ಕೆಎಂಎಫ್ ಕಾರ್ಯಶೈಲಿಗೆ ಪ್ರಧಾನಿ ಮೋದಿ ಮೆಚ್ಚುಗೆ

Team Udayavani, Sep 13, 2022, 7:30 AM IST

thumb news pm

ನೋಯಿಡಾ (ಉತ್ತರ ಪ್ರದೇಶ): ಸಹಕಾರಿ ವಲಯದಲ್ಲಿ ಕರ್ನಾಟಕ ಸಹಕಾರ ಹಾಲು ಉತ್ಪಾದಕರ ಒಕ್ಕೂಟ (ಕೆಎಂಎಫ್)ಉತ್ತಮ ಕಾರ್ಯ ನಿರ್ವಹಿಸುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಉತ್ತರಪ್ರದೇಶದ ಗ್ರೇಟರ್‌ ನೋಯಿಡಾದಲ್ಲಿ ಸೋಮವಾರದಿಂದ ಆರಂಭವಾಗಿರುವ ವಿಶ್ವ ಡೇರಿ ಶೃಂಗಸಭೆಯಲ್ಲಿ ಕೆಎಂಎಫ್‌ನ ನಂದಿನಿ ಉತ್ಪನ್ನಗಳ ಮಳಿಗೆಗೆ ಭೇಟಿ ನೀಡಿ, ಸಹಕಾರಿ ಕ್ಷೇತ್ರದಲ್ಲಿನ ಅತ್ಯುತ್ತಮ ಕಾರ್ಯಕ್ಕಾಗಿ ಕೆಎಂಎಫ್ ಅನ್ನು ಶ್ಲಾಘಿಸಿದರು. ಕಳೆದ ಐದು ದಶಕಗಳಿಂದ ರೈತರ ಸೇವೆ ಮಾಡುತ್ತಿರುವ ಕರ್ನಾಟಕ ಸಹಕಾರ ಹಾಲು ಉತ್ಪಾದಕರ ಒಕ್ಕೂಟದ ಕೆಲಸ ಹೆಮ್ಮೆಪಡುವಂತಹದ್ದು ಎಂದು ಹೇಳಿದರು.

ಹೈನುಗಾರಿಕೆಯನ್ನೇ ಅವಲಂಬಿತರಾಗಿರುವ ರೈತ ಸಮುದಾಯ ಅದರಲ್ಲೂ ವಿಶೇಷವಾಗಿ ರೈತ ಮಹಿಳೆಯರ ಆರ್ಥಿಕ ಸ್ವಾವಲಂಬಿ ಬದುಕಿಗೆ ವಿಶೇಷ ಯೋಜನೆಗಳನ್ನು ರೂಪಿಸುವಂತೆ ಪ್ರಧಾನಿ ನರೇಂದ್ರ ಮೋದಿ ಇದೇ ವೇಳೆ ಕೆಎಂಎಫ್‌ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರಿಗೆ ಸಲಹೆ ನೀಡಿದರು. ಈ ಸಂದರ್ಭದಲ್ಲಿ ಕೆಎಂಎಫ್‌ನ ಕಾರ್ಯಚಟುವಟಿಕೆಗಳ ಬಗ್ಗೆ ಬಾಲಚಂದ್ರ ಜಾರಕಿಹೊಳಿ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ವಿಸ್ತೃತ ಮಾಹಿತಿ ನೀಡಿದರು.

ಕರ್ನಾಟಕದ 24184 ಹಳ್ಳಿಗಳು ಸುಮಾರು 15043 ಹಾಲು ಉತ್ಪಾದಕರ ಸಹಕಾರಿ ಸಂಘಗಳನ್ನು ಹೊಂದಿದ್ದು, 16 ಜಿಲ್ಲಾ ಸಹಕಾರ ಹಾಲು ಒಕ್ಕೂಟಗಳನ್ನು ಹೊಂದಿರುವ ಸಹಕಾರಿ ಸಂಸ್ಥೆಯಾಗಿದೆ. 26 ಲಕ್ಷ ಹಾಲು ಉತ್ಪಾದಕ ಸದಸ್ಯರಿದ್ದು, 10 ಲಕ್ಷ ಹಾಲು ಸರಬರಾಜುದಾರರಿದ್ದಾರೆ. 91.88 ಲಕ್ಷ ಕೆಜಿ ಗರಿಷ್ಠ ಶೇಖರಣೆ ಹೊಂದಿದೆ ಎಂದು ತಿಳಿಸಿದರು. ಪ್ರತಿದಿನ 30 ಕೋಟಿ ರೂ. ರೈತರಿಗೆ ಹಣ ಪಾವತಿ ಮಾಡುತ್ತಿದ್ದು, 170ಕ್ಕೂ ಅಧಿಕ ನಂದಿನಿ ಹಾಲಿನ ಉತ್ಪನ್ನಗಳನ್ನು ಕೆಎಂಎಫ್‌ ಉತ್ಪಾದಿಸುತ್ತಿದೆ ವಿವರಿಸಿದರು.

ಕೆಎಂಎಫ್ ನಂದಿನಿ ಬ್ರಾಂಡ್‌ ಬಗ್ಗೆ ಅಂತಾರಾಷ್ಟ್ರೀಯ ಮಾರುಕಟ್ಟೆಗೆ ಪರಿಚಯಿಸಲು ವಿಶ್ವ ಡೇರಿ ಶೃಂಗಸಭೆಯು ಉತ್ತಮ ವೇದಿಕೆಯಾಗಿದೆ. ಬ್ರಾಂಡ್‌ ಮೌಲ್ಯವರ್ಧನೆ ಮತ್ತು ವಹಿವಾಟು ವಿಸ್ತರಣೆ ಸದುದ್ದೇಶದಿಂದ ಈ ವಿಶ್ವ ಡೇರಿ ಶೃಂಗ ಸಭೆ ಕಾರ್ಯಾಗಾರದಲ್ಲಿ ನಂದಿನಿ ಉತ್ಪನ್ನಗಳ ಪ್ರದರ್ಶನದ ಆಕರ್ಷಕ ಮಳಿಗೆ ತೆರೆದಿದೆ.

ಕೆಎಂಎಫ್‌ ಆಡಳಿತ ಮಂಡಳಿ ಸದಸ್ಯರು, ಜಿಲ್ಲಾ ಹಾಲು ಒಕ್ಕೂಟಗಳ ಅಧ್ಯಕ್ಷರು ಮತ್ತು ಸದಸ್ಯರು, ವ್ಯವಸ್ಥಾಪಕ ನಿರ್ದೇಶಕ ಬಿ.ಸಿ. ಸತೀಶ, ಒಕ್ಕೂಟಗಳ ಕಾರ್ಯನಿರ್ವಾಹಕ ನಿರ್ದೇಶಕರು ಮತ್ತು ಕಹಾಮ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.

ಟಾಪ್ ನ್ಯೂಸ್

RSS ವಿರುದ್ಧ ಹೇಳಿಕೆ ಪ್ರಕರಣ: ಗೀತ ರಚನೆಕಾರ ಜಾವೇದ್‌ ಅಖ್ತರ್‌ ಖುಲಾಸೆ

RSS ವಿರುದ್ಧ ಹೇಳಿಕೆ ಪ್ರಕರಣ: ಗೀತ ರಚನೆಕಾರ ಜಾವೇದ್‌ ಅಖ್ತರ್‌ ಖುಲಾಸೆ

SC: ಬಿಯಾಂತ್‌ ಹಂತಕ ಬಲ್ವಂತ್‌ ಕ್ಷಮಾದಾನ ಅರ್ಜಿ ಶೀಘ್ರ ಇತ್ಯರ್ಥಕ್ಕೆ ಸುಪ್ರೀಂ ಸೂಚನೆ

SC: ಬಿಯಾಂತ್‌ ಹಂತಕ ಬಲ್ವಂತ್‌ ಕ್ಷಮಾದಾನ ಅರ್ಜಿ ಶೀಘ್ರ ಇತ್ಯರ್ಥಕ್ಕೆ ಸುಪ್ರೀಂ ಸೂಚನೆ

Missile Strike: ಉಕ್ರೇನ್‌ ಮೇಲೆ ರಷ್ಯಾ ದಾಳಿ:2 ಮಕ್ಕಳು ಸೇರಿ 11 ಜನ ಸಾವು

Missile Strike: ಉಕ್ರೇನ್‌ ಮೇಲೆ ರಷ್ಯಾ ದಾಳಿ:2 ಮಕ್ಕಳು ಸೇರಿ 11 ಜನ ಸಾವು

Gaviyappa-MLA

Vijayanagara: ಅನುದಾನ ಇಲ್ಲದೇ, ಜನರು ಅಭಿವೃದ್ಧಿ ಕೇಳಿದ್ರೆ ಏನು ಮಾಡಲಿ: ಕಾಂಗ್ರೆಸ್‌ ಶಾಸಕ

Chennai: ತೆರಿಗೆಯಲ್ಲಿ ಶೇ.50 ಪಾಲಿಗೆ ತಮಿಳ್ನಾಡು ಮತ್ತೆ ಆಗ್ರಹ

Chennai: ತೆರಿಗೆಯಲ್ಲಿ ಶೇ.50 ಪಾಲಿಗೆ ತಮಿಳ್ನಾಡು ಮತ್ತೆ ಆಗ್ರಹ

Punjab Farmers: ಡಿ.6ರಂದು ರೈತ ಸಂಘಟನೆಗಳಿಂದ ದೆಹಲಿ ಚಲೋ

Punjab Farmers: ಡಿ.6ರಂದು ರೈತ ಸಂಘಟನೆಗಳಿಂದ ದೆಹಲಿ ಚಲೋ

Education Co operation: ಶೈಕ್ಷಣಿಕ ಸಹಕಾರದಲ್ಲಿ ಹೊಸ ಎತ್ತರಕ್ಕೇರಿದ ಅಮೇರಿಕ ಮತ್ತು ಭಾರತEducation Co operation: ಶೈಕ್ಷಣಿಕ ಸಹಕಾರದಲ್ಲಿ ಹೊಸ ಎತ್ತರಕ್ಕೇರಿದ ಅಮೇರಿಕ ಮತ್ತು ಭಾರತ

Education Co operation: ಶೈಕ್ಷಣಿಕ ಸಹಕಾರದಲ್ಲಿ ಹೊಸ ಎತ್ತರಕ್ಕೇರಿದ ಅಮೇರಿಕ ಮತ್ತು ಭಾರತ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

RSS ವಿರುದ್ಧ ಹೇಳಿಕೆ ಪ್ರಕರಣ: ಗೀತ ರಚನೆಕಾರ ಜಾವೇದ್‌ ಅಖ್ತರ್‌ ಖುಲಾಸೆ

RSS ವಿರುದ್ಧ ಹೇಳಿಕೆ ಪ್ರಕರಣ: ಗೀತ ರಚನೆಕಾರ ಜಾವೇದ್‌ ಅಖ್ತರ್‌ ಖುಲಾಸೆ

SC: ಬಿಯಾಂತ್‌ ಹಂತಕ ಬಲ್ವಂತ್‌ ಕ್ಷಮಾದಾನ ಅರ್ಜಿ ಶೀಘ್ರ ಇತ್ಯರ್ಥಕ್ಕೆ ಸುಪ್ರೀಂ ಸೂಚನೆ

SC: ಬಿಯಾಂತ್‌ ಹಂತಕ ಬಲ್ವಂತ್‌ ಕ್ಷಮಾದಾನ ಅರ್ಜಿ ಶೀಘ್ರ ಇತ್ಯರ್ಥಕ್ಕೆ ಸುಪ್ರೀಂ ಸೂಚನೆ

Chennai: ತೆರಿಗೆಯಲ್ಲಿ ಶೇ.50 ಪಾಲಿಗೆ ತಮಿಳ್ನಾಡು ಮತ್ತೆ ಆಗ್ರಹ

Chennai: ತೆರಿಗೆಯಲ್ಲಿ ಶೇ.50 ಪಾಲಿಗೆ ತಮಿಳ್ನಾಡು ಮತ್ತೆ ಆಗ್ರಹ

Punjab Farmers: ಡಿ.6ರಂದು ರೈತ ಸಂಘಟನೆಗಳಿಂದ ದೆಹಲಿ ಚಲೋ

Punjab Farmers: ಡಿ.6ರಂದು ರೈತ ಸಂಘಟನೆಗಳಿಂದ ದೆಹಲಿ ಚಲೋ

ಆ್ಯಂಬುಲೆನ್ಸ್‌ ಓಡಾಟಕ್ಕೆ ಅಡ್ಡಿ: ಕಾರು ಮಾಲೀಕನ ಲೈಸೆನ್ಸ್‌ ರದ್ದು!

Kerala: ಆ್ಯಂಬುಲೆನ್ಸ್‌ ಓಡಾಟಕ್ಕೆ ಅಡ್ಡಿ: ಕಾರು ಮಾಲೀಕನ ಲೈಸೆನ್ಸ್‌ ರದ್ದು!

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

RSS ವಿರುದ್ಧ ಹೇಳಿಕೆ ಪ್ರಕರಣ: ಗೀತ ರಚನೆಕಾರ ಜಾವೇದ್‌ ಅಖ್ತರ್‌ ಖುಲಾಸೆ

RSS ವಿರುದ್ಧ ಹೇಳಿಕೆ ಪ್ರಕರಣ: ಗೀತ ರಚನೆಕಾರ ಜಾವೇದ್‌ ಅಖ್ತರ್‌ ಖುಲಾಸೆ

SC: ಬಿಯಾಂತ್‌ ಹಂತಕ ಬಲ್ವಂತ್‌ ಕ್ಷಮಾದಾನ ಅರ್ಜಿ ಶೀಘ್ರ ಇತ್ಯರ್ಥಕ್ಕೆ ಸುಪ್ರೀಂ ಸೂಚನೆ

SC: ಬಿಯಾಂತ್‌ ಹಂತಕ ಬಲ್ವಂತ್‌ ಕ್ಷಮಾದಾನ ಅರ್ಜಿ ಶೀಘ್ರ ಇತ್ಯರ್ಥಕ್ಕೆ ಸುಪ್ರೀಂ ಸೂಚನೆ

Arrest

Mangaluru: ಮದ್ಯ ಅಕ್ರಮ ದಾಸ್ತಾನು: ಮನೆ ಮೇಲೆ ಅಬಕಾರಿ ದಾಳಿ; ಮದ್ಯ ಸಹಿತ ಇಬ್ಬರು ವಶಕ್ಕೆ

1

Brahmavara: ಉದ್ಯೋಗ ಭರವಸೆ ನೀಡಿ ಹಣ ವಂಚನೆ

12

Manipal: ರೈಲಿನಲ್ಲಿ ಲಕ್ಷಾಂತರ ರೂ. ಒಡವೆ ಕಳ್ಳತನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.