ಕೇರಳದ ಮುಖ್ಯಮಂತ್ರಿಯಾಗಿ ಎರಡನೇ ಅವಧಿಗೆ ಪ್ರಮಾಣ ವಚನ ಸ್ವೀಕರಿಸಿದ ಪಿಣರಾಯ್ ವಿಜಯನ್
Team Udayavani, May 20, 2021, 5:06 PM IST
ಕೇರಳ : ಪಿಣರಾಯಿ ವಿಜಯನ್ ಎರಡನೇ ಅವಧಿಗೆ ಕೇರಳದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಪ್ರಮಾಣ ವಚನ ಸ್ವೀಕರಿಸಿದ್ದಾರೆ.
ತಿರುವನಂತಪುರದ ಸೆಂಟ್ರಲ್ ಸ್ಟೇಡಿಯಂನಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಭೋದಿಸಿದ ಪ್ರಮಾಣವಚನವನ್ನು ಪಿಣರಾಯ್ ವಿಜಯನ್ ಸ್ವೀಕಾರ ಮಾಡಿದ್ದಾರೆ.
ಇದನ್ನೂ ಓದಿ : ಮೊಯ್ಲಿ ಹೇಳಿಕೆಯನ್ನು ಅರಗಿಸಿಕೊಳ್ಳುವ ತಾಕತ್ತು ಡಿಕೆಶಿ, ಸಿದ್ದರಾಮಯ್ಯ ಅವರಿಗಿದೆಯೇ: ಬಿಜೆಪಿ
76 ವರ್ಷದ ಪಿಣರಾಯ್ ವಿಜಯನ್ 1964 ರಲ್ಲಿ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ ಮಾರ್ಕ್ಸ್ ವಾದಿ (ಸಿಪಿಎಂ) ಗೆ ಸೇರಿದರು. 2016 ರಲ್ಲಿ ಮೊದಲ ಬಾರಿಗೆ ಕೇರಳದ ಮುಖ್ಯಮಂತ್ರಿಯಾಗಿ ಆಯ್ಕೆಯಾದರು. ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾದ (ಮಾರ್ಕ್ಸ್ ವಾದಿ) ಪೊಲಿಟ್ ಬ್ಯುರೊ ಸದಸ್ಯರಾಗಿದ್ದ ವಿಜಯನ್ ಅವರು 1998 ರಿಂದ 2015 ರವರೆಗೆ ಸಿಪಿಐ (ಎಂ) ಯ ಕೇರಳ ರಾಜ್ಯ ಸಮಿತಿಯ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದರು. ಇ.ಕೆ ನಾಯನಾರ್ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ 1996 ರಿಂದ 1998 ರವರೆಗೆ ವಿದ್ಯುತ್ ಮತ್ತು ಸಹಕಾರ ಸಚಿವರಾಗಿಯೂ ಕಾರ್ಯ ನಿರ್ವಹಿಸಿದ್ದರು.
ಇನ್ನು, ಕೇರಳದ ಮುಖ್ಯಮಂತ್ರಿಯಾಗಿ ಎರಡನೇ ಅವಧಿಗೆ ಪ್ರಮಾಣ ವಚನವನ್ನು ಸ್ವೀಕರಿಸಿದ ಪಿಣರಾಯ್ ವಿಜಯನ್ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಶುಭಾಶಯ ತಿಳಿಸಿದ್ದಾರೆ.
Congratulations to Shri @vijayanpinarayi Ji on taking oath as CM and commencing his second term in office.
— Narendra Modi (@narendramodi) May 20, 2021
ಇದನ್ನೂ ಓದಿ : ಅಂಟಾರ್ಟಿಕಾದಿಂದ ಬೇರ್ಪಟ್ಟ ವಿಶ್ವದ ಬೃಹತ್ ಐಸ್ ಬರ್ಗ್, ನವದೆಹಲಿಗಿಂತ ಮೂರು ಪಟ್ಟು ಗಾತ್ರ!
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Waqf Notice: ಬಸನಗೌಡ ಪಾಟೀಲ್ ಯತ್ನಾಳ್ ತಂಡದಿಂದ 1 ತಿಂಗಳು ಜನ ಜಾಗೃತಿ
Waqf Issue: ಕಾಂಗ್ರೆಸ್ ಸರಕಾರದ ವಿರುದ್ಧ ಬಿಜೆಪಿಯಿಂದ “ನಮ್ಮ ಭೂಮಿ ನಮ್ಮ ಹಕ್ಕು” ಹೋರಾಟ
Employees: 70 ಗಂಟೆ ಕೆಲಸ ಹೇಳಿಕೆಗೆ ಸದಾ ಬದ್ಧ: ಇನ್ಫಿ ನಾರಾಯಣ ಮೂರ್ತಿ
Black Days: ಜಮೀರ್+ ನಾಲ್ವರು ಕೊಚ್ಚೆ, ದೂರ ಇಟ್ಟಿದ್ದೇನೆ: ಎಚ್.ಡಿ.ಕುಮಾರಸ್ವಾಮಿ
Air Pollution: ದಿಲ್ಲಿ ಗಾಳಿಯೇ ವಿಷ, ಒಂದು ದಿನದ ಉಸಿರಾಟ 25 ಸಿಗರೇಟಿಗೆ ಸಮ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.