ಪ್ರಕರಣ ಹಂಚಲು ಸಿಜೆಐ ಅರ್ಹರೇ?
Team Udayavani, Apr 7, 2018, 10:45 AM IST
ಹೊಸದಿಲ್ಲಿ: ಪ್ರಕರಣಗಳನ್ನು ನ್ಯಾಯಪೀಠಗಳಿಗೆ ಹಂಚುವ ಮುಖ್ಯ ನ್ಯಾಯಮೂರ್ತಿಯ ಆಡಳಿತಾತ್ಮಕ ಅಧಿಕಾರದ ಬಗ್ಗೆ ಸ್ಪಷ್ಟನೆ ನೀಡುವಂತೆ ಕೋರಿ ಸುಪ್ರೀಂಕೋರ್ಟ್‌ನಲ್ಲಿ ಹಿರಿಯ ವಕೀಲ ಶಾಂತಿ ಭೂಷಣ್ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದಾರೆ. ಅಲ್ಲದೆ ಈ ಪ್ರಕರಣವನ್ನು ಸಿಜೆಐ ದೀಪಕ್ ಮಿಶ್ರಾ ಪ್ರತಿನಿಧಿಸುವ ಪೀಠಕ್ಕೆ ವಿಚಾರಣೆಗೆ ನಿಗದಿಗೊಳಿಸಬಾರದು ಎಂದು ಕೋರಿ ಸುಪ್ರೀಂಕೋರ್ಟ್‌ನ ಪ್ರಧಾನ ಕಾರ್ಯದರ್ಶಿಗೆ ಅವರು ಪತ್ರ ಬರೆದಿದ್ದಾರೆ.
ಮೂವರು ಹಿರಿಯ ನ್ಯಾಯಮೂರ್ತಿಗಳಿರುವ ಪೀಠದಲ್ಲಿ ಇದನ್ನು ಮಂಡಿಸಬೇಕು ಮತ್ತು ಅವರು ಈ ಅರ್ಜಿಯ ವಿಚಾರಣೆಯನ್ನು ಯಾವ ಪೀಠ ನಡೆಸಬೇಕು ಎಂಬುದನ್ನು ತೀರ್ಮಾನಿಸಬೇಕು ಎಂದು ಕೋರಿದ್ದಾರೆ. ದೂರಿನಲ್ಲಿ ಸಿಜೆಐ ಕೂಡ ಪ್ರತಿಕ್ರಿಯೆದಾರರು ಎಂದು ಉಲ್ಲೇಖೀಸಲಾಗಿದೆ. ಈ ಮಧ್ಯೆ ಸಿಜೆಐ ಮಿಶ್ರಾ ವಿರುದ್ಧದ ಮಹಾಭಿಯೋಗ ಪ್ರಸ್ತಾವ ಕೈಬಿಡುವುದಕ್ಕೆ ಸಂಬಂಧಿಸಿ ಚರ್ಚೆ ನಡೆದಿದೆ. ಈಗಾಗಲೇ ವರದಿಯಾದಂತೆ, ಪ್ರಸ್ತಾವವನ್ನು ಕಾಂಗ್ರೆಸ್ ಕೈಬಿಟ್ಟಿಲ್ಲ ಎಂದು ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Poll code violations ; ಖರ್ಗೆ, ನಡ್ಡಾ ಪ್ರತಿಕ್ರಿಯೆ ಕೇಳಿದ ಚುನಾವಣ ಆಯೋಗ
Rahul Gandhi ಭರವಸೆಗಳನ್ನು ನೀಡುತ್ತಾರೆ ಮತ್ತು ವಿದೇಶಕ್ಕೆ ಹಾರುತ್ತಾರೆ: ಶಾ ವಾಗ್ದಾಳಿ
PM Modi ಅವರು ಜೋ ಬೈಡೆನ್ ಅವರಂತೆ ನೆನಪಿನ ಶಕ್ತಿ ಕಳೆದುಕೊಳ್ಳುತ್ತಿದ್ದಾರೆ: ರಾಹುಲ್ ಗಾಂಧಿ
Resign: ಶಿರೋಮಣಿ ಅಕಾಲಿದಳದ ಅಧ್ಯಕ್ಷ ಸ್ಥಾನಕ್ಕೆ ಸುಖಬೀರ್ ಸಿಂಗ್ ಬಾದಲ್ ರಾಜೀನಾಮೆ
Maharashtra; ನಮ್ಮ ಮೈತ್ರಿ ಕೂಟ ಗೆದ್ದು ಮಹಾರಾಷ್ಟ್ರ ಉಳಿಸಲಿದೆ: ಡಿ.ಕೆ. ಶಿವಕುಮಾರ್
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.