ನಾಲ್ಕು ಸಾವಿರ ಮನೆ ತೆರವು: ಇಂದು ಸುಪ್ರೀಂ ವಿಚಾರಣೆ
Team Udayavani, Jan 5, 2023, 7:30 AM IST
ಹಲ್ದ್ವಾನಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿರುವ ರೈಲ್ವೆ ಇಲಾಖೆಗೆ ಸೇರಿದ 29 ಎಕರೆ ಪ್ರದೇಶದಲ್ಲಿ ಇರುವ ನಾಲ್ಕು ಸಾವಿರ ಮನೆಗಳು, ಹಲವು ವಾಣಿಜ್ಯ ಮಳಿಗೆಗಳು ತೆರವುಗೊಳಿಸುವ ನಿಟ್ಟಿನಲ್ಲಿ ಉತ್ತರಾಖಂಡ ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ನಲ್ಲಿ ಸಲ್ಲಿಸಿರುವ ಅರ್ಜಿಯ ವಿಚಾರಣೆ ಗುರುವಾರ ನಡೆಯಲಿದೆ.
ವಿವಾದಿತ 29 ಎಕರೆ ಪ್ರದೇಶದಲ್ಲಿ ಪ್ರಸ್ತುತ ನಾಲ್ಕು ಸಾವಿರಕ್ಕೂ ಹೆಚ್ಚು ಮನೆಗಳು, ನಾಲ್ಕು ಸರ್ಕಾರಿ ಶಾಲೆಗಳು, 11 ಖಾಸಗಿ ಶಾಲೆಗಳು, ಒಂದು ಬ್ಯಾಂಕ್, 2 ಬೃಹತ್ ನೀರಿನ ಟ್ಯಾಂಕ್ಗಳು, 10 ಮಸೀದಿ, 4 ದೇಗುಲ, ಹಲವು ವಾಣಿಜ್ಯ ಮಳಿಗೆಗಳು ದಶಕಗಳಿಂದ ಇವೆ. ಹಲ್ದ್ವಾನಿ ರೈಲು ನಿಲ್ದಾಣದ ಸಮೀಪದ ಗಫೂರ್ ಬಸ್ತಿ, ಡೋಲಾಕ್ ಬಸ್ತಿ ಮತ್ತು ಇಂದಿರಾ ನಗರ ಪ್ರದೇಶಗಳು ಇದರ ವ್ಯಾಪ್ತಿಗೆ ಬರುತ್ತವೆ.
ಸುದೀರ್ಘ ವಿಚಾರಣೆಯ ನಂತರ ಉತ್ತರಾಖಂಡ ಹೈಕೋರ್ಟ್ ಡಿ.20ರಂದು ತೀರ್ಪು ನೀಡಿದ್ದು, ಜ.9ರೊಳಗೆ ತಮಗೆ ಸೇರಿದ ವಸ್ತುಗಳನ್ನು ತೆಗೆದುಕೊಂಡು, ಸ್ಥಳವನ್ನು ತೆರವುಗೊಳಿಸಬೇಕು ಎಂದು ಅಲ್ಲಿನ ನಿವಾಸಿಗಳಿಗೆ ನೋಟಿಸ್ ನೀಡಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Borewell Tragedy: ಹೇಗಾದರು ಮಾಡಿ ನನ್ನ 3ವರ್ಷದ ಮಗಳನ್ನು ರಕ್ಷಣೆ ಮಾಡಿ ಕೊಡಿ.. ತಾಯಿ ಅಳಲು
Video: 2 ವಾರದಲ್ಲಿ ಮದುವೆಯಾಗಬೇಕಿದ್ದ ಯುವತಿ 70 ಅಡಿ ಎತ್ತರದ ಸೇತುವೆಯಿಂದ ನದಿಗೆ ಜಿಗಿದಳು
EX PM: ಪಂಚಭೂತಗಳಲ್ಲಿ ಲೀನ; ಸಕಲ ಸರ್ಕಾರಿ-ಸೇನಾ ಗೌರವದೊಂದಿಗೆ ಡಾ.ಸಿಂಗ್ ಅಂತ್ಯಕ್ರಿಯೆ
Snowfall; ಭಾರೀ ಹಿಮಪಾತದಿಂದಾಗಿ ಜಮ್ಮು-ಶ್ರೀನಗರ ಹೆದ್ದಾರಿ ಬಂದ್; ಸಿಲುಕಿದ ವಾಹನಗಳು
Hathras: ಶಾಲೆಗೆ ರಜೆ ಸಿಗಬೇಕೆಂದು 2ನೇ ತರಗತಿ ಮಗುವನ್ನು ಕೊಂದ ವಿದ್ಯಾರ್ಥಿ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.