ದೇಶದಲ್ಲಿ ಕೋವಿಡ್ ಉಲ್ಬಣ : ಮೋದಿಗೆ ಪತ್ರ ಬರೆದ ಮಾಜಿ ಪ್ರಧಾನಿ ಮನಮೋಹನ್ ಸಿಂಗ್
Team Udayavani, Apr 18, 2021, 5:45 PM IST
ನವದೆಹಲಿ: ದೇಶದಲ್ಲಿ ಮಹಾಮಾರಿ ಕೋವಿಡ್-19 ಸೋಂಕು ಉಲ್ಬಣಿಸುತ್ತಿರುವ ಬೆನ್ನಲ್ಲೆ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದು, ಕೆಲವೊಂದು ಸಲಹೆಗಳನ್ನು ನೀಡಿದ್ದಾರೆ.
ಮೋದಿ ಅವರಿಗೆ ಭಾನುವಾರ ಪತ್ರ ಬರೆದಿರುವ ಸಿಂಗ್, ಕೋವಿಡ್-19 ವಿರುದ್ದದ ಹೋರಾಟದಲ್ಲಿ ಪ್ರಮುಖ ಅಸ್ತ್ರವಾಗಿರುವ ವ್ಯಾಕ್ಸಿನೇಷನ್ ಹೆಚ್ಚಳಕ್ಕೆ ಪ್ರಯತ್ನಿಸಬೇಕು, ಎಷ್ಟು ಸಂಖ್ಯೆಯ ಲಸಿಕೆ ಹಾಕಲಾಗಿದೆ ಎಂಬುದನ್ನು ನೋಡಬಾರದು. ಲಸಿಕೆ ಪಡೆದ ಶೇಕಡಾವಾರು ಜನಸಂಖ್ಯೆ ಮೇಲೆ ಗಮನ ಕೇಂದ್ರೀಕರಿಸಬೇಕು ಎಂದು ಹೇಳಿದ್ದಾರೆ.
ಭಾರತ ಪ್ರಸ್ತುತ ತನ್ನ ಜನಸಂಖ್ಯೆಯ ಒಂದು ಸಣ್ಣ ಭಾಗಕ್ಕೆ ಮಾತ್ರ ಲಸಿಕೆ ನೀಡಿದೆ. ಸರಿಯಾದ ಯೋಜನೆಯೊಂದಿಗೆ ನಾವು ಹೆಚ್ಚು ಉತ್ತಮವಾಗಿ ಮತ್ತು ತ್ವರಿತವಾಗಿ ಲಸಿಕೆ ನೀಡಬೇಕಾಗಿದೆ. ಸಾಂಕ್ರಾಮಿಕದ ವಿರುದ್ಧ ಹೋರಾಡಲು ನಾವು ಅನೇಕ ಕೆಲಸಗಳನ್ನು ಮಾಡಬೇಕು. ಆದರೆ, ಈ ಪ್ರಯತ್ನದ ಒಂದು ದೊಡ್ಡ ಭಾಗವಾಗಿ ವ್ಯಾಕ್ಸಿನೇಷನ್ ಹೆಚ್ಚಳ ಮಾಡಬೇಕು.
ಲಸಿಕೆ ಉತ್ಪಾದಕರಿಗೆ ತ್ವರಿತವಾಗಿ ಹಣ ಹಾಗೂ ಇತರೆ ಸೌಲಭ್ಯಗಳನ್ನು ಕಲ್ಪಿಸುವ ಮೂಲಕ ಕೇಂದ್ರ ಸರ್ಕಾರವು ಲಸಿಕೆ ಉತ್ಪಾದನೆಯನ್ನು ಹೆಚ್ಚಿಸಬೇಕು. ದೇಶದ ವಿವಿಧ ರಾಜ್ಯಗಳಿಗೆ ಬೇಡಿಕೆಗೆ ಅನುಗುಣವಾಗಿ ಯಾವ ಪ್ರಮಾಣದಲ್ಲಿ ಲಸಿಕೆ ಪೂರೈಸಲಾಗುತ್ತದೆ ಎಂಬುದನ್ನು ಪಾರದರ್ಶಕವಾಗಿ ಕೇಂದ್ರ ಸರ್ಕಾರ ತಿಳಿಸಬೇಕೆಂದು ಮನಮಹೋನ್ ಸಿಂಗ್ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Parliament; ಪ್ರಿಯಾಂಕಾ ಗಾಂಧಿ- ರಾಹುಲ್ ಜತೆ ಸೇರಿ ಬಿಜೆಪಿ ನಿದ್ದೆಗೆಡಿಸುತ್ತಾರೆ :ಪೈಲಟ್
Goa ಕರಾವಳಿಯಲ್ಲಿ ನೌಕಾಪಡೆಯ ಸಬ್ ಮರೈನ್ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!
Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
MUST WATCH
ಹೊಸ ಸೇರ್ಪಡೆ
Parliament; ಪ್ರಿಯಾಂಕಾ ಗಾಂಧಿ- ರಾಹುಲ್ ಜತೆ ಸೇರಿ ಬಿಜೆಪಿ ನಿದ್ದೆಗೆಡಿಸುತ್ತಾರೆ :ಪೈಲಟ್
Sagara: ತರಗತಿ ಕೊಠಡಿಯಲ್ಲಿ ಅವ್ಯವಸ್ಥೆ… ಕಾಲೇಜು ವಿದ್ಯಾರ್ಥಿಗಳಿಂದ ದಿಢೀರ್ ಪ್ರತಿಭಟನೆ
Dandeli: ಅಧಿಕಾರಿಗಳಿಂದ ರೈಲು ಮಾರ್ಗದ ವಿದ್ಯುದ್ದೀಕರಣ ಪರಿಶೀಲನೆ
Love Reddy: ತೆರೆಗೆ ಬಂತು ʼಲವ್ ರೆಡ್ಡಿʼ
Yadagiri: ಕೆಡಿಪಿ ಸಭೆಯಲ್ಲಿ ಸಚಿವರ-ಶಾಸಕರ ನಡುವೆ ವಾಕ್ ಸಮರ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.