ಕೇದಾರನಾಥ್ ಪುನರ್ನಿರ್ಮಾಣ ವೀಕ್ಷಿಸಿದ ಪ್ರಧಾನಿ ಮೋದಿ
Team Udayavani, Jun 11, 2020, 10:16 AM IST
ಹೊಸದಿಲ್ಲಿ: ಕೇದಾರನಾಥ ಪುನರ್‌ನಿರ್ಮಾಣ, ಬದರಿನಾಥ್ ತೀರ್ಥಕ್ಷೇತ್ರಗಳ ಕಾಮಗಾರಿಗಳನ್ನು ಪ್ರಧಾನಿ ನರೇಂದ್ರ ಮೋದಿ ವಿಡಿಯೊ ಕಾನ್ಫರೆನ್ಸ್ ಮೂಲಕ ಬುಧವಾರ ವೀಕ್ಷಿಸಿದರು. ಯಾವುದೇ ಪ್ರಕೃತಿ ವಿಕೋಪಗಳನ್ನು ತಡೆದುಕೊಳ್ಳುವಂತೆ, ಹಾಗೆಯೇ ಪರಿಸರ ಸ್ನೇಹಿಯಾಗಿಯೂ ಕಾಮಗಾರಿಗಳನ್ನು ವಿನ್ಯಾಸ ಗೊಳಿಸುವಂತೆ ಮೋದಿ ಉತ್ತರ ಖಂಡ ಸರಕಾರಕ್ಕೆ ಸೂಚಿಸಿದ್ದಾರೆ.
ಉತ್ತರಖಂಡ ಸಿಎಂ ತ್ರಿವೇಂದ್ರ ಸಿಂಗ್ ರಾವತ್, ಇತರ ಹಿರಿಯ ಅಧಿಕಾರಿಗಳೊಂದಿಗೆ ನಡೆಸಿದ ಚರ್ಚೆಯಲ್ಲಿ ಪ್ರಧಾನಿ ಹಲವು ಸಲಹೆಗಳನ್ನು ನೀಡಿದರು. ಸುತ್ತ ಮುತ್ತಲಿನ ಪರಿಸರಕ್ಕೆ ಹೊಂದಿಕೆ ಆಗುವ ರೀತಿಯಲ್ಲಿ ತೀರ್ಥಕ್ಷೇತ್ರ ವಿನ್ಯಾಸಕ್ಕೆ ಸೂಚಿಸಿದರು. “ಯಾತ್ರಾರ್ಥಿಗಳಿಗೆ, ಪ್ರವಾಸಿಗರಿಗೆ ಅನುಕೂಲವಾಗುವಂತೆ ಕೇದಾರನಾಥದ ಪುನರ್‌ನಿರ್ಮಾಣಕ್ಕೆ ಒತ್ತು ನೀಡಲಾಗಿದೆ’ ಎಂದು ಮೋದಿ ಟ್ವೀಟ್ ಮಾಡಿದ್ದಾರೆ. 2013ರ ಮಹಾ ಮೇಘಸ್ಫೋಟ ಪ್ರವಾಹಕ್ಕೆ ತುತ್ತಾಗಿದ್ದ ಈ ಕ್ಷೇತ್ರಗಳ ಪುನರ್ನಿರ್ಮಾಣ ಕಾರ್ಯಕ್ಕೆ 2017ರಲ್ಲಿ ಪ್ರಧಾನಿ ಮೋದಿಯವರೇ ಚಾಲನೆ ನೀಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pollution: ದಿಲ್ಲಿಯಲ್ಲಿ ಈಗ ನಿರ್ಮಾಣಕ್ಕೆ ಬ್ರೇಕ್, ಬಸ್ಗಳಿಗೆ ನಿರ್ಬಂಧ
Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು
Notice: ಸಂಗೀತ ಕಾರ್ಯಕ್ರಮಕ್ಕೂ ಮುನ್ನ ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್
Media powerhouse: ರಿಲಯನ್ಸ್- ಡಿಸ್ನಿ ಕಂಪನಿ ವಿಲೀನ ಈಗ ಅಧಿಕೃತ
PM ನರೇಂದ್ರ ಮೋದಿಗೆ ಡೊಮಿನಿಕಾದ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಗೌರವ
MUST WATCH
ಹೊಸ ಸೇರ್ಪಡೆ
Siruguppa: ಬೈಕ್ ಮತ್ತು ಅಪರಿಚಿತ ವಾಹನದ ಮಧ್ಯೆ ಭೀಕರ ಅಪಘಾತ; ಇಬ್ಬರ ಸಾವು
Karkala: ತಿಂಗಳ ಹಿಂದೆ ಮೃತಪಟ್ಟ ಪತಿ, ಮನನೊಂದು ಆತ್ಮಹತ್ಯೆಗೆ ಶರಣಾದ ಅಂಗನವಾಡಿ ಶಿಕ್ಷಕಿ
Hampanakatte: ಗುಟ್ಕಾ ಉಗುಳುವವರು, ಧೂಮಪಾನಿಗಳ ಹಾವಳಿ
Mangaluru: ತೆರೆದ ತೋಡಿನಲ್ಲಿ ಕೊಳಚೆ ನೀರು ಹರಿಯುವುದು ನಿಂತಿಲ್ಲ
Karkala: ಅಣ್ಣನ ತಿಥಿಗೆ ಬಂದಿದ್ದ ತಂಗಿ ವಿದ್ಯುತ್ ಆಘಾತದಿಂದ ಮೃ*ತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.