PM Modi: ಒಂದೂವರೆ ವರ್ಷದಲ್ಲಿ 10 ಲಕ್ಷ ಸರಕಾರಿ ಉದ್ಯೋಗ
ಈ ಹಿಂದಿನ ಯಾವುದೇ ಸರಕಾರಗಳು ಇಷ್ಟೊಂದು ಸರಕಾರಿ ಉದ್ಯೋಗ ನೀಡಿಲ್ಲ
Team Udayavani, Dec 24, 2024, 1:03 AM IST
ಹೊಸದಿಲ್ಲಿ: ತಮ್ಮ ನೇತೃತ್ವದ ಸರಕಾರವು ಕಳೆದ ಒಂದು ಒಂದೂವರೆ ವರ್ಷದಲ್ಲಿ ಸುಮಾರು 10 ಲಕ್ಷ ಸರಕಾರಿ ಉದ್ಯೋಗಗಳನ್ನು ನೀಡಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಹೇಳಿದ್ದಾರೆ.
ಸುಮಾರು 71 ಸಾವಿರ ಜನರಿಗೆ ನೇಮಕಾತಿ ಪತ್ರಗಳನ್ನು ವಿತರಿಸುವ ರೋಜ್‌ಗಾರ್ ಮೇಳವನ್ನು ಸೋಮವಾರ ವರ್ಚುಯಲ್ ಆಗಿ ಉದ್ದೇಶಿಸಿ ಮಾತನಾಡಿದ ಅವರು, ಈ ಹಿಂದಿನ ಯಾವುದೇ ಸರಕಾರಗಳು ಈ ರೀತಿಯಾಗಿ ಕಾಯಂ ಸರಕಾರಿ ಉದ್ಯೋಗಗಳನ್ನು ನೀಡಿಲ್ಲ ಎಂದು ಹೇಳಿಕೊಂಡರು.
ನೇಮಕಾತಿ ಪ್ರಕ್ರಿಯೆಯಲ್ಲಿ ಪ್ರಾಮಾಣಿಕತೆ ಮತ್ತು ದಕ್ಷತೆಯನ್ನು ಕಾಯ್ದುಕೊಳ್ಳಲಾಗಿದೆ. ಸರಕಾರದ ನೀತಿ ಮತ್ತು ಕಾರ್ಯಕ್ರಮಗಳಲ್ಲಿ ಯುವ ಜನತೆ ಕೇಂದ್ರ ಬಿಂದುವಾಗಿದ್ದಾರೆ ಎಂದು ಹೇಳಿದರು. ಹೊಸತಾಗಿ ನೇಮಕಗೊಂಡವರಲ್ಲಿ ಮಹಿಳೆಯರೇ ಹಚ್ಚಿನ ಸಂಖ್ಯೆಯಲ್ಲಿ ಇದ್ದಾರೆ. ಕೇಂದ್ರ ಸರಕಾರ ಯುವಜನರನ್ನು ಉದ್ದೇಶಿಸಿಯೇ ಯೋಜನೆಗಳನ್ನು ಜಾರಿಗೊಳಿಸುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಇದೇ ಸಂದರ್ಭದಲ್ಲಿ ಪ್ರತಿಪಾದಿಸಿದ್ದಾರೆ.
ಮಹಿಳೆಯರಿಗೆ 26 ವಾರಗಳ ಮಾತೃತ್ವ ರಜೆ ಒದಗಿಸಿದ್ದರಿಂದ ಅವರ ವೃತ್ತಿ ಜೀವನಕ್ಕೆ ಉಪಯೋ ಗವಾಗಿದೆ. ಅಲ್ಲದೇ ಪಿಎಂ ಆವಾಸ್ ಯೋಜನೆಯಲ್ಲಿ ನಿರ್ಮಾಣವಾದ ಬಹುತೇಕ ಮನೆಗಳ ಮಾಲಕರು ಮಹಿಳೆಯರೇ ಆಗಿದ್ದಾರೆ. ದೇಶದಲ್ಲಿ ಮಹಿಳಾ ಕೇಂದ್ರಿತ ಅಭಿವೃದ್ಧಿ ಕೈಗೂಡುತ್ತಿದೆ ಎಂದು ಇದೇ ವೇಳೆ ಹೇಳಿದರು.
ರೋಜ್‌ಗಾರ್ ಮೇಳದಿಂದ ಯುವ ಜನತೆಯ ಸಾಮರ್ಥ್ಯವನ್ನು ಹೊರಗೆ ಹಾಕಲು ಸಾಧ್ಯವಾಗುತ್ತಿದೆ. ಭಾರತದಲ್ಲಿ ಇಂದಿನ ಯುವ ಜನ ಪ್ರತೀ ಕ್ಷೇತ್ರದಲ್ಲಿ ಆತ್ಮವಿಶ್ವಾಸವನ್ನು ಪ್ರದರ್ಶಿಸುತ್ತಿದ್ದಾರೆ ಎಂದು ಮೋದಿ ಹೇಳಿದರು. ಇದೇ ವೇಳೆ ಅವರು ಭಾರತವು ಈಗ ವಿಶ್ವದಲ್ಲೇ 5ನೇ ಅತೀದೊಡ್ಡ ಆರ್ಥಿಕತೆಯ ರಾಷ್ಟ್ರವಾಗಿದೆ ಎಂದು ಹೇಳಿದರು.
ರೋಜ್‌ಗಾರ್ ಮೇಳದಲ್ಲಿ ನೇಮಕಾತಿ ಪತ್ರ ವಿತರಣೆ
ಕೇಂದ್ರ ಸರ ಕಾ ರದ ವಿವಿಧ ಇಲಾಖೆಗಳಲ್ಲಿ ಹೊಸದಾಗಿ ನೇಮಕಗೊಳ್ಳುವವರಿಗೆ ರೋಜ್‌ಗಾರ್ ಮೇಳ ಮೂಲಕ ನೇಮಕಾತಿ ಪತ್ರಗಳನ್ನು ಸರಕಾರ ವಿತರಿಸುತ್ತಾ ಬಂದಿದೆ. ಈ ಮೊದಲು 2024ರ ಅ.29ರಂದು ಕೂಡ 51 ಸಾವಿರಕ್ಕೂ ಅಧಿಕಕ್ಕೂ ಪತ್ರಗಳನ್ನು ವಿತರಿಸಲಾಗಿತ್ತು. ಫೆ.12ರಂದು 1 ಲಕ್ಷಕ್ಕೂ ಅಧಿಕ ಹಾಗೂ 2023ರ ನವೆಂಬರ್‌ನಲ್ಲಿ 51 ಸಾವಿರಕ್ಕೂ ಅಧಿಕ ಹಾಗೂ 2023ರ ಅಕ್ಟೋಬರ್‌ನಲ್ಲಿ 51 ಸಾವಿರಕ್ಕೂ ಅಧಿಕ ನೇಮಕಾತಿ ಪತ್ರಗಳನ್ನು ರೋಜ್‌ಗಾರ್ ಮೇಳಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಹಸ್ತಾಂತರಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jammu- Kashmir: ಆಯ್ಕೆಯಾಗಿ 2 ತಿಂಗಳಾದ್ರೂ ಶಾಸಕರಿಗೆ ಮೊದಲ ವೇತನ ಸಿಕ್ಕಿಲ್ಲ!
Enforcement Directorate: ಕ್ರಿಮಿನಲ್ ಪಿತೂರಿಯಡಿ ಮಾತ್ರವೇ ಅಕ್ರಮ ಹಣ ವರ್ಗ ಕೇಸು ಬೇಡ
Sabarimala: ತಂಗಅಂಗಿ ಶೋಭಾಯಾತ್ರೆ ಆರಂಭ
Encounter: ಉತ್ತರಪ್ರದೇಶದಲ್ಲಿ ಎನ್‌ಕೌಂಟರ್: 3 ಶಂಕಿತ ಖಲಿಸ್ಥಾನಿ ಉಗ್ರರ ಹತ್ಯೆ
Parliament: ಸಂಸದರ ತಳ್ಳಾಟ: ಇಂದು ಸಂಸತ್ ಭವನಕ್ಕೆ ದಿಲ್ಲಿ ಪೊಲೀಸರ ಭೇಟಿ?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Jammu- Kashmir: ಆಯ್ಕೆಯಾಗಿ 2 ತಿಂಗಳಾದ್ರೂ ಶಾಸಕರಿಗೆ ಮೊದಲ ವೇತನ ಸಿಕ್ಕಿಲ್ಲ!
Police System: ಕರ್ನಾಟಕ ಪೊಲೀಸರ ಘನತೆ ಕಾಂಗ್ರೆಸ್‌ನಿಂದ ಸರ್ವನಾಶ: ಎಚ್.ಡಿ.ಕುಮಾರಸ್ವಾಮಿ
Koteshwara: ಟಯರ್‌ಗೆ ಗಾಳಿ ತುಂಬುತ್ತಿದ್ದ ವೇಳೆ ಸ್ಫೋ*ಟಗೊಂಡು ಯುವಕ ಗಂಭೀರ; ಕಾರಣಗಳೇನು?
2nd ODI: ವನಿತಾ ಏಕದಿನ ಸರಣಿ: ಇಂದು ಭಾರತ-ವಿಂಡೀಸ್ 2ನೇ ಪಂದ್ಯ
Enforcement Directorate: ಕ್ರಿಮಿನಲ್ ಪಿತೂರಿಯಡಿ ಮಾತ್ರವೇ ಅಕ್ರಮ ಹಣ ವರ್ಗ ಕೇಸು ಬೇಡ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.