PM Modi Advise;ವಿಮಾನಗಳಿಗೆ ಬೆದರಿಕೆ ಕಡಿವಾಣಕ್ಕೆ ಸರಕಾರ ಮುಂದಾಗಬೇಕು
Team Udayavani, Oct 25, 2024, 12:52 AM IST
ಹೊಸದಿಲ್ಲಿ: “ದೇಶದಲ್ಲಿ ವಿಮಾನಗಳಿಗೆ ಹುಸಿ ಬಾಂಬ್ ಬೆದರಿಕೆ ಒಡ್ಡುತ್ತಿರುವ ದುಷ್ಕರ್ಮಿಗಳನ್ನು ಮಟ್ಟಹಾಕಲು ಸರಕಾರವೇ ಮನ್ನುಗ್ಗಬೇಕಿದೆ’- ಹೀಗೆಂದು ಖುದ್ದು ಪ್ರಧಾನಿ ನರೇಂದ್ರ ಮೋದಿಯವರೇ ಈ ಬಗ್ಗೆ ಸೂಚಿಸಿದ್ದಾರೆಂದು ಮೂಲಗಳು ತಿಳಿಸಿವೆ. ವಿಮಾನಗಳಿಗೆ ಬೆದರಿಕೆ ಒಡ್ಡುತ್ತಿರುವ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿರುವಂತೆಯೇ ಪ್ರಧಾನಿಯವರ ಈ ನಡೆ ಮಹತ್ವ ಪಡೆದಿದೆ.
ಹುಸಿ ಬಾಂಬ್ ಕರೆಗಳನ್ನು ಗಂಭೀರ ಪ್ರಕರಣವೆಂದು ಪರಿಗಣಿಸುವುದರ ಜತೆಗೆ ಇಂಥ ಕೃತ್ಯಗಳನ್ನು ಎಸಗುವವರಿಗೆ ಕಾನೂನಾತ್ಮಕವಾಗಿ ಕಡಿವಾಣ ಹಾಕಲು ಅಗತ್ಯವಿರುವ ಶಾಸನಗಳನ್ನು ರಚಿಸಿ, ಆ ಮೂಲಕ ಶಿಕ್ಷಿಸುವ ಬಗ್ಗೆಯೂ ಸರಕಾರ ಗಮನಹರಿಸಬೇಕೆಂದು ಪ್ರಧಾನಿ ಸಲಹೆ ನೀಡಿದ್ದಾರೆಂದೂ ತಿಳಿದುಬಂದಿದೆ.
ಒಂದೇ ದಿನ 90 ಹುಸಿ ಕರೆ
ಗುರುವಾರ ಒಂದೇ ದಿನ ಕೋಲ್ಕತಾ-ಬೆಂಗಳೂರು, ಕೊಚ್ಚಿ- ಬೆಂಗಳೂರು ವಿಮಾನ ಸೇರಿ 90ಕ್ಕೂ ಅಧಿಕ ದೇಶೀಯ ವಿಮಾನಗಳಿಗೆ ಮತ್ತೆ ಹುಸಿ ಬಾಂಬ್ ಬೆದರಿಕೆ ಬಂದಿದೆ. ಏರ್ ಇಂಡಿಯಾ, ವಿಸ್ತಾರ, ಇಂಡಿಗೋ ಸಂಸ್ಥೆಯ ತಲಾ 20 ವಿಮಾನಗಳಿಗೆ ಹಾಗೂ ಆಕಾಶ ಏರ್‌ನ 13, ಅಲಯನ್ಸ್ ಏರ್, ಸ್ಪೈಸ್ ಜೆಟ್‌ನ ತಲಾ 5 ವಿಮಾನಗಳಿಗೆ ಬೆದರಿಕೆ ಒಡ್ಡಲಾಗಿದೆ. ಈ ಮೂಲಕ ಕಳೆದ 11 ದಿನಗಳಲ್ಲಿ 250 ವಿಮಾನಗಳಿಗೆ ಹುಸಿ ಬಾಂಬ್ ಬೆದರಿಕೆ ಒಡ್ಡಿದಂತಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Adani Group; ಲಂಚದ ಆರೋಪ ಆಧಾರ ರಹಿತ, ಕಾನೂನು ಕ್ರಮ ಕೈಗೊಳ್ಳುತ್ತೇವೆ
Kasabಗೂ ನ್ಯಾಯಯುತ ವಿಚಾರಣೆ ಅವಕಾಶ ಸಿಕ್ಕಿತ್ತು;Yasin ಕೇಸ್ ಬಗ್ಗೆ ಸುಪ್ರೀಂ ಹೇಳಿದ್ದೇನು?
Delhi Polls: 11 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಆಪ್… ಯಾರಿಗೆ ಯಾವ ಕ್ಷೇತ್ರ
Viral Video: ಬೇಟೆಗೆ ಹೊಂಚು ಹಾಕುತ್ತಿದ್ದ ಹಾವನ್ನೇ ಬೇಟೆಯಾಡಲು ಮುಂದಾದ ಮೀನು…
Adani Group: ಲಂಚ, ಸತ್ಯ ಮರೆಮಾಚಿದ ಕಾರಣಕ್ಕೆ ಗೌತಮ್ ಅದಾನಿ ವಿರುದ್ದ ಅಮೆರಿಕದಲ್ಲಿ ಕೇಸು
MUST WATCH
ಹೊಸ ಸೇರ್ಪಡೆ
Thailand ನಲ್ಲಿ ಜೇನಿನ ಆಯುರ್ವೇದ ಔಷಧ ಕಥೆ ಹೇಳಿದ ಅಪ್ಪ,ಮಗಳು
Karnataka;ಕಾರ್ಪೊರೇಟ್ ಸಂಸ್ಥೆಗಳಿಂದ 100 ಇಂಜಿನಿಯರಿಂಗ್ ಕಾಲೇಜುಗಳ ದತ್ತು
Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ
Belagavi: ಪೂರ್ಣಾವಧಿ ಅಧಿವೇಶನದಲ್ಲಿ ಸಮಸ್ಯೆಗಳ ಪೂರ್ಣ ಚರ್ಚೆಯಾಗಲಿ: ಡಾ.ಪ್ರಭಾಕರ್ ಕೋರೆ
Pakistan; ಶಿಯಾ ಮುಸ್ಲಿಮರನ್ನು ಗುರಿಯಾಗಿರಿಸಿ ಗುಂಡಿನ ದಾಳಿ: ಕನಿಷ್ಠ 38 ಬ*ಲಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.