ಪಿಎಂ ಮೋದಿ ಆರೋಪಕ್ಕೆ ಪಾಕ್, ಕಾಂಗ್ರೆಸ್ ತಲ್ಲಣ
Team Udayavani, Dec 12, 2017, 7:15 AM IST
ಹೊಸದಿಲ್ಲಿ,/ಇಸ್ಲಾಮಾಬಾದ್: ಗುಜರಾತ್ ಚುನಾವಣೆಯಲ್ಲಿ ಪಾಕಿಸ್ಥಾನ ಕಾಂಗ್ರೆಸ್ ಜತೆ ಸೇರಿ ಸಂಚು ರೂಪಿಸಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಮಾಡಿರುವ ಗಂಭೀರ ಆರೋಪ ರಾಜಕೀಯ ಕ್ಷೇತ್ರದಲ್ಲಿ ತಲ್ಲಣವನ್ನೇ ಸೃಜಿಸಿದೆ.
ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಸೋಮವಾರ ಪ್ರತಿಕ್ರಿಯಿಸಿ, “ಪಿಎಂ ಮೋದಿ ಆರೋಪದಿಂದ ತಮಗೆ ನೋವಾಗಿದೆ. ಇದೊಂದು ಕೆಟ್ಟ ಸಂಪ್ರದಾಯಕ್ಕೆ ನಾಂದಿಯಾಗಿದೆ’ ಎಂದಿದ್ದಾರೆ. ನೆರೆಯ ರಾಷ್ಟ್ರ ಪಾಕಿಸ್ಥಾನ ಪ್ರತಿಕ್ರಿಯೆ ನೀಡಿದ್ದು, ನಿಮ್ಮ ಆಂತರಿಕ ರಾಜಕೀಯ ವಿಚಾರಗಳಿಗೆ ನಮ್ಮನ್ನು ಎಳೆಯಬೇಡಿ. ನಿಮ್ಮ ಸಾಮರ್ಥ್ಯದಿಂದಲೇ ಚುನಾವಣೆ ಗೆಲ್ಲಬೇಕು ಎಂದು ಟಾಂಗ್ ನೀಡಿದೆ. ಈ ನಡುವೆ ಸೋಮವಾರ ಗುಜರಾತ್‌ನಲ್ಲಿ ಮೂರು ಚುನಾವಣಾ ರ್ಯಾಲಿಗಳಲ್ಲಿ ಮಾತನಾಡಿದ ಪ್ರಧಾನಿ ಮೋದಿ, ಕಾಂಗ್ರೆಸ್ ವಿರುದ್ಧ ಟೀಕಾ ಪ್ರಹಾರ ಮುಂದುವರಿಸಿದ್ದಾರೆ.
ಮಾಜಿ ಪಿಎಂ ಆಕ್ರೋಶ: ಪ್ರಧಾನಿ ಮೋದಿ ಹೇಳಿಕೆಗೆ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಆಕ್ರೋಶ ವ್ಯಕ್ತಪಡಿಸಿದ್ದು, ರಾಜಕೀಯ ಕಾರಣಗಳಿಗಾಗಿ ನೀಡುವ ಹೇಳಿಕೆ ಕೆಟ್ಟ ಮಾದರಿ ಹುಟ್ಟು ಹಾಕಿದಂತಾಗಿದೆ ಎಂದು ಟೀಕಿಸಿದ್ದಾರೆ. ಈ ಬಗ್ಗೆ ಅವರು ದೇಶದ ಕ್ಷಮೆ ಯಾಚಿಸಬೇಕೆಂದು ಒತ್ತಾಯಿಸಿದ್ದಾರೆ. “ಪ್ರಧಾನಿ ವಿವೇಚನೆ ಇಲ್ಲದ ಆರೋಪ ಮಾಡಿದ್ದಾರೆ. ಅದನ್ನು ಸಾರಾಸಗಟಾಗಿ ತಿರಸ್ಕರಿಸುತ್ತೇನೆ. ಪಾಕ್‌ನ ಮಾಜಿ ಸಚಿವ ಖುರ್ಷಿದ್ ಮೆಹಮೂದ್ ಕಸೂರಿ ಹೊಸದಿಲ್ಲಿಗೆ ಭೇಟಿ ನೀಡಿದ್ದ ವೇಳೆ ಆಯೋಜಿಸಲಾಗಿದ್ದ ಔತಣ ಕೂಟದಲ್ಲಿ ಭಾರತ ಮತ್ತು ಪಾಕಿಸ್ಥಾನ ನಡುವಿನ ವಿಚಾರ ಚರ್ಚಿಸಲಾಗಿದೆ. ಗುಜರಾತ್ ಚುನಾ ವಣೆ ವಿಚಾರ ಚರ್ಚೆಗೇ ಬಂದಿಲ್ಲ’ ಎಂದಿದ್ದಾರೆ. ಪ್ರಧಾನಿ ಮೋದಿ ಚುನಾವಣೆಯಲ್ಲಿ ಸೋಲಿನ ಭೀತಿಯಿಂದ ಇಂಥ ಆರೋಪ ಮಾಡಿದ್ದಾರೆಂದು ಸಿಂಗ್ ಪ್ರತಿಪಾದಿಸಿದ್ದಾರೆ. ಅಲ್ಲದೆ, ಅವರು ಹೊಂದಿರುವ ಹುದ್ದೆಯ ಘನತೆಗೆ ಚ್ಯುತಿ ತರಬಾರದು ಎಂದಿದ್ದಾರೆ.
ನಮ್ಮನ್ನು ಎಳೆಯಬೇಡಿ: ಪಿಎಂ ಮೋದಿ ಆರೋಪಗಳನ್ನು ಪಾಕಿಸ್ಥಾನ ಸರಕಾರ ಕೂಡ ತಿರಸ್ಕರಿಸಿದ್ದು, ಆಂತರಿಕ ರಾಜಕೀಯ ಬೆಳವಣಿಗೆಗಳಿಗೆ ನಮ್ಮನ್ನು ಎಳೆಯಬೇಡಿ. ಇದೊಂದು ಆಧಾರರಹಿತ ಆರೋಪ ಮತ್ತು ಬೇಜವಾಬ್ದಾರಿ ಹೇಳಿಕೆ ಎಂದು ಅಲ್ಲಿನ ವಿದೇಶಾಂಗ ಇಲಾಖೆ ಹೇಳಿದೆ. ಭಾರತಸರಕಾರ ಆಂತರಿಕವಾಗಿ ಚುನಾವಣೆಗೆ ನೆರೆರಾಷ್ಟ್ರವನ್ನು ಎಳೆದು ತರುವ ಪ್ರಯತ್ನ ನಿಲ್ಲಿಸಿ, ಸ್ವಂತ ಪ್ರಯತ್ನದಿಂದಲೇ ಚುನಾವಣೆಯಲ್ಲಿ ಜಯ ಗಳಿಸಲಿ ಎಂದಿದೆ.
ಕಾಂಗ್ರೆಸಿಗರಿಗೆ ಬಡತನ ಗೊತ್ತೇ ಇಲ್ಲ
ಗುಜರಾತ್‌ನ ಅಹಮದಾಬಾದ್, ಪಟನ್ ಮತ್ತು ನಡಿಯಾಡ್‌ಗಳಲ್ಲಿ ಪ್ರಧಾನಿ ಮೋದಿ ಸೋಮವಾರ ಚುನಾವಣಾ ರ್ಯಾಲಿಗಳನ್ನುದ್ದೇಶಿಸಿ ಮಾತನಾಡಿ ದರು. ಚಿನ್ನದ ಚಮಚ ಬಾಯಿಯಲ್ಲಿಟ್ಟುಕೊಂಡು ಹುಟ್ಟಿದ ಕಾಂಗ್ರೆಸ್ ನಾಯಕರಿಗೆ ಬಡತನ ಏನೆಂಬುದೇ ಗೊತ್ತಿಲ್ಲ ಎಂದು ಪರೋಕ್ಷವಾಗಿ ರಾಹುಲ್ ಗಾಂಧಿಯವರನ್ನುದ್ದೇಶಿಸಿ ಲೇವಡಿ ಮಾಡಿದರು. ಮೊದಲ ಹಂತದ ಚುನಾವಣೆಯಲ್ಲಿಯೇ ಕಾಂಗ್ರೆಸ್ ಸೋತಿದೆ. ಹೀಗಾಗಿಯೇ ಅವರು ಎರಡನೇ ಹಂತದ ಚುನಾವಣೆಯ ಬಗ್ಗೆ ಮಾತನಾಡುವುದನ್ನೇ ಮರೆತಿದ್ದಾರೆ. ಅದಕ್ಕಾಗಿಯೇ ಆ ಪಕ್ಷದ ನಾಯಕರು ಮತ್ತು ಚಿಯರ್ ಲೀಡರ್‌ಗಳು ಇವಿಎಂಗಳ ಬಗ್ಗೆ ಆಕ್ಷೇಪ ಎತ್ತುತ್ತಿದ್ದಾರೆ ಎಂದಿದ್ದಾರೆ. ಇದೇ ವೇಳೆ ಗಾಂಧಿನಗರದಲ್ಲಿ ಮಾತನಾಡಿದ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಜಿಎಸ್‌ಟಿಯನ್ನು ಮತ್ತೂಮ್ಮೆ “ಗಬ್ಬರ್ ಸಿಂಗ್ ಟ್ಯಾಕ್ಸ್’ ಎಂದು ಲೇವಡಿ ಮಾಡಿದರು. ಗುಜರಾತ್‌ನಲ್ಲಿ ಕಾಂಗ್ರೆಸ್ ಮರೆಯಾಗಿದೆ ಎನ್ನುತ್ತಿದ್ದಾರೆ ಪ್ರಧಾನಿ ಮೋದಿ. ಆದರೆ ಅವರ ಪ್ರಚಾರ ಭಾಷಣದ ಶೇ.50ರಷ್ಟು ಅಂಶ ನಮ್ಮ ಪಕ್ಷದ ವಿರುದ್ಧವೇ ಆಗಿದೆ
ಎಂದಿದ್ದಾರೆ ರಾಹುಲ್.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Farmers Protest: ರೈತ ದಲ್ಲೇವಾಲ್ ಚಿಕಿತ್ಸೆ ವಿಚಾರದಲ್ಲಿ ಪಂಜಾಬ್‌ನ ನಡೆಗೆ ಸುಪ್ರೀಂ ಗರಂ
2024ರಲ್ಲಿ ಆಟೋ ಮೊಬೈಲ್ ಕ್ಷೇತ್ರಕ್ಕೆ ಲಾಭ: ದಾಖಲೆ ಮಾರಾಟ
Bihar ಸ್ಪರ್ಧಾತ್ಮಕ ಪರೀಕ್ಷೆ ರದ್ದುಆಗ್ರಹಿಸಿ ಪ್ರಶಾಂತ್ ಕಿಶೋರ್ ನಿರಶನ
RBI: 2000ರೂ. ಮುಖಬೆಲೆಯ 6,691 ಕೋಟಿಯ ನೋಟು ವಾಪಸಾಗಿಲ್ಲ
Employment Rate: ಯುಪಿಎ 2.9 ಕೋಟಿ,ಮೋದಿ 17.9 ಕೋಟಿ ಉದ್ಯೋಗ ಸೃಷ್ಟಿ: ಸಚಿವ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.