ವೈದ್ಯಕೀಯ ವೆಚ್ಚ ಸ್ವತಃ ಭರಿಸುತ್ತಿರುವ ಮೋದಿ
ಪ್ರಧಾನಮಂತ್ರಿ ಕಾರ್ಯಾಲಯದಿಂದ ಮಾಹಿತಿ
Team Udayavani, Jan 10, 2023, 6:35 AM IST
ಹೊಸದಿಲ್ಲಿ: ಪ್ರಧಾನಿ ಹುದ್ದೆಗೇರಿದ 2014ರ ಮೇ 26ರಿಂದ ಇಲ್ಲಿಯ ವರೆಗೆ ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ವೈದ್ಯಕೀಯ ವೆಚ್ಚವನ್ನು ಸ್ವತಃ ಭರಿಸುತ್ತಿದ್ದಾರೆ. ಇದಕ್ಕಾಗಿ ಪ್ರಧಾನಮಂತ್ರಿ ಕಾರ್ಯಾಲಯದಿಂದ ಬಿಡಿಗಾಸು ಪಡೆದಿಲ್ಲ ಎಂಬ ಅಂಶವು ಆರ್ಟಿಐ ಮಾಹಿತಿಯಿಂದ ಬಹಿರಂಗವಾಗಿದೆ.
ಪುಣೆ ಮೂಲದ ಸಾಮಾಜಿಕ ಕಾರ್ಯಕರ್ತ ಪ್ರಫುಲ್ ಸರ್ದಾರ್ ಈ ಕುರಿತು ಮಾಹಿತಿಗಾಗಿ ಆರ್ಟಿಐ ಅಡಿ ಅರ್ಜಿ ಸಲ್ಲಿಸಿದ್ದರು. 2014ರಿಂದ ಇಲ್ಲಿಯವರೆಗೆ ಪ್ರಧಾನಿ ಮೋದಿ ಅವರಿಗಾಗಿ ಯಾವುದೇ ವೆಚ್ಚವನ್ನು ಭರಿಸಿಲ್ಲ ಎಂದು ಪ್ರಧಾನಮಂತ್ರಿ ಕಾರ್ಯಾಲಯ ಅಧಿಕೃತವಾಗಿ ತಿಳಿಸಿದೆ.
ಸಾಮಾನ್ಯವಾಗಿ ಸಂಸದರಿಗೆ ವೈದ್ಯಕೀಯ ವ್ಯವ ಸ್ಥೆ ಸೇರಿದಂತೆ ಹಲವಾರು ಉಚಿತ ಸೌಲಭ್ಯಗಳಿವೆ. ಇಂಥ ಸೌಲಭ್ಯಗಳಿದ್ದರೂ ಪ್ರಧಾನಿ ಮೋದಿ ಬಳಸಿಕೊಳ್ಳದೆ ಕೈಯಿಂದಲೇ ಹಣ ಭರಿಸಿದ್ದಾರೆ ಎಂದು ಪಿಎಂಒ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.