2024 ಅಲ್ಲ 2047ಕ್ಕೆ ಗುರಿಯಿಟ್ಟು ಕೆಲಸ ಮಾಡಿ: ಸಚಿವರ ಸಭೆಯಲ್ಲಿ ಪ್ರಧಾನಿ ಮೋದಿ ಸೂಚನೆ
Team Udayavani, Jul 4, 2023, 10:35 AM IST
ಹೊಸದಿಲ್ಲಿ: ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ ಸಚಿವರ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು. ಈ ವೇಳೆ ಅವರು, ‘ನೀವುಗಳು 2024ರ ಲಕ್ಷ್ಯವಿಟ್ಟು ಕೆಲಸ ಮಾಡಬೇಡಿ, 2047 ರ ವೇಳೆಗೆ ಹಲವಾರು ಕ್ಷೇತ್ರಗಳಲ್ಲಿ ಭಾರತದ ಬೆಳವಣಿಗೆಯನ್ನು ಹೆಚ್ಚಿಸುವ ಗುರಿಯೊಂದಿಗೆ ಕೆಲಸ ಮಾಡಿ ಎಂದರು.
ದೇಶಕ್ಕೆ ಸ್ವಾತಂತ್ರ್ಯ ಲಭಿಸಿ ಶತಮಾನ ಆಚರಿಸುವ 2047ರ ಅವಧಿಯನ್ನು ಪ್ರಧಾನಿ ಮೋದಿ ಅವರು ಅಮೃತ ಕಾಲ ಎಂದು ಬಣ್ಣಿಸಿದರು. ಮುಂದಿನ 25 ವರ್ಷಗಳಲ್ಲಿ ಅಂದರೆ 2047ರ ವೇಳೆಗೆ ಬಹಳಷ್ಟು ಬದಲಾವಣೆಗಳು ನಡೆಯಲಿದೆ. ಉನ್ನತ ಶಿಕ್ಷಣ ಪಡೆದ ಉದ್ಯೋಗಿಗಳ ಹೊರಹೊಮ್ಮುವಿಕೆಗೆ ಮತ್ತು ವಿವಿಧ ಕ್ಷೇತ್ರಗಳಲ್ಲಿ ಅತ್ಯಾಧುನಿಕ ತಂತ್ರಜ್ಞಾನಗಳ ಅಳವಡಿಕೆಗೆ ಭಾರತ ಸಾಕ್ಷಿಯಾಗಲಿದೆ ಎಂದರು.
ವಿದೇಶಾಂಗ, ರಕ್ಷಣಾ ಮತ್ತು ರೈಲ್ವೆ ಸೇರಿದಂತೆ ವಿವಿಧ ಸಚಿವಾಲಯಗಳನ್ನು ಪ್ರತಿನಿಧಿಸುವ ಹಲವಾರು ಕಾರ್ಯದರ್ಶಿಗಳು ಸಭೆಯಲ್ಲಿ ಮಾತನಾಡಿದರು. ಎಲ್ಲಾ ಸಚಿವಾಲಯಗಳು ಮುಂದಿನ 25 ವರ್ಷಗಳ ಭಾರತದ ಅಭಿವೃದ್ಧಿ ಮಾರ್ಗದ ನಕ್ಷೆಯ ಬಗ್ಗೆ ಪ್ರೆಸೆಂಟೇಶನ್ ನೀಡಿದೆ.
ಸಭೆಯ ನಂತರ, ಪ್ರಧಾನಿ ಮೋದಿ ಅವರು ಭಾಗವಹಿಸಿದ ಸಚಿವರ ಚಿತ್ರವನ್ನು ಟ್ವಿಟ್ಟರ್ ನಲ್ಲಿ ಹಂಚಿಕೊಂಡಿದ್ದಾರೆ. “ಸಚಿವ ಮಂಡಳಿಯೊಂದಿಗೆ ಫಲಪ್ರದ ಸಭೆ ನಡೆಯಿತು. ಅಲ್ಲಿ ನಾವು ವೈವಿಧ್ಯಮಯ ನೀತಿ ಸಂಬಂಧಿತ ವಿಷಯಗಳ ಬಗ್ಗೆ ಅಭಿಪ್ರಾಯಗಳನ್ನು ವಿನಿಮಯ ಮಾಡಿಕೊಂಡಿದ್ದೇವೆ” ಎಂದು ಬರೆದು ಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Passes Away: ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ವಿಧಿವಶ
Congress ಅಧಿವೇಶನದಿಂದ ಬಿಜೆಪಿ ಆತಂಕ, ಹೀಗಾಗಿ ಅಪಪ್ರಚಾರ: ಸುರ್ಜೇವಾಲಾ
Critical: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಆರೋಗ್ಯದಲ್ಲಿ ಏರುಪೇರು; ಏಮ್ಸ್‌ಗೆ ದಾಖಲು
RSS: ಮೋಹನ್ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್ ಪತ್ರಿಕೆ ಆಕ್ಷೇಪ
Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್ ಮಾತು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.