ಕೋವಿಡ್ ವಿರುದ್ಧದ ಹೋರಾಟದ ಸಂದರ್ಭದಲ್ಲಿ ಕೆಳ ಮಟ್ಟದ ರಾಜಕೀಯ ಮಾಡಬೇಡಿ : ಗೋಯಲ್ ಕಿಡಿ
ಕೋವಿಡ್ ವಿರುದ್ಧದ ಹೋರಾಟದ ಸಂದರ್ಭದಲ್ಲಿ ನಿಮ್ಮ ಕೀಳು ರಾಜಕೀಯವು ಸರಿಯಲ್ಲ ಎಂದು ರಾಹುಲ್ ಗಾಂಧಿ ಅರ್ಥಮಾಡಿಕೊಳ್ಳಬೇಕು : ಪಿಯೂಷ್ ಗೋಯಲ್
Team Udayavani, Jul 2, 2021, 4:56 PM IST
ನವ ದೆಹಲಿ : ಕೇಂದ್ರ ಸರ್ಕಾರದ ಕೋವಿಡ್ ನಿರ್ವಹಣೆಯ ಬಗ್ಗೆ ಮೇಲಿಂದ ಮೇಲೆ ಟೀಕೆ ಮಾಡುತ್ತಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರ ವಿರುದ್ಧ ಕೇಂದ್ರ ವಾಣಿಜ್ಯ ಸಚಿವ ಪಿಯೂಷ್ ಗೋಯಲ್ ಹರಿಹಾಯ್ದಿದ್ದಾರೆ.
ತಮ್ಮ ಅಧಿಕೃತ ಟ್ವಿಟರ್ ಖಾತೆಯ ಮೂಲಕ ರಾಹುಲ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಅವರು, ಕೋವಿಡ್ 19 ನಂತಹ ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲೂ ರಾಜಕೀಯ ಮಾಡುವುದು ಸರಿಯಲ್ಲ. ಈ ಸಂಕಷ್ಟದ ದಿನಗಳ ಮಟ್ಟಿಗಾದರೂ ರಾಜಕೀಯ ಮಾಡುವುದನ್ನು ನಿಲ್ಲಿಸಿ. ಕೋವಿಡ್ 19 ವಿರುದ್ಧದ ಹೋರಾಟದ ಸಂದರ್ಭದಲ್ಲಿ ಇಂತಹ ಕೆಳ ಮಟ್ಟದ ರಾಜಕಾರಣ ಮಾಡಬೇಡಿ ಎಂದು ವಾಗ್ದಾಳಿ ಮಾಡಿದ್ದಾರೆ.
ಇದನ್ನೂ ಓದಿ : ನಿರ್ಮಲಾ ಸೀತಾರಾಮನ್ ಭೇಟಿಯಾಗಿ ಜಿಎಸ್ ಟಿ ಪರಿಹಾರ ಬಾಕಿ ಬಿಡುಗಡೆಗೆ ಮನವಿ ಮಾಡಿದ ಬೊಮ್ಮಾಯಿ
ಜುಲೈನಲ್ಲಿ 12 ಕೋಟಿ ಲಸಿಕೆ ಪ್ರಮಾಣ ಲಭ್ಯವಿರುತ್ತದೆ. 15 ದಿನಗಳ ಹಿಂದೆಯೇ ರಾಜ್ಯಗಳಿಗೆ ಸರಬರಾಜು ಬಗ್ಗೆ ಮಾಹಿತಿ ನೀಡಲಾಗಿದೆ. ಖಾಸಗಿ ಆಸ್ಪತ್ರೆಗಳಿಗೆ ಲಸಿಕೆಗಳು ಪ್ರತ್ಯೇಕವಾಗಿ ಸರಬರಾಜು ಮಾಡಲಾಗುತ್ತದೆ. ಕೋವಿಡ್ ವಿರುದ್ಧದ ಹೋರಾಟದ ಸಂದರ್ಭದಲ್ಲಿ ನಿಮ್ಮ ಕೀಳು ರಾಜಕೀಯವು ಸರಿಯಲ್ಲ ಎಂದು ರಾಹುಲ್ ಗಾಂಧಿ ಅರ್ಥಮಾಡಿಕೊಳ್ಳಬೇಕು ಎಂದು ಗೋಯಲ್ ಟ್ವೀಟ್ ಮಾಡಿದ್ದಾರೆ.
ಇನ್ನು, ಗೋಯಲ್ ಟ್ವೀಟ್ ಗೆ ಪ್ರತಿಕ್ರಿಯೆಯಾಗಿ ಟ್ವೀಟ್ ಮಾಡಿದ ವಯನಾಡಿನ ಸಂಸದ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಇದು ಜುಲೈ, ಲಸಿಕೆಗಳು ಎಲ್ಲಿವೆ..? ಎಂದು ಪ್ರಶ್ನೆ ಮಾಡಿದ್ದಾರೆ.
वैक्सीन की 12 करोड़ डोज़ जुलाई महीने में उपलब्ध होंगी, जो प्राइवेट हॉस्पिटल्स की आपूर्ति से अलग है। राज्यों को 15 दिन पहले ही आपूर्ति के बारे में सूचना दी जा चुकी है।
राहुल गांधी को समझना चाहिये कि कोरोना से लड़ाई में गंभीरता के बजाय इस समय ओछी राजनीति का प्रदर्शन उचित नही है। https://t.co/xmDqtrLcLI
— Piyush Goyal (@PiyushGoyal) July 2, 2021
जुलाई आ गया है, वैक्सीन नहीं आयीं।#WhereAreVaccines
— Rahul Gandhi (@RahulGandhi) July 2, 2021
ಇದನ್ನೂ ಓದಿ : ಪುಲ್ವಾಮಾ: ಭದ್ರತಾ ಪಡೆಯ ಎನ್ ಕೌಂಟರ್ ಗೆ 5 ಲಷ್ಕರ್ ಉಗ್ರರ ಸಾವು, ಯೋಧ ಹುತಾತ್ಮ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Bhairathi Ranagal: ಭೈರತಿ ಪಾತ್ರಕ್ಕೊಂದು ಸದುದ್ದೇಶವಿದೆ..: ಶಿವರಾಜ್ ಕುಮಾರ್
Hunsur: ಅಪ್ರಾಪ್ತ ಬಾಲಕಿ ಗರ್ಭಿಣಿ ಪ್ರಕರಣ; ಯುವಕನ ಬಂಧನ
Notice: ಸಂಗೀತ ಕಾರ್ಯಕ್ರಮಕ್ಕೂ ಮುನ್ನ ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್
Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು
Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್ ರಾಷ್ಟ್ರ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.