ರುವಾಂಡಕ್ಕೆ ತೆರಳಿದ ಮೋದಿ
Team Udayavani, Jul 24, 2018, 6:00 AM IST
ಹೊಸದಿಲ್ಲಿ: ಪ್ರಧಾನಿ ನರೇಂದ್ರ ಮೋದಿಯವರ ಐದು ದಿನಗಳ ಅವಧಿಯ ಮೂರು ರಾಷ್ಟ್ರಗಳ ಪ್ರವಾಸ ಸೋಮವಾರ ಮಧ್ಯಾಹ್ನ ಆರಂಭಗೊಂಡಿದೆ. ಪ್ರಧಾನಿಯೊಂದಿಗೆ 100 ಮಂದಿಯ ಭಾರತೀಯ ಪ್ರತಿನಿಧಿಗಳ ನಿಯೋಗವೊಂದು ತೆರಳಿದೆ.
ಈ ಭೇಟಿಯ ಮೊದಲ ದಿನ ರವಾಂಡಕ್ಕೆ ಭೇಟಿ ನೀಡಲಿರುವ ಮೋದಿ, ಆ ದೇಶಕ್ಕೆ ಭೇಟಿ ನೀಡಿದ ಮೊದಲ ಭಾರತೀಯ ಪ್ರಧಾನಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಲಿದ್ದಾರೆ. ರವಾಂಡ ಭೇಟಿಯ ನಂತರ ಜು. 24, 25ರಂದು ಉಗಾಂಡಕ್ಕೆ ಭೇಟಿ ನೀಡಲಿದ್ದಾರೆ. ಸುಮಾರು 20 ವರ್ಷಗಳಲ್ಲಿ ಭಾರತೀಯ ಪ್ರಧಾನಿಯೊಬ್ಬರು ಉಗಾಂಡಕ್ಕೆ ಭೇಟಿ ನೀಡುತ್ತಿರುವುದು ಇದೇ ಮೊದಲು ಎನ್ನಲಾಗಿದೆ. ಇನ್ನು, ಪ್ರವಾಸದ ಕೊನೆಯ ಹಂತದಲ್ಲಿ ದಕ್ಷಿಣ ಆಫ್ರಿಕಾಕ್ಕೆ ತೆರಳಲಿದ್ದು, 25ರಿಂದ 27ರವರೆಗೆ ಜೊಹಾನ್ಸ್‌ಬರ್ಗ್‌ನಲ್ಲಿ ಆಯೋಜಿಸಲಾಗಿರುವ ಬ್ರಿಕ್ಸ್ ಮಹಾ ಸಮ್ಮೇಳನದಲ್ಲಿ ಭಾಗಿಯಾಗಲಿದ್ದಾರೆ.
200 ಹಸುಉಡುಗೊರೆ: ತಮ್ಮ ಈ ಮೊದಲ ಭೇಟಿಯಲ್ಲಿ ಮೋದಿ, ರುವಾಂಡದ “ರವೇರು’ ಗ್ರಾಮಕ್ಕೆ ರುವಾಂಡದ ಸ್ಥಳೀಯ ತಳಿಯ 200 ಹಸುಗಳನ್ನು ಉಡುಗೊರೆ ಯಾಗಿ ನೀಡಲಿದ್ದಾರೆ. ಪ್ರತಿಯೊಂದು ಬಡ ಕುಟುಂಬವೊಂದಕ್ಕೆ ಹಸು ವೊಂದನ್ನು ಉಡುಗೊರೆ ನೀಡುವ “ಗಿರಿಂಕಾ’ ಯೋಜನೆಯನ್ನು ರುವಾಂಡ ಅಧ್ಯಕ್ಷರು ಜಾರಿಗೆ ತಂದಿ ದ್ದಾರೆ. ಬಡಕುಟುಂಬ ವೊಂದಕ್ಕೆ ಒಂದು ಹಸುವನ್ನು ಸರಕಾರ ಉಡುಗೊರೆಯಾಗಿ ನೀಡುತ್ತದೆ. ಆ ಹಸುವಿನಿಂದ ಜನಿಸುವ ಮೊದಲ ಕರು ಹೆಣ್ಣಾಗಿದ್ದರೆ ಆ ಕರುವನ್ನು ಆ ಕುಟುಂಬ ನೆರೆಮನೆಯವರಿಗೆ ಉಡುಗೊರೆಯಾಗಿ ನೀಡುವುದು ಈ ಯೋಜನೆಯ ವಿಶೇಷ. ಈ ಯೋಜನೆಗೆ ಪ್ರಧಾನಿ ಮೋದಿ ತಮ್ಮ ಸಹಾಯಹಸ್ತ ಚಾಚಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Choreographer ರೆಮೋ ಡಿಸೋಜಾ ವಿರುದ್ಧದ ಪ್ರಕರಣ ದೆಹಲಿ ಕೋರ್ಟ್ ಗೆ ವರ್ಗಾಯಿಸಿದ ಸುಪ್ರೀಂ
Parliament; ಪ್ರಿಯಾಂಕಾ ಗಾಂಧಿ- ರಾಹುಲ್ ಜತೆ ಸೇರಿ ಬಿಜೆಪಿ ನಿದ್ದೆಗೆಡಿಸುತ್ತಾರೆ :ಪೈಲಟ್
Goa ಕರಾವಳಿಯಲ್ಲಿ ನೌಕಾಪಡೆಯ ಸಬ್ ಮರೈನ್ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!
Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
MUST WATCH
ಹೊಸ ಸೇರ್ಪಡೆ
Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ
ಶ್ರೀಮಂತ ಟೊಕಿಯೊ ಈ ದುಸ್ಥಿತಿಗೆ ತಲುಪಿದ್ಯಾಕೆ…ಈ ದೇಶವೀಗ ಸೆ*ಕ್ಸ್ ಟೂರಿಸಂ ಹಬ್ಬ!
BJP Protest: ʼ1,500 ವರ್ಷದ ಹಿಂದೆ ಅಲ್ಲಾನು ಇರಲಿಲ್ಲ ಮುಲ್ಲಾನೂ ಇರಲಿಲ್ಲʼ: ಸಿ.ಟಿ.ರವಿ
Choreographer ರೆಮೋ ಡಿಸೋಜಾ ವಿರುದ್ಧದ ಪ್ರಕರಣ ದೆಹಲಿ ಕೋರ್ಟ್ ಗೆ ವರ್ಗಾಯಿಸಿದ ಸುಪ್ರೀಂ
Road Mishap: ಬೈಕ್ ಗೆ ಕಾರು ಡಿಕ್ಕಿ: ಓರ್ವ ಸಾವು, ಇಬ್ಬರಿಗೆ ಗಾಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.