6000 ಸಾವಿರ ಕೋಟಿ ರೂ. ವೆಚ್ಚದ ಅಟಲ್ ಭೂ ಜಲ ಯೋಜನೆಗೆ ಪ್ರಧಾನಿ ಮೋದಿ ಚಾಲನೆ
ವಾಜಪೇಯಿ ಅವರ 95ನೇ ಜನ್ಮ ದಿನಾಚರಣೆ ಅಂಗವಾಗಿ ಈ ಯೋಜನೆಗೆ ಪ್ರಧಾನಿ ಮೋದಿ ಚಾಲನೆ
Team Udayavani, Dec 25, 2019, 1:34 PM IST
ನವದೆಹಲಿ: ಅಂತರ್ಜಲ ರಕ್ಷಿಸುವ ಸುಮಾರು 6000 ಸಾವಿರ ಕೋಟಿ ರೂಪಾಯಿ ವೆಚ್ಚದ ರಾಷ್ಟ್ರೀಯ ಯೋಜನೆಯಾದ ಅಟಲ್ ಭೂ ಜಲ ಯೋಜನೆಗೆ ಪ್ರಧಾನಿ ನರೇಂದ್ರ ಮೋದಿ ಬುಧವಾರ ವಿಧ್ಯುಕ್ತವಾಗಿ ಚಾಲನೆ ನೀಡಿದರು.
ಈಗಾಗಲೇ ಕೇಂದ್ರ ಸಂಪುಟ ಅಟಲ್ ಭೂ ಜಲ ಯೋಜನೆಗೆ ಅನುಮತಿ ನೀಡಿತ್ತು. ಈ ಹಿನ್ನೆಲೆಯಲ್ಲಿ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ 95ನೇ ಜನ್ಮ ದಿನಾಚರಣೆ ಅಂಗವಾಗಿ ಈ ಯೋಜನೆಗೆ ಪ್ರಧಾನಿ ಮೋದಿ ಚಾಲನೆ ನೀಡಿದ್ದಾರೆ.
2020ರಿಂದ 2025ರೊಳಗೆ ಈ ಮಹತ್ವದ ಯೋಜನೆಯನ್ನು ಅನುಷ್ಠಾನಗೊಳಿಸಲಾಗುವುದು ಎಂದರು. ಕರ್ನಾಟಕ, ಗುಜರಾತ್, ಹರ್ಯಾಣ, ಮಧ್ಯಪ್ರದೇಶ, ಮಹಾರಾಷ್ಟ್ರ, ರಾಜಸ್ಥಾನ ಮತ್ತು ಉತ್ತರಪ್ರದೇಶ ಸೇರಿದಂತೆ ಏಳು ರಾಜ್ಯಗಳ ಕೆಲವು ಆದ್ಯತೆಯ ಪ್ರದೇಶಗಳಲ್ಲಿ ಅಂತರ್ಜಲವನ್ನು ಹೆಚ್ಚಿಸುವ ಮಹತ್ವಾಕಾಂಕ್ಷೆಯ ಯೋಜನೆ ಇದಾಗಿದೆ ಎಂದು ಪ್ರಧಾನಿ ಹೇಳಿದರು.
ಅಂತರ್ಜಲ ರಕ್ಷಿಸುವ ಈ ಯೋಜನೆಯಿಂದ ಏಳು ರಾಜ್ಯಗಳ 78 ಜಿಲ್ಲೆಯ ಸುಮಾರು 8,350 ಗ್ರಾಮ ಪಂಚಾಯ್ತಿಗಳಿಗೆ ಲಾಭವಾಗುವ ನಿರೀಕ್ಷೆ ಇದೆ ಎಂದು ವರದಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bharat Brand: ಭಾರತ್ ಬ್ರ್ಯಾಂಡ್-2ಗೆ ಚಾಲನೆ: 30ಕ್ಕೆ ಗೋಧಿ ಹಿಟ್ಟು, ಕೆ.ಜಿ.ಅಕ್ಕಿಗೆ 34
US Polls; ಟ್ರಂಪ್‌ಗೆ ಗೆಲುವು: ಭವಿಷ್ಯ ನುಡಿದ ಪ್ರಸಿದ್ಧ ನೀರಾನೆ ಮೂಡೆಂಗ್
Wikipedia: ಪಕ್ಷಪಾತ, ತಪ್ಪು ಮಾಹಿತಿ ದೂರು: ವಿಕಿಪೀಡಿಯಾಗೆ ಕೇಂದ್ರದಿಂದ ನೋಟಿಸ್
Jharkhand: ಜನ-ಪ್ರಧಾನಿ ಪರ ಸರ್ಕಾರ ನಡುವಿನ ಸ್ಪರ್ಧೆ: ಕಾಂಗ್ರೆಸ್
New Delhi: 5ಜಿ ಸೇವೆಗಾಗಿ ಬಿಎಸ್‌ಎನ್ಎಲ್‌ನಿಂದ ಟೆಂಡರ್ ಆಹ್ವಾನ
MUST WATCH
ಹೊಸ ಸೇರ್ಪಡೆ
Bharat Brand: ಭಾರತ್ ಬ್ರ್ಯಾಂಡ್-2ಗೆ ಚಾಲನೆ: 30ಕ್ಕೆ ಗೋಧಿ ಹಿಟ್ಟು, ಕೆ.ಜಿ.ಅಕ್ಕಿಗೆ 34
US Polls; ಟ್ರಂಪ್‌ಗೆ ಗೆಲುವು: ಭವಿಷ್ಯ ನುಡಿದ ಪ್ರಸಿದ್ಧ ನೀರಾನೆ ಮೂಡೆಂಗ್
Award: ಪ್ರೊ.ತಾಳ್ತಜೆ ವಸಂತ ಕುಮಾರ್‌ಗೆ ಕನಕ ಗೌರವ ಪ್ರಶಸ್ತಿ
Chikkamagaluru: ನ.9ರಿಂದ 11ರ ತನಕ ದತ್ತಪೀಠಕ್ಕೆ ಪ್ರವಾಸಿಗರಿಗೆ ನಿರ್ಬಂಧ
Attack On Car: ಎಡನೀರು ಸ್ವಾಮೀಜಿ ಕಾರಿನ ಮೇಲೆ ದಾಳಿ: ಕಸಾಪ, ಬ್ರಾಹ್ಮಣ ಮಹಾಸಭಾ ಖಂಡನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.