ಕಾಪಿರೈಟ್ ಉಲ್ಲಂಘನೆಯಿಂದ ಉಗ್ರರಿಗೆ ಹಣ
Team Udayavani, Aug 23, 2017, 7:50 AM IST
ನವದೆಹಲಿ: ಭಯೋತ್ಪಾದನೆಗೆ ಹಣಕಾಸು ಪೂರೈಕೆ ಮತ್ತು ಹಣ ಅಕ್ರಮ ವರ್ಗಾವಣೆಗೆ ‘ಪೈರಸಿ ಮತ್ತು ಕೃತಿಸ್ವಾಮ್ಯ ಉಲ್ಲಂಘನೆ’ ಪ್ರಮುಖ ಮೂಲಗಳು ಎಂದು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಅಭಿಪ್ರಾಯಪಟ್ಟಿದ್ದಾರೆ. ಎಲ್ಲ ಪೊಲೀಸ್ ತರಬೇತಿ ಕಾಲೇಜುಗಳಲ್ಲಿ ಬೌದ್ಧಿಕ ಆಸ್ತಿ ಹಕ್ಕು (ಐಪಿಆರ್) ಕುರಿತ ವಿಶೇಷ ಕೋರ್ಸ್ ಒಂದನ್ನು ಪರಿಚಯಿಸುವುದಾಗಿ ಮಂಗಳವಾರ ಘೋಷಿಸಿದ ಅವರು ಈ ಮಾತುಗಳನ್ನಾಡಿದ್ದಾರೆ. ಐಪಿಆರ್ ಮತ್ತು ಕಾಪಿರೈಟ್ ಉಲ್ಲಂಘನೆ ಅಪರಾಧಗಳಿಗೆ ಸಂಬಂಧಿಸಿದ ಕಾನೂನುಗಳನ್ನು ಸೂಕ್ತ ರೀತಿಯಲ್ಲಿ ಅನುಷ್ಠಾನ ಮಾಡುವ ನಿಟ್ಟಿನಲ್ಲಿ ನಮ್ಮ ಪೊಲೀಸರಿಗೆ ತರಬೇತಿ ನೀಡಬೇಕು. ಇಂಥ ಉಲ್ಲಂಘನೆಗಳು ಸಾರ್ವಜನಿಕರ ಸುರಕ್ಷತೆ ಮತ್ತು ದೇಶದ ಭದ್ರತೆಯ ಮೇಲೆ ನೇರ ಪರಿಣಾಮ ಬೀರುತ್ತವೆ ಎಂದಿದ್ದಾರೆ.
ಎನ್ಕೌಂಟರ್ನಲ್ಲಿ ಉಗ್ರನ ಹತ್ಯೆ: ಕಾಶ್ಮೀರದ ಕುಪ್ವಾರ ಜಿಲ್ಲೆಯ ಹಂದ್ವಾರ ಪ್ರದೇಶದಲ್ಲಿ ಮಂಗಳವಾರ ಭದ್ರತಾ ಪಡೆಗಳು ನಡೆಸಿದ ಎನ್ಕೌಂಟರ್ನಲ್ಲಿ ಒಬ್ಬ ಉಗ್ರ ಮೃತನಾಗಿದ್ದಾನೆ. ಹಫ್ರುದಾ ಅರಣ್ಯ ಪ್ರದೇಶದ ಹೋಗ್ನಿಕೋಟೆಯಲ್ಲಿ ಉಗ್ರರು ನುಸುಳಿದ್ದಾರೆ ಎಂಬ ಮಾಹಿತಿ ಆಧರಿಸಿ ಭದ್ರತಾ ಪಡೆಗಳು ಶೋಧ ಕಾರ್ಯಾಚರಣೆ ನಡೆಸಿದವು.ಈ ವೇಳೆ ಉಗ್ರರು ಗುಂಡಿನ ದಾಳಿ ನಡೆಸಿದ್ದು, ಭದ್ರತಾ ಪಡೆಗಳು ನಡೆಸಿದ ಪ್ರತಿದಾಳಿಯಲ್ಲಿ ಒಬ್ಬ ಉಗ್ರನನ್ನು ಹತ್ಯೆಗೈಯ್ಯಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Poll code violations ; ಖರ್ಗೆ, ನಡ್ಡಾ ಪ್ರತಿಕ್ರಿಯೆ ಕೇಳಿದ ಚುನಾವಣ ಆಯೋಗ
Rahul Gandhi ಭರವಸೆಗಳನ್ನು ನೀಡುತ್ತಾರೆ ಮತ್ತು ವಿದೇಶಕ್ಕೆ ಹಾರುತ್ತಾರೆ: ಶಾ ವಾಗ್ದಾಳಿ
PM Modi ಅವರು ಜೋ ಬೈಡೆನ್ ಅವರಂತೆ ನೆನಪಿನ ಶಕ್ತಿ ಕಳೆದುಕೊಳ್ಳುತ್ತಿದ್ದಾರೆ: ರಾಹುಲ್ ಗಾಂಧಿ
Resign: ಶಿರೋಮಣಿ ಅಕಾಲಿದಳದ ಅಧ್ಯಕ್ಷ ಸ್ಥಾನಕ್ಕೆ ಸುಖಬೀರ್ ಸಿಂಗ್ ಬಾದಲ್ ರಾಜೀನಾಮೆ
Maharashtra; ನಮ್ಮ ಮೈತ್ರಿ ಕೂಟ ಗೆದ್ದು ಮಹಾರಾಷ್ಟ್ರ ಉಳಿಸಲಿದೆ: ಡಿ.ಕೆ. ಶಿವಕುಮಾರ್
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.