ವೇಮುಲ ವಿಚಾರದಲ್ಲಿ ರಾಹುಲ್ ಕ್ಷಮೆ ಕೇಳಲಿ: ಪಿಯೂಷ್
Team Udayavani, Jun 21, 2018, 6:00 AM IST
ನವದೆಹಲಿ: ಹೈದರಾಬಾದ್ ಕೇಂದ್ರ ವಿವಿಯಲ್ಲಿ 2 ವರ್ಷಗಳ ಹಿಂದೆ ಸಂಶೋಧನಾ ವಿದ್ಯಾರ್ಥಿ ರೋಹಿತ್ ವೇಮುಲ ಆತ್ಮಹತ್ಯೆ ಮಾಡಿಕೊಂಡಿರುವುದನ್ನು ಕಾಂಗ್ರೆಸ್ ಮತ್ತು ಇತರ ರಾಜಕೀಯ ಪಕ್ಷಗಳು ಬಿಜೆಪಿ ವಿರುದ್ಧ ರಾಜಕೀಯಕ್ಕಾಗಿ ಬಳಕೆ ಮಾಡಿಕೊಂಡಿವೆ. ಅದಕ್ಕಾಗಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಕ್ಷಮೆ ಯಾಚಿಸಬೇಕು ಎಂದು ಕೇಂದ್ರ ರೈಲ್ವೆ ಸಚಿವ ಪಿಯೂಷ್ ಗೋಯಲ್ ಒತ್ತಾಯಿಸಿದ್ದಾರೆ.
ಮುಸ್ಲಿಂ ಲೀಗ್ ಪಕ್ಷ ಭರವಸೆ ನೀಡಿದ್ದಂತೆ ಹಣ ನೀಡಲಿಲ್ಲ ಎಂದು ವೇಮುಲ ತಾಯಿ ಆರೋಪಿಸಿದ್ದ ಹಿನ್ನೆಲೆಯಲ್ಲಿ ಪಿಯೂಷ್ ಗೋಯೆಲ್ ಈ ಹೇಳಿಕೆ ನೀಡಿದ್ದಾರೆ.
ರಾಹುಲ್ ಗಾಂಧಿ ಕೂಡ ತಮ್ಮ ರ್ಯಾಲಿಗಳಿಗೆ ರೋಹಿತ್ ತಾಯಿ ರಾಧಿಕಾ ಅವರನ್ನು ಕರೆದುಕೊಂಡು ಹೋಗಿದ್ದರು. ಇಂಥ ಕ್ಷುಲ್ಲಕ ರಾಜಕೀಯ ಮಾಡಿದ್ದಕ್ಕೆ ರಾಹುಲ್ ಕ್ಷಮೆ ಕೇಳಬೇಕು ಎಂದು ಪಿಯೂಷ್ ಹೇಳಿದ್ದಾರೆ. ಮನೆ ಕಟ್ಟಿಸಿಕೊಳ್ಳುವುದಕ್ಕಾಗಿ 20 ಲಕ್ಷ ರೂ. ನೀಡುವ ಭರವಸೆಯನ್ನು ಮುಸ್ಲಿಂ ಲೀಗ್ ನೀಡಿತ್ತು. ಇದರಂತೆ ಚೆಕ್ ನೀಡಲಾಗಿತ್ತಾದರೂ, ಆ ಚೆಕ್ ಬೌನ್ಸ್ ಆಗಿದೆ ಎಂದು ರಾಧಿಕಾ ಆರೋಪಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Poll code violations ; ಖರ್ಗೆ, ನಡ್ಡಾ ಪ್ರತಿಕ್ರಿಯೆ ಕೇಳಿದ ಚುನಾವಣ ಆಯೋಗ
Rahul Gandhi ಭರವಸೆಗಳನ್ನು ನೀಡುತ್ತಾರೆ ಮತ್ತು ವಿದೇಶಕ್ಕೆ ಹಾರುತ್ತಾರೆ: ಶಾ ವಾಗ್ದಾಳಿ
PM Modi ಅವರು ಜೋ ಬೈಡೆನ್ ಅವರಂತೆ ನೆನಪಿನ ಶಕ್ತಿ ಕಳೆದುಕೊಳ್ಳುತ್ತಿದ್ದಾರೆ: ರಾಹುಲ್ ಗಾಂಧಿ
Resign: ಶಿರೋಮಣಿ ಅಕಾಲಿದಳದ ಅಧ್ಯಕ್ಷ ಸ್ಥಾನಕ್ಕೆ ಸುಖಬೀರ್ ಸಿಂಗ್ ಬಾದಲ್ ರಾಜೀನಾಮೆ
Maharashtra; ನಮ್ಮ ಮೈತ್ರಿ ಕೂಟ ಗೆದ್ದು ಮಹಾರಾಷ್ಟ್ರ ಉಳಿಸಲಿದೆ: ಡಿ.ಕೆ. ಶಿವಕುಮಾರ್
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.