ಸ್ವಚ್ಛ ಭಾರತ ಅಭಿಯಾನಕ್ಕಾಗಿ ‘ಗ್ಲೋಬಲ್ ಗೋಲ್ ಕೀಪರ್’ ಪ್ರಶಸ್ತಿಗೆ ಭಾಜನರಾದ ಪ್ರಧಾನಿ ಮೋದಿ
Team Udayavani, Sep 25, 2019, 7:59 AM IST
ನ್ಯೂಯಾರ್ಕ್: ಬಿಲ್ ಮತ್ತು ಮೆಲಿಂಡಾ ಗೇಟ್ಸ್ ಫೌಂಡೇಶನ್ ನಿಂದ ಸ್ವಚ್ಚ ಭಾರತ್ ಅಭಿಯಾನಕ್ಕಾಗಿ ಪ್ರಧಾನಿ ಮೋದಿಗೆ ಗ್ಲೋಬಲ್ ಗೋಲ್ ಕೀಪರ್ ಅವಾರ್ಡ್ ಲಭಿಸಿದೆ. ವಿಶ್ವ ಸಂಸ್ಥೆಯ ಸಾಮಾನ್ಯ ಅಧಿವೇಶನದಲ್ಲಿ ಬಿಲ್ ಗೇಟ್ಸ್ ಈ ಪ್ರಶಸ್ತಿಯನ್ನು ಪ್ರಧಾನ ಮಾಡಿದ್ದಾರೆ.
ಪ್ರಶಸ್ತಿಯನ್ನು ಸ್ವೀಕರಿಸಿ ಮಾತನಾಡಿದ ಮೋದಿ, ಭಾರತೀಯ ಜನರು ಸ್ವಚ್ಛ ಭಾರತ ಅಭಿಯಾನವನ್ನು ಒಂದು ಬೃಹತ್ ಆಂದೋಲನವನ್ನಾಗಿ ಪರಿವರ್ತಿಸಿದ್ದು ಮಾತ್ರವಲ್ಲದೆ, ತಮ್ಮ ಜೀವನದ ಒಂದು ಭಾಗವನ್ನಾಗಿ ಮಾಡಿಕೊಂಡಿದ್ದಾರೆ. ಕೋಟ್ಯಾಂತರ ಭಾರತೀಯರಿಗೆ ಈ ಪ್ರಶಸ್ತಿಯನ್ನು ಅರ್ಪಿಸುತ್ತಿದ್ದೇನೆ ಎಂದು ತಿಳಿಸಿದರು.
ಮಹಾತ್ಮ ಗಾಂಧೀಜಿಯವರ 150 ನೇ ಜನ್ಮಾದಿನಾಚರಣೆ ಹಿನ್ನಲೆಯಲ್ಲಿ ಸ್ವಚ್ಛ ಭಾರತ ಅಭಿಯಾನ ಅತ್ಯಂತ ಮಹತ್ವದಾಯಕವಾಗಿದ್ದು, 130 ಕೋಟಿ ಜನರು ಈ ನಿರ್ಣಯವನ್ನು ಈಡೇರಿಸಲು ತಮ್ಮನ್ನು ತಾವು ತೊಡಗಿಸಿಕೊಂಡರೇ ಸವಾಲನ್ನು ಗೆಲ್ಲಬಹುದು ಎಂದು ತಿಳಿಸಿದರು. ಕಳೆದ ಐದು ವರುಷಗಳಲ್ಲಿ 11 ಕೋಟಿಗೂ ಅಧಿಕ ಶೌಚಾಲಯ ನಿರ್ಮಿಸಿದ್ದೇವೆ. ಇದರಿಂದ ಮಹಿಳೆಯರಿಗೆ ಬಹಳ ಅನುಕೂಲವಾಗಿದೆ. ಶೌಚಾಲಯಗಳ ಕೊರತೆಯಿಂದ ಹಲವು ಹೆಣ್ಣುಮಕ್ಕಳು ಶಾಲೆಯನ್ನು ಅರ್ಧದಲ್ಲೇ ಬಿಡಬೇಕಾಯಿತು. ಈ ಸಮಸ್ಯೆಯನ್ನು ಮನಗಂಡು ಶಾಲೆಗಳಲ್ಲಿ ಸಮರ್ಪಕ ಶೌಚಾಲಯಗಳ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.