President Droupadi Murmu ಅವರ ಹುಟ್ಟುಹಬ್ಬಕ್ಕೆ ಶುಭ ಕೋರಿದ ಪ್ರಧಾನಿ ಮೋದಿ
Team Udayavani, Jun 20, 2023, 10:17 AM IST
ನವದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ 65 ನೇ ಹುಟ್ಟುಹಬ್ಬಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ಶುಭಾಶಯ ಕೋರಿದ್ದಾರೆ.
ಟ್ವೀಟ್‌ನಲ್ಲಿ ಶುಭಾಶಯ ಕೋರಿದ ಅವರು , ರಾಷ್ಟ್ರಪತಿ ಅವರಿಗೆ ಜನ್ಮದಿನದ ಶುಭಾಶಯಗಳು. ಬುದ್ಧಿವಂತಿಕೆ, ಘನತೆ ಮತ್ತು ನಮ್ಮ ಜನರ ಕಲ್ಯಾಣಕ್ಕಾಗಿ ಬದ್ಧತೆಯ ದಾರಿದೀಪ, ರಾಷ್ಟ್ರದ ಪ್ರಗತಿಯನ್ನು ಮತ್ತಷ್ಟು ಹೆಚ್ಚಿಸುವ ಅವರ ಪ್ರಯತ್ನಗಳಿಗಾಗಿ ಅವರು ಮೆಚ್ಚುಗೆ ಪಡೆದಿದ್ದಾರೆ. ಅವರ ಸಮರ್ಪಣೆ ನಮಗೆಲ್ಲರಿಗೂ ಸ್ಫೂರ್ತಿ ನೀಡುತ್ತಿದೆ. ಅವರಿಗೆ ಉತ್ತಮ ಆರೋಗ್ಯ ಮತ್ತು ದೀರ್ಘಾಯುಷ್ಯವನ್ನು ನೀಡಲಿ ಎಂದು ಹಾರೈಸುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.
ಮುರ್ಮು ಅವರು 2022ರಲ್ಲಿ ಭಾರತದ 15ನೇ ರಾಷ್ಟ್ರಪತಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ದೇಶದ ಮೊದಲ ಬುಡಕಟ್ಟು ಮಹಿಳೆ ರಾಷ್ಟ್ರಪತಿ ಎಂಬ ಖ್ಯಾತಿಗೆ ಹೆಸರಾಗಿದ್ದಾರೆ. ಪ್ರತಿಭಾ ಪಾಟೀಲ್ ನಂತರ ಉನ್ನತ ಹುದ್ದೆಗೆ ನೇಮಕಗೊಂಡ ಎರಡನೇ ಮಹಿಳೆ ಇವರಾಗಿದ್ದಾರೆ. ಜೂನ್ 20, 1958 ರಂದು ಒಡಿಶಾದ ರಾಯರಂಗಪುರದ ಬೈದಪೋಸಿ ಪ್ರದೇಶದ ಉಪರಬೇಡ ಗ್ರಾಮದಲ್ಲಿ ಜನಿಸಿದರು.
ಇದಕ್ಕೂ ಮೊದಲು, ದ್ರೌಪದಿ ಮುರ್ಮು ಅವರು 2015 ರಿಂದ 2021 ರವರೆಗೆ ಜಾರ್ಖಂಡ್‌ನ ರಾಜ್ಯಪಾಲರಾಗಿ ಸೇವೆ ಸಲ್ಲಿಸಿದ್ದಾರೆ. 2000 ರಿಂದ 2009 ರವರೆಗೆ ಒಡಿಶಾ ವಿಧಾನಸಭೆಯ ಸದಸ್ಯರಾಗಿಯೂ ಸೇವೆ ಸಲ್ಲಿಸಿದ್ದಾರೆ. 2000 ರಿಂದ 2004 ರವರೆಗೆ ಒಡಿಶಾ ಸರ್ಕಾರದಲ್ಲಿ ರಾಜ್ಯ ಸಚಿವರಾಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.