ಪಿಎಂ ಮೋದಿಗೆ ವಿಶ್ವಸಂಸ್ಥೆ ಪರಿ ಸರ ಪ್ರಶಸ್ತಿ ಪ್ರದಾನ
Team Udayavani, Oct 4, 2018, 7:55 AM IST
ಹೊಸದಿಲ್ಲಿ: ವಿಶ್ವಸಂಸ್ಥೆಯ ಅತ್ಯುನ್ನತ ಗೌರವವಾದ ಚಾಂಪಿಯನ್ಸ್ ಆಫ್ ದಿ ಅರ್ಥ್ ಪುರಸ್ಕಾರವನ್ನು ಪ್ರಧಾನಿ ನರೇಂದ್ರ ಮೋದಿಗೆ ಹೊಸದಿಲ್ಲಿಯಲ್ಲಿ ವಿಶ್ವಸಂಸ್ಥೆ ಪ್ರಧಾನ ಕಾರ್ಯದರ್ಶಿ ಆಂಟೋನಿಯೋ ಗುಟೆರಸ್ ಪ್ರದಾನ ಮಾಡಿದ್ದಾರೆ. ಪ್ರಧಾನಿ ಮೋದಿ ಹಾಗೂ ಫ್ರಾನ್ಸ್ ಅಧ್ಯಕ್ಷ ಎಮಾನ್ಯುಎಲ್ ಮ್ಯಾಕ್ರನ್‌ಗೆ ಜಂಟಿಯಾಗಿ ಈ ಪುರಸ್ಕಾರ ನೀಡಲಾಗಿದೆ. ಅಂತಾರಾಷ್ಟ್ರೀಯ ಸೌರ ಒಕ್ಕೂಟವನ್ನು ರಚಿಸಿದ್ದಕ್ಕಾಗಿ ಹಾಗೂ ಪರಿಸರ ರಕ್ಷಣೆಯ ನಿಟ್ಟಿನಲ್ಲಿ ಸಹಕಾರಕ್ಕೆ ಹೊಸ ಅವಕಾಶವನ್ನು ಒದಗಿಸಿದ್ದಕ್ಕೆ ಪ್ರಧಾನಿ ಮೋದಿಗೆ ಈ ಪುರಸ್ಕಾರ ನೀಡಲಾಗಿದೆ ಎಂದು ವಿಶ್ವಸಂಸ್ಥೆಯ ಪರಿಸರ ಕಾರ್ಯಕ್ರಮ ಪ್ರಕಟಿಸಿದ ಹೇಳಿಕೆಯಲ್ಲಿ ವಿವರಿಸಿದೆ.
ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಮೋದಿ, ನಿಸರ್ಗ ಮತ್ತು ವಿಪತ್ತುಗಳೆರಡೂ ಸಂಸ್ಕೃತಿಯೊಂದಿಗೆ ಸಂಬಂಧ ಹೊಂದಿವೆ. ಪರಿಸರದ ಬಗೆಗಿನ ಕಾಳಜಿಯು ಸಂಸ್ಕೃತಿಯ ಭಾಗವಾಗದ ಹೊರತು ವಿಪತ್ತನ್ನು ನಾವು ದೂರವಿಡಲಾಗದು ಎಂದಿದ್ದಾರೆ. ಕೃಷಿ, ಔದ್ಯಮಿಕ ನೀತಿಗಳು, ಮನೆ ನಿರ್ಮಾಣ ಹಾಗೂ ಶೌಚಾಲಯ ನಿರ್ಮಾಣ ಸೇರಿದಂತೆ ಪ್ರತಿ ಹಂತದಲ್ಲೂ ನಮ್ಮ ಸರಕಾರವು ಪರಿಸರ ಸ್ನೇಹಿ ಕ್ರಮಗಳಿಗೆ ಒತ್ತು ನೀಡಿದೆ.
ಏನಿದು ಚಾಂಪಿಯನ್ಸ್ ಆಫ್ ದಿ ಅರ್ಥ್ ಅವಾರ್ಡ್?
ಇದು ವಿಶ್ವಸಂಸ್ಥೆಯ ಅತ್ಯುನ್ನತ ಗೌರವ. ತಮ್ಮ ಕ್ರಮಗಳಿಂದಾಗಿ ಪರಿಸರದ ಮೇಲೆ ಗಮನಾರ್ಹ ಪರಿಣಾಮ ಬೀರುವ ವ್ಯಕ್ತಿಗಳಿಗೆ ಈ ಪುರಸ್ಕಾರ ನೀಡಲಾಗುತ್ತದೆ. 2005ರಲ್ಲಿ ಆರಂಭಿಸಿದ ಈ ಪುರಸ್ಕಾರವನ್ನು ವಿಶ್ವದ ವಿವಿಧ ಗಣ್ಯರಿಗೆ ನೀಡಲಾಗಿದೆ. ಈ ಹಿಂದೆ ಯುನಿಲಿವರ್ ಸಿಇಒ ಪಾಲ್ ಪಾಲ್ಮನ್, ರವಾಂಡಾ ಅಧ್ಯಕ್ಷ ಪಾಲ್ ಕಗಾಮೆ, ಪರಿಸರ ಪ್ರೇಮಿ ಸಿಲ್ವಿಯಾ ಅರ್ಲೆ ಸೇರಿದಂತೆ ಹಲವರಿಗೆ ನೀಡಲಾಗಿದೆ.
ಮೋದಿಗೆ ಪ್ರಶಸ್ತಿ ನೀಡಿದ್ದು ಯಾಕೆ?
– 121 ದೇಶಗಳನ್ನು ಒಳಗೊಂಡ ಅಂತಾರಾಷ್ಟ್ರೀಯ ಸೌರ ಒಕ್ಕೂಟ (ಐಎಸ್‌ಎ) ರಚನೆ ಮಾಡಿರುವುದು.
– ಪ್ಲಾಸ್ಟಿಕ್ ಬಳಕೆಯನ್ನು 2022ರ ವೇಳೆಗೆ ದೇಶದಿಂದ ನಿರ್ಮೂಲನೆ ಮಾಡುವ ಗುರಿ ಹಾಕಿಕೊಂಡಿರುವುದು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Wayanad: ಪ್ರಿಯಾಂಕಾ ಗಾಂಧಿ ‘ಕೈ’ ಹಿಡಿಯಲಿದ್ದಾರಾ ಮತದಾರರು… 85,000 ಮತಗಳಿಂದ ಮುನ್ನಡೆ
Election Results: ಮಹಾರಾಷ್ಟ್ರ, ಝಾರ್ಖಂಡ್ ನಲ್ಲಿ ಮತ ಎಣಿಕೆ ಪ್ರಕ್ರಿಯೆ ಆರಂಭ
Govt Employees: 8ನೇ ವೇತನ ಆಯೋಗ ಶಿಫಾರಸು ಜಾರಿಯಾದರೆ ಕನಿಷ್ಠ ವೇತನ 51000 ರೂ.!
Winter Session: ಸಂಸತ್ ಅಧಿವೇಶನ ನಾಡಿದ್ದಿಂದ:”ವಕ್ಫ್’ ವಿಧೇಯಕ ಮಂಡನೆ?
Election Results: ಝಾರ್ಖಂಡ್, ಮಹಾರಾಷ್ಟ್ರದಲ್ಲಿ ಪಟ್ಟ ಯಾರಿಗೆ?
MUST WATCH
ಹೊಸ ಸೇರ್ಪಡೆ
Karnataka By Poll Results: ಮತಎಣಿಕೆ-ಚನ್ನಪಟ್ಟಣ, ಶಿಗ್ಗಾಂವಿ, ಸಂಡೂರು “ಕೈ” ಮುನ್ನಡೆ
By Election: ನಿಖಿಲ್ ವಿರುದ್ದ ಮುನ್ನಡೆ ಸಾಧಿಸಿದ ಯೋಗೇಶ್ವರ್; ಕುತೂಹಲದತ್ತ ಚನ್ನಪಟ್ಟಣ
Karkala: ಶಾಲಾ ವಾಹನಕ್ಕೆ ಢಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಸಾವು
Zebra Movie Review: ಜೀಬ್ರಾ ಕ್ರಾಸ್‌ನಲ್ಲಿ ಕಣ್ಣಾ ಮುಚ್ಚಾಲೆ!
Wayanad: ಪ್ರಿಯಾಂಕಾ ಗಾಂಧಿ ‘ಕೈ’ ಹಿಡಿಯಲಿದ್ದಾರಾ ಮತದಾರರು… 85,000 ಮತಗಳಿಂದ ಮುನ್ನಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.