ಮೂಲಸೌಕರ್ಯ ಯೋಜನೆಗಳನ್ನು ಟಾರ್ಗೆಟ್ ಮಾಡಲು ಪಿಐಎಲ್ ಬಳಕೆ
Team Udayavani, Dec 16, 2022, 10:38 PM IST
ನವದೆಹಲಿ: ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು (ಪಿಐಎಲ್) ಹಲವು ಬಾರಿ ಮೂಲಸೌಕರ್ಯ ಯೋಜನೆಗಳನ್ನು ಟಾರ್ಗೆಟ್ ಮಾಡಿಕೊಂಡು ಸಲ್ಲಿಸುತ್ತಿರುವ ಪ್ರಸಂಗಗಳು ಹೆಚ್ಚಾಗುತ್ತಿವೆ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ ಅಭಿಪ್ರಾಯಪಟ್ಟಿದೆ.
ಮುಂಬೈನ ಭೂಮಿಯೊಂದರ ನವೀಕರಣವನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಪಿಐಎಲ್ ಅನ್ನು ವಜಾ ಮಾಡುವ ವೇಳೆ ಸಿಜೆಐ ಡಿ.ವೈ.ಚಂದ್ರಚೂಡ್ ನೇತೃತ್ವದ ನ್ಯಾಯಪೀಠ ಈ ಅಭಿಪ್ರಾಯ ವ್ಯಕ್ತಪಡಿಸಿದೆ.
ಮೂಲಸೌಕರ್ಯ ಯೋಜನೆಗಳ ವಿಚಾರ ಬಂದಾಗ ಪಿಐಎಲ್‌ಗಳು ಬ್ಲ್ಯಾಕ್‌ವೆುàಲ್ ಮಾಡುವ ಒಂದು ಸಾಧನವಾಗಿ ಬದಲಾಗಿವೆ. ಅಂಥ ಯೋಜನೆಗಳನ್ನು ಟಾರ್ಗೆಟ್ ಮಾಡಲೆಂದೇ ಅರ್ಜಿಗಳು ಸಲ್ಲಿಕೆಯಾಗುತ್ತಿವೆ. ಇದು ದೆಹಲಿ, ಮುಂಬೈ ಸೇರಿದಂತೆ ಹಲವು ಕಡೆ ನಡೆಯುತ್ತಿವೆ ಎಂದೂ ನ್ಯಾಯಪೀಠ ಅಸಮಾಧಾನ ವ್ಯಕ್ತಪಡಿಸಿದೆ.
ಮುಂಬೈನ ವರ್ಲಿಯಲ್ಲಿನ ಜಮೀನೊಂದರ ನವೀಕರಣವನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಪಿಐಎಲ್ ಅನ್ನು ಬಾಂಬೆ ಹೈಕೋರ್ಟ್ ವಜಾ ಮಾಡಿತ್ತು. ಅದನ್ನು ಪ್ರಶ್ನಿಸಿ ಅರ್ಜಿದಾರರು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು. ಈಗ ಸರ್ವೋಚ್ಚ ನ್ಯಾಯಾಲಯ ಬಾಂಬೆ ಹೈಕೋರ್ಟ್ ಆದೇಶವನ್ನು ಎತ್ತಿಹಿಡಿದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nagpur: ರಾಹುಲ್ ಕಾರ್ಯಕ್ರಮದಲ್ಲಿ ಖಾಲಿ ಸಂವಿಧಾನ ಪುಸ್ತಕ ಹಂಚಿಕೆ: ಬಿಜೆಪಿ ಆರೋಪ
Maharashtra: ಸ್ತ್ರೀಯರಿಗೆ ಮಾಸಿಕ 3000, ರೈತರ ಸಾಲ ಮನ್ನಾ: ಎಂವಿಎ
Jet Airways ಆಸ್ತಿ ಮಾರಾಟಕ್ಕೆ ಸುಪ್ರೀಂ ಕೋರ್ಟ್ ಅನುಮತಿ
Delhi Pollution: ಕೃಷಿ ತ್ಯಾಜ್ಯ ಸುಟ್ಟರೆ ರೈತರಿಗೆ ಇನ್ನು ದುಪ್ಪಟ್ಟು ದಂಡ!
Maharashtra: ಕಾಂಗ್ರೆಸ್ ಬಂಡಾಯ ಸ್ಪರ್ಧಿಗಳು 6 ವರ್ಷ ಅಮಾನತು
MUST WATCH
ಹೊಸ ಸೇರ್ಪಡೆ
Waqf Notice: ಕೂಡಲೇ ವಕ್ಫ್ ಮಂಡಳಿ ರದ್ದು ಮಾಡಿ: ಆರ್. ಅಶೋಕ್ ಆಗ್ರಹ
MUDA; 50:50 ಹಂಚಿಕೆ ರದ್ದು ತೀರ್ಮಾನ; ನ್ಯಾ| ದೇಸಾಯಿ ಆಯೋಗದ ವರದಿ ಬಳಿಕ ನಿವೇಶನ ವಾಪಸ್
Nagpur: ರಾಹುಲ್ ಕಾರ್ಯಕ್ರಮದಲ್ಲಿ ಖಾಲಿ ಸಂವಿಧಾನ ಪುಸ್ತಕ ಹಂಚಿಕೆ: ಬಿಜೆಪಿ ಆರೋಪ
Pollution: ವಾಯುಮಾಲಿನ್ಯ ನಿಯಂತ್ರಣ ಸರಕಾರ ಇಚ್ಛಾಶಕ್ತಿ ಪ್ರದರ್ಶಿಸಲಿ
By Election: ಯೋಗೇಶ್ವರ್ ನಿಂದಿಸಿದ್ದ ಡಿ.ಕೆ.ಸುರೇಶ್ ಆಡಿಯೋ ಎಚ್‌ಡಿಕೆ ಬಿಡುಗಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.