ಚೌಕಿದಾರನನ್ನು ತಡೆಯಲಾಗದು,ಯಾರನ್ನೂ ಬಿಡಲ್ಲ: ಮೋದಿ ಗುಡುಗು
Team Udayavani, Jan 12, 2019, 9:21 AM IST
ಹೊಸದಿಲ್ಲಿ: ಚೌಕಿದಾರನನ್ನು ಯಾರಿಂದಲೂ ತಡೆಯಲಾಗದು, ಭ್ರಷ್ಟಾಚಾರ, ಅನ್ಯಾಯ ಮಾಡುವ ಯಾರನ್ನೂ ಬಿಡುವವನಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಗುಡುಗಿದ್ದಾರೆ.
ನವದೆಹಲಿಯ ರಾಮಲೀಲಾ ಮೈದಾನದಲ್ಲಿ ನಡೆಯುತ್ತಿರುವ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿಯನ್ನು ಉದ್ದೇಶಿಸಿ ಶನಿವಾರ ಮಾತನಾಡಿದ ಅವರು ಕಾಂಗ್ರೆಸ್ ವಿರುದ್ಧ ನಿರಂತರ ವಾಗ್ಧಾಳಿ ನಡೆಸಿ ಚುನಾವಣಾ ರಣ ಕಹಳೆ ಮೊಳಗಿಸಿದ್ದಾರೆ.
ಹಿಂದಿನ ಸರ್ಕಾರಗಳು ರಾಷ್ಟ್ರವನ್ನು ಕತ್ತಲೆಯ ಕೂಪಕ್ಕೆ ನೂಕಿದ್ದವು ಎಂದ ಅವರು ಕೇಂದ್ರದ ಯಾವುದಾದರೂ ಯೋಜನೆಗೆ ನನ್ನ ಹೆಸರು ಹಾಕಿಕೊಂಡಿದ್ದೇನಾ? ಹಿಂದೆ ವ್ಯಕ್ತಿಗಳ ಹೆಸರಿನಿಂದ ಯೋಜನೆಗಳು ಆರಂಭವಾಗುತ್ತಿದ್ದವು. ನಮ್ಮ ಪಕ್ಷದ ಸಿದ್ಧಾಂತವೇ ಹಾಗೆ ಮೊದಲು ದೇಶ ಆ ಬಳಿಕ ವ್ಯಕ್ತಿ ಎಂದರು.
ಒಂದು ಕಾಲದಲ್ಲಿ ನಮ್ಮ ಪಕ್ಷ 2 ಕೋಣೆಗಳಲ್ಲಿ ಕಾರ್ಯ ನಡೆಸುತ್ತಿತ್ತು,ಇಂದು ಇಷ್ಟು ದೊಡ್ಡ ಮಟ್ಟದಲ್ಲಿ ಕಾರ್ಯಕಾರಿಣಿ ನಡೆಯುತ್ತಿದೆ.ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರನ್ನು ನಾವು ನೆನೆಯಬೇಕಾಗಿದೆ. ಇದೇ ಮೊದಲ ಬಾರಿಗೆ ಅವರಿಲ್ಲದೆ ರಾಷ್ಟ್ರೀಯ ಕಾರ್ಯಕಾರಿಣಿ ನಡೆಯುತ್ತಿದೆ ಎಂದರು.
ಆಯೋಧ್ಯೆ ವಿಚಾರದಲ್ಲಿ ಕಾಂಗ್ರೆಸ್ ಪಕ್ಷ ಮುಖ್ಯ ನ್ಯಾಯಾಧೀಶರ ಮೇಲೆ ಆರೋಪ ಹೊರಿಸಿ ಮಹಾವಿಯೋಗ ನಡೆಸಲು ಮುಂದಾಗಿತ್ತು. ತೀರ್ಪು ವಿಳಂಬವಾಗಲು ಕಾಂಗ್ರೆಸ್ ಕಾರಣವಾಗಿದೆ ಎಂದು ಕಿಡಿ ಕಾರಿದರು.
ನಮ್ಮ ಪ್ರತಿಯೋಜನೆಗೂ ಕಾಂಗ್ರೆಸ್ ಬೇಟಿ ಬಚಾವೋ ಬೇಟಿ ಪಡಾವೋ ಯೋಜನೆ, ಜಿಎಸ್‌ಟಿ ಸೇರಿದಂತೆ ಎಲ್ಲಾ ಯೋಜನೆಗಳನ್ನು ಲೇವಡಿ ಮಾಡಿತ್ತು ಎಂದರು.
ನಿಮಗೆ ಯಾವ ರೀತಿಯ ಪ್ರಧಾನ ಸೇವಕ ಬೇಕು? ದಿನದ 18 ಗಂಟೆ ಕೆಲಸ ಮಾಡುವ ವ್ಯಕ್ತಿ ಬೇಕಾ? ಮೂರ್‍ನಾಲ್ಕು ತಿಂಗಳು ರಜೆ ತೆಗೆದುಕೊಂಡು ಹೋಗುವ ವ್ಯಕ್ತಿ ಬೇಕಾ ಎಂದು ರಾಹುಲ್ ಗಾಂಧಿಯವರನ್ನು ಪರೋಕ್ಷವಾಗಿ ಲೇವಡಿ ಮಾಡಿದರು.
ದೇಶದಲ್ಲಿ ಸಮರ್ಥ ಮತ್ತು ಪಾರದರ್ಶಕ ಆಡಳಿತ ನೀಡುವ ಗುರಿ ನಮ್ಮದು ಎಂದರು.
1 ಗಂಟೆ 23 ನಿಮಷಗಳ ಕಾಲ ಸುದೀರ್ಘ ಭಾಷಣವನ್ನು ಪ್ರಧಾನಿ ಮೋದಿ ಅವರು ಮಾಡಿ ಕಾರ್ಯಕರ್ತರಿಗೆ ಸಂದೇಶ ರವಾನಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Choreographer ರೆಮೋ ಡಿಸೋಜಾ ವಿರುದ್ಧದ ಪ್ರಕರಣ ದೆಹಲಿ ಕೋರ್ಟ್ ಗೆ ವರ್ಗಾಯಿಸಿದ ಸುಪ್ರೀಂ
Parliament; ಪ್ರಿಯಾಂಕಾ ಗಾಂಧಿ- ರಾಹುಲ್ ಜತೆ ಸೇರಿ ಬಿಜೆಪಿ ನಿದ್ದೆಗೆಡಿಸುತ್ತಾರೆ :ಪೈಲಟ್
Goa ಕರಾವಳಿಯಲ್ಲಿ ನೌಕಾಪಡೆಯ ಸಬ್ ಮರೈನ್ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!
Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
MUST WATCH
ಹೊಸ ಸೇರ್ಪಡೆ
Belagavi: ದೂರು ಕೊಟ್ಟವರ ಮೊದಲು ಬಂಧಿಸಿ ಬಳಿಕ ನೈಜ ದರೋಡೆಕೋರರ ಸೆರೆ ಹಿಡಿದ ಪೊಲೀಸರು!
Udupi: ಆರೆಸ್ಸೆಸ್ ಹಿರಿಯ ಪ್ರಚಾರಕ್ ಭಯ್ಯಾಜಿ ಜೋಷಿ ಶ್ರೀಕೃಷ್ಣಮಠಕ್ಕೆ ಭೇಟಿ
Bagalakote: ಪ್ರೇಯಸಿ ಗೆಳತಿ ಹ*ತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!
Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ
Karnataka HC; ನಾಲ್ಕನೇ ಪ್ರಕರಣದಲ್ಲೂ ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಜಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.