ವಾರಣಾಸಿಯ ಹೆದ್ದಾರಿ ಪರಿಶೀಲಿಸಿದ ಪ್ರಧಾನಿ… ಇಂದು ಹಲವು ಅಭಿವೃದ್ಧಿ ಯೋಜನೆಗಳಿಗೆ ಚಾಲನೆ
Team Udayavani, Feb 23, 2024, 9:19 AM IST
ವಾರಾಣಸಿ: ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ ತಡರಾತ್ರಿ ವಾರಾಣಸಿಗೆ ಆಗಮಿಸಿದ್ದು ಇಲ್ಲಿನ ಹೆದ್ದಾರಿಯ ಪರಿಶೀಲನೆ ನಡೆಸಿದರು. ಗುರುವಾರ ರಾತ್ರಿ 11 ಗಂಟೆ ಸುಮಾರಿಗೆ ಕಾಶಿಗೆ ಬಂದಿಳಿದ ಪ್ರಧಾನಿ ಮೋದಿ ಇತ್ತೀಚಿಗೆ ಉದ್ಘಾಟನೆಗೊಂಡಿದ್ದ ಶಿವಪುರ-ಫುಲ್ವಾರಿಯಾ-ಲಹರ್ತಾರಾ ಹೆದ್ದಾರಿಯನ್ನು ಪರಿಶೀಲಿಸಿದರು.
ಬಳಿಕ ಈ ಕುರಿತು ತಮ್ಮ X ಖಾತೆಯಲ್ಲಿ ಭೇಟಿ ನೀಡಿದ ವಿಚಾರವನ್ನು ಹಂಚಿಕೊಂಡಿದ್ದಾರೆ ಪ್ರಧಾನಿ ಜೊತೆಗೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಜೊತೆಗಿದ್ದರು.
ಇಂದು ಹಲವು ಅಭಿವೃದ್ಧಿ ಯೋಜನೆಗಳಿಗೆ ಚಾಲನೆ:
ಎರಡು ದಿನಗಳ ಭೇಟಿಗಾಗಿ ವಾರಣಾಸಿಗೆ ಬಂದಿರುವ ಪ್ರಧಾನಿ ಅವರು ಇಂದು 13,202 ಕೋಟಿಗೂ ಹೆಚ್ಚು ಮೌಲ್ಯದ ಬಹು ಅಭಿವೃದ್ಧಿ ಯೋಜನೆಗಳ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.
ಈ ಕುರಿತು ಮಾಹಿತಿ ನೀಡಿದ ಜಿಲ್ಲಾಡಳಿತದ ಹಿರಿಯ ಅಧಿಕಾರಿ, ಇಂದು ಪ್ರಧಾನಿಯವರು 11,972 ಕೋಟಿ ಮೌಲ್ಯದ 24 ಯೋಜನೆಗಳನ್ನು ಉದ್ಘಾಟಿಸಲಿದ್ದಾರೆ ಜೊತೆಗೆ 2,195 ಕೋಟಿ ಮೌಲ್ಯದ 12 ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ ಎಂದು ತಿಳಿಸಿದ್ದಾರೆ.
Upon landing in Kashi, inspected the Shivpur-Phulwaria-Lahartara Marg. This project was inaugurated recently and has been greatly helpful to people in the southern part of the city. pic.twitter.com/9W0YkaBdLX
— Narendra Modi (@narendramodi) February 22, 2024
ಇದಾದ ಬಳಿಕ ಪ್ರಧಾನಮಂತ್ರಿಯವರು ಬಿಎಚ್‌ಯುನಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ, ಅಲ್ಲಿ ಅವರು ಕಾಶಿ ಸಂಸದ್ ಜ್ಞಾನ ಪ್ರತಿಯೋಗಿತಾ, ಕಾಶಿ ಸಂಸದ್ ಛಾಯಾಗ್ರಹಣ ಪ್ರತಿಯೋಗಿತಾ ಮತ್ತು ಕಾಶಿ ಸಂಸದ್ ಸಂಸ್ಕೃತ ಪ್ರತಿಯೋಗಿತಾ ವಿಜೇತರಿಗೆ ಪ್ರಶಸ್ತಿ ಪ್ರಧಾನ ಮಾಡಲಿದ್ದಾರೆ.
ವಾರಣಾಸಿಯ ಸಂಸ್ಕೃತ ವಿದ್ಯಾರ್ಥಿಗಳಿಗೆ ಪುಸ್ತಕಗಳು, ಸಮವಸ್ತ್ರದ ಸೆಟ್‌ಗಳು, ಸಂಗೀತ ವಾದ್ಯಗಳು ಮತ್ತು ಮೆರಿಟ್ ವಿದ್ಯಾರ್ಥಿವೇತನವನ್ನು ವಿತರಿಸುತ್ತಾರೆ ಮತ್ತು ಭಾಗವಹಿಸುವವರ ಜೊತೆ ‘ಸನ್ವರ್ತಿ ಕಾಶಿ’ ವಿಷಯದ ಕುರಿತು ತಮ್ಮ ಛಾಯಾಚಿತ್ರ ವಿಚಾರದ ಬಗ್ಗೆಯೂ ಸಂವಾದ ನಡೆಸುತ್ತಾರೆ.
“ಪ್ರಧಾನಿ ಮೋದಿ ಅವರು ಸೀರ್ಗೋವರ್ಧನ್‌ನಲ್ಲಿರುವ ಸಂತ ರವಿದಾಸ್ ದೇವಾಲಯಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಲಿದ್ದಾರೆ, ಬಳಿಕ ಸಂತ ರವಿದಾಸ್ ಜನ್ಮಸ್ಥಳದ ಸುತ್ತಮುತ್ತ ಸುಮಾರು 32 ಕೋಟಿ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ, ಸಂತ ರವಿದಾಸ್ ಪ್ರತಿಮೆ ಅನಾವರಣ, ವಸ್ತುಸಂಗ್ರಹಾಲಯದ ಶಂಕುಸ್ಥಾಪನೆ ಮತ್ತು ಸುಮಾರು 62 ಕೋಟಿ ವೆಚ್ಚದ ಉದ್ಯಾನವನ ಸೇರಿದಂತೆ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಅವರು ಉದ್ಘಾಟಿಸಲಿದ್ದಾರೆ ಎಂದು ಕಾಶಿ ಪ್ರದೇಶ ಬಿಜೆಪಿ ಅಧ್ಯಕ್ಷ ದಿಲೀಪ್ ಪಟೇಲ್ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾರ್ಗಿಲ್ ದಾಳಿ ಮಾಹಿತಿ ಕೊಟ್ಟ ಕುರಿಗಾಹಿ ಸಾವು: ಸೇನೆ ನಮನ
Pegasus spyware ಬಗ್ಗೆ ಸುಪ್ರೀಂಕೋರ್ಟ್ ತನಿಖೆ ನಡೆಸಲಿ: ಸುರ್ಜೇವಾಲಾ
Allu Arjun ನಿವಾಸದಲ್ಲಿ ದಾಂಧಲೆ!; 8 ಮಂದಿ ಬಂಧನ: ಕೃತ್ಯ ಎಸಗಿದ್ದು ಯಾರು?
Vasundhara Raje ಬೆಂಗಾವಲು ವಾಹನ ಪಲ್ಟಿ; ನಾಲ್ವರು ಪೊಲೀಸರಿಗೆ ಗಾಯ
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.