹೊಂದಿರಲಿಲ್ಲ. ಮಾತ್ರವಲ್ಲದೆ ಅವರು ನಿರಂತರವಾಗಿ  ಜಗಳವಾಡುತ್ತಿದ್ದರು. ತಂದೆ  ಖಾಸಗಿ ಸಂಸ್ಥೆಯ ನಿವೃತ್ತ ಉದ್ಯೋಗಿಯಾಗಿದ್ದರೆ, ಅವನ ಮಗ ನಿರುದ್ಯೋಗಿಯಾಗಿದ್ದರು. ಅದರ ಜೊತೆಗೆ ಮಗ  ಬಾಲ್ಯದಿಂದಲೂ ದೈಹಿಕ ವಿಕಲಾಂಗತೆಯಿಂದ ಬಳಲುತ್ತಿದ್ದರು ಎಂದು ತಿಳಿಸಿದ್ದಾರೆ.

ಕಳೆದ ಕೆಲವು ದಿನಗಳಿಂದ ಮಾಸ್ಕ್ ಧರಿಸುವ ವಿಚಾರಕ್ಕೆ ಅಗಿಂದ್ದಾಗೆ ಕಲಹಗಳಾಗುತ್ತಿದ್ದವು. ಪ್ರತಿ ಬಾರಿ ಮನೆಯಿಂದ ಹೊರಗಡೆ ತೆರಳುವಾಗ ತಂದೆ ಮಗನಿಗೆ ಮಾಸ್ಕ್ ಧರಿಸುವಂತೆ ಹೇಳುತ್ತಿದ್ದರು.  ಆದರೆ ಮಗ ಅದನ್ನು ತಿರಸ್ಕರಿಸುತ್ತಾನೆ. ಈ ಜಗಳ ವಿಕೊಪಕ್ಕೆ ತಿರುಗಿ ಶನಿವಾರ ಮಗನ ಹತ್ಯೆಯಲ್ಲಿ ಅಂತ್ಯವಾಗಿದೆ.

ಈ ಕುರಿತು ಪ್ರಕರಣ ದಾಖಲಿಸಿಕೊಂಡು ಸ್ಥಳೀಯ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ.

ಟಾಪ್ ನ್ಯೂಸ್

Mulki-kambla

Mulki: ಕಂಬಳದಿಂದ ಕೃಷಿ, ಧಾರ್ಮಿಕ ನಂಬಿಕೆ ವೃದ್ಧಿ: ನ್ಯಾ. ಎನ್‌. ಸಂತೋಷ್‌ ಹೆಗ್ಡೆ

udupi-Bar-Asso

Udupi: ಸುಪ್ರೀಂ, ಹೈಕೋರ್ಟ್‌ಗಳ ತೀರ್ಪು ಆನ್‌ಲೈನ್‌ನಲ್ಲಿ ಲಭ್ಯ: ನ್ಯಾ.ಸೂರಜ್‌

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

SASTHANA-TOLL

Kota: ಸಾಸ್ತಾನ ಟೋಲ್‌: ಡಿ.30ರ ತನಕ ಯಥಾಸ್ಥಿತಿ ಮುಂದುವರಿಕೆಗೆ ಸೂಚನೆ

mob

Samsung Phone; ಫೋಟೋ ಸೋರಿಕೆ: ಕೆಲಸಗಾರರು ವಜಾ?

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Perla-fire

Disaster: ಪೆರ್ಲದಲ್ಲಿ ಭಾರೀ ಬೆಂಕಿ ದುರಂತ; ಐದು ಅಂಗಡಿಗಳು ಸಂಪೂರ್ಣ ಭಸ್ಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

kejriwal-2

Delhi; ಸ್ತ್ರೀಯರಿಗೆ ಸಹಾಯಧನ: ಮನೆಯಲ್ಲೇ ನೋಂದಣಿ

mob

Samsung Phone; ಫೋಟೋ ಸೋರಿಕೆ: ಕೆಲಸಗಾರರು ವಜಾ?

1-kuu

ಕಾರ್ಗಿಲ್‌ ದಾಳಿ ಮಾಹಿತಿ ಕೊಟ್ಟ ಕುರಿಗಾಹಿ ಸಾವು: ಸೇನೆ ನಮನ

Surjewala

Pegasus spyware ಬಗ್ಗೆ ಸುಪ್ರೀಂಕೋರ್ಟ್‌ ತನಿಖೆ ನಡೆಸಲಿ: ಸುರ್ಜೇವಾಲಾ

1-deee

Allu Arjun ನಿವಾಸದಲ್ಲಿ ದಾಂಧಲೆ!; 8 ಮಂದಿ ಬಂಧನ: ಕೃತ್ಯ ಎಸಗಿದ್ದು ಯಾರು?

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Car-Palti

Sulya: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

Thief

Kaup: ಉದ್ಯಾವರ: ಮನೆಯ ಬೀಗ ಮುರಿದು ಸೊತ್ತು ಕಳವು

Accident-logo

Putturu: ಬೈಕ್‌-ಪಿಕಪ್‌ ಢಿಕ್ಕಿ: ಇಬ್ಬರು ಸವಾರರಿಗೆ ಗಂಭೀರ ಗಾಯ

Arrest

Bantwala: ನಾವೂರು: ಅತ್ಯಾಚಾರ; ಆರೋಪಿಗೆ ನ್ಯಾಯಾಂಗ ಬಂಧನ

Mulki-kambla

Mulki: ಕಂಬಳದಿಂದ ಕೃಷಿ, ಧಾರ್ಮಿಕ ನಂಬಿಕೆ ವೃದ್ಧಿ: ನ್ಯಾ. ಎನ್‌. ಸಂತೋಷ್‌ ಹೆಗ್ಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.