ದೆಹಲಿ ಟ್ರ್ಯಾಕ್ಟರ್ ರಾಲಿ ವೇಳೆ ಹಿಂಸಾಚಾರ; ನ್ಯಾಯಾಂಗ ತನಿಖೆ ನಡೆಸಿ: ಸುಪ್ರೀಂಗೆ ಪಿಐಎಲ್

ರೈತರ ಟ್ರ್ಯಾಕ್ಟರ್ ರಾಲಿ ವೇಳೆ ನಡೆದ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ 22 ಎಫ್ ಐಆರ್ ದಾಖಲಿಸಲಾಗಿದೆ

Team Udayavani, Jan 27, 2021, 11:35 AM IST

ದೆಹಲಿ ಟ್ರ್ಯಾಕ್ಟರ್ ರಾಲಿ ವೇಳೆ ಹಿಂಸಾಚಾರ; ನ್ಯಾಯಾಂಗ ತನಿಖೆ ನಡೆಸಿ: ಸುಪ್ರೀಂಗೆ ಪಿಐಎಲ್

ನವದೆಹಲಿ: ಗಣರಾಜ್ಯೋತ್ಸವ ದಿನಾಚರಣೆಯಂದು ರಾಜಧಾನಿ ದೆಹಲಿಯಲ್ಲಿ ರೈತರು ಹಮ್ಮಿಕೊಂಡಿದ್ದ ಟ್ರ್ಯಾಕ್ಟರ್ ರಾಲಿ ಹಿಂಸಾಚಾರಕ್ಕೆ ತಿರುಗಿ ಐತಿಹಾಸಿಕ ಕೆಂಪುಕೋಟೆಯಲ್ಲಿ ರಾಷ್ಟ್ರಧ್ವಜಕ್ಕೆ ಅವಮಾನ ಮಾಡಿದ ಘಟನೆ ಕುರಿತು ನ್ಯಾಯಾಂಗ ತನಿಖೆ ನಡೆಸುವಂತೆ ಕೋರಿ ಸುಪ್ರೀಂಕೋರ್ಟ್ ನಲ್ಲಿ ಬುಧವಾರ(ಜನವರಿ 27, 2021) ಪಿಐಎಲ್ ಸಲ್ಲಿಸಲಾಗಿದೆ.

ಇದನ್ನೂ ಓದಿ:ದೆಹಲಿ ಪರಿಸ್ಥಿತಿ ನಿರ್ವಹಣೆಗೆ ಹೆಚ್ಚುವರಿ ಅರೆಸೈನಿಕ ಪಡೆಗಳ ನಿಯೋಜನೆ

ವಕೀಲರೊಬ್ಬರು ಮಂಗಳವಾರ (ಜನವರಿ 26) ದೆಹಲಿಯಲ್ಲಿ ನಡೆದ ಘರ್ಷಣೆ ಹಾಗೂ ಹಿಂಸಾಚಾರದ ಬಗ್ಗೆ ನ್ಯಾಯಾಂಗ ತನಿಖೆ ನಡೆಸುವಂತೆ ಕೋರಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿರುವುದಾಗಿ ವರದಿ ತಿಳಿಸಿದೆ.

ಗಣರಾಜ್ಯೋತ್ಸವದಂದು ಹಿಂಸಾಚಾರ ನಡೆಸಿದ ಘಟನೆಗೆ ಸಂಬಂಧಿಸಿದ ವ್ಯಕ್ತಿಗಳ ವಿರುದ್ಧ ಎಫ್ ಐಆರ್ ದಾಖಲಿಸಿ, ಬಂಧಿಸುವಂತೆ ಪೊಲೀಸರಿಗೆ ಸುಪ್ರೀಂಕೋರ್ಟ್ ನಿರ್ದೇಶನ ನೀಡಬೇಕೆಂದು ಅರ್ಜಿಯಲ್ಲಿ ಮನವಿ ಮಾಡಿಕೊಳ್ಳಲಾಗಿದೆ ಎಂದು ವರದಿ ಹೇಳಿದೆ.

ಇದನ್ನೂ ಓದಿ:4 ವರ್ಷದ ಜೈಲುವಾಸ ಅಂತ್ಯ; ಜ.27ರಂದು ಎಐಎಡಿಎಂಕೆ ಮಾಜಿ ನಾಯಕಿ ಶಶಿಕಲಾ ಬಿಡುಗಡೆ

ಏತನ್ಮಧ್ಯೆ ಆದೇಶ ಉಲ್ಲಂಘಿಸಿ ಹಿಂಸಾಚಾರ ನಡೆಸಿದ ಘಟನೆಗೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಈಗಾಗಲೇ 22 ಪ್ರಕರಣಗಳನ್ನು ದಾಖಲಿಸಿಕೊಂಡಿರುವುದಾಗಿ ವರದಿ ತಿಳಿಸಿದೆ. ರೈತರ ಟ್ರ್ಯಾಕ್ಟರ್ ರಾಲಿ ವೇಳೆ ನಡೆದ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ 22 ಎಫ್ ಐಆರ್ ದಾಖಲಿಸಲಾಗಿದೆ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ.

ಕೇಂದ್ರದ ಮೂರು ನೂತನ ಕೃಷಿ ಕಾಯ್ದೆಗಳನ್ನು ವಿರೋಧಿಸಿ ರೈತ ಸಂಘಟನೆಗಳು ಜನವರಿ 26ರಂದು ನಡೆಸಿದ ಟ್ರ್ಯಾಕ್ಟರ್ ರಾಲಿ ವೇಳೆ ಬ್ಯಾರಿಕೇಡ್ ಕಿತ್ತೆಸೆದು ಪೊಲೀಸರ ಮೇಲೆ ಹಲ್ಲೆ ನಡೆಸಿದ್ದರು.

ದೆಹಲಿಯ ಐಟಿಒ ಪ್ರದೇಶದಲ್ಲಿ ಟ್ರ್ಯಾಕ್ಟರ್ ಅನ್ನು ಪೊಲೀಸರೇ ಮೇಲೆ ಹತ್ತಿಸಲು ಯತ್ನಿಸುವ ಮೂಲಕ ಬೆದರಿಸಿದ್ದರು. ಅಲ್ಲದೇ ಘರ್ಷಣೆಯಲ್ಲಿ ಹಲವಾರು ಪೊಲೀಸರು ಗಾಯಗೊಂಡಿದ್ದರು.

ಟಾಪ್ ನ್ಯೂಸ್

Mulki-kambla

Mulki: ಕಂಬಳದಿಂದ ಕೃಷಿ, ಧಾರ್ಮಿಕ ನಂಬಿಕೆ ವೃದ್ಧಿ: ನ್ಯಾ. ಎನ್‌. ಸಂತೋಷ್‌ ಹೆಗ್ಡೆ

udupi-Bar-Asso

Udupi: ಸುಪ್ರೀಂ, ಹೈಕೋರ್ಟ್‌ಗಳ ತೀರ್ಪು ಆನ್‌ಲೈನ್‌ನಲ್ಲಿ ಲಭ್ಯ: ನ್ಯಾ.ಸೂರಜ್‌

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

SASTHANA-TOLL

Kota: ಸಾಸ್ತಾನ ಟೋಲ್‌: ಡಿ.30ರ ತನಕ ಯಥಾಸ್ಥಿತಿ ಮುಂದುವರಿಕೆಗೆ ಸೂಚನೆ

mob

Samsung Phone; ಫೋಟೋ ಸೋರಿಕೆ: ಕೆಲಸಗಾರರು ವಜಾ?

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Perla-fire

Disaster: ಪೆರ್ಲದಲ್ಲಿ ಭಾರೀ ಬೆಂಕಿ ದುರಂತ; ಐದು ಅಂಗಡಿಗಳು ಸಂಪೂರ್ಣ ಭಸ್ಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

kejriwal-2

Delhi; ಸ್ತ್ರೀಯರಿಗೆ ಸಹಾಯಧನ: ಮನೆಯಲ್ಲೇ ನೋಂದಣಿ

mob

Samsung Phone; ಫೋಟೋ ಸೋರಿಕೆ: ಕೆಲಸಗಾರರು ವಜಾ?

1-kuu

ಕಾರ್ಗಿಲ್‌ ದಾಳಿ ಮಾಹಿತಿ ಕೊಟ್ಟ ಕುರಿಗಾಹಿ ಸಾವು: ಸೇನೆ ನಮನ

Surjewala

Pegasus spyware ಬಗ್ಗೆ ಸುಪ್ರೀಂಕೋರ್ಟ್‌ ತನಿಖೆ ನಡೆಸಲಿ: ಸುರ್ಜೇವಾಲಾ

1-deee

Allu Arjun ನಿವಾಸದಲ್ಲಿ ದಾಂಧಲೆ!; 8 ಮಂದಿ ಬಂಧನ: ಕೃತ್ಯ ಎಸಗಿದ್ದು ಯಾರು?

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Accident-logo

Siddapura: ಕಾರು ಸ್ಕೂಟಿಗೆ ಢಿಕ್ಕಿ; ಸವಾರರು ಗಂಭೀರ

Car-Palti

Sulya: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

Thief

Kaup: ಉದ್ಯಾವರ: ಮನೆಯ ಬೀಗ ಮುರಿದು ಸೊತ್ತು ಕಳವು

Accident-logo

Putturu: ಬೈಕ್‌-ಪಿಕಪ್‌ ಢಿಕ್ಕಿ: ಇಬ್ಬರು ಸವಾರರಿಗೆ ಗಂಭೀರ ಗಾಯ

Arrest

Bantwala: ನಾವೂರು: ಅತ್ಯಾಚಾರ; ಆರೋಪಿಗೆ ನ್ಯಾಯಾಂಗ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.