Underwater Metro: ದೇಶದ ಮೊದಲ ನೀರಿನಾಳದ ಮೆಟ್ರೋ ಮಾರ್ಗಕ್ಕೆ ಇಂದು ಪ್ರಧಾನಿ ಚಾಲನೆ
Team Udayavani, Mar 6, 2024, 8:15 AM IST
ಕೋಲ್ಕತಾ: ದೇಶದ ಸಾರಿಗೆ ಇತಿಹಾಸದಲ್ಲಿ ಮಾ. 6 ಮಹತ್ವದ ದಿನವಾಗಲಿದೆ. ಪಶ್ಚಿಮ ಬಂಗಾಲದ ಹೌರಾ ಮೈದಾನ- ಎಸ್ಪ್ಲಾಂಡೆ ಮಧ್ಯೆ ಹೂಗ್ಲಿ ನದಿ (ಗಂಗಾ)ಯ ಕೆಳಗೆ ನೀರಿನಾಳದಲ್ಲಿ ನಿಮಿಸಿರುವ ಮೆಟ್ರೋ ಮಾರ್ಗಕ್ಕೆ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಲಿದ್ದಾರೆ.
ಇದು ದೇಶದ ಮೊದಲ ನೀರಿನಾಳದ ಮೆಟ್ರೋ ಮಾರ್ಗ ಎಂಬ ಖ್ಯಾತಿಗೆ ಪಾತ್ರವಾಗಿದೆ. ಕೋಲ್ಕತಾ ಮೆಟ್ರೋದ 16.6 ಕಿಲೋಮೀಟರ್ ಉದ್ದದ ಪೂರ್ವ-ಪಶ್ಚಿಮ ಮೆಟ್ರೋ ಮಾರ್ಗದಲ್ಲಿ 10.8 ಕಿ.ಮೀ. ಮಾರ್ಗ ಸುರಂಗದಲ್ಲಿದ್ದರೆ, 5.75 ಕಿ.ಮೀ. ಎತ್ತರಿಸಿದ ಮಾರ್ಗದಲ್ಲಿದೆ. ಈ ಪೈಕಿ 4.8 ಕಿ.ಮೀ.ಹೌರಾ ಮೈದಾನ- ಎಸ್ಪ್ಲಾಂಡೆ ಮಧ್ಯೆ ಇದೆ. ಈ ಮಾರ್ಗ 6 ನಿಲ್ದಾಣಗಳನ್ನು ಹೊಂದಿದ್ದು ಈ ಪೈಕಿ ಮೂರು ಸುರಂಗದಲ್ಲಿ ಬರುತ್ತವೆ. ಹೂಗ್ಲಿ ನದಿಯ ಕೆಳಭಾಗದಲ್ಲಿ 520 ಮೀಟರ್ ಕ್ರಮಿಸಲು ಕೇವಲ 45 ಸೆಕೆಂಡ್ಗಳು ಸಾಕು. ಹೂಗ್ಲಿ ನಿಲ್ದಾಣ ದೇಶದ ಅತೀ ಆಳದ ನಿಲ್ದಾಣ ಎಂಬ ಖ್ಯಾತಿಗೆ ಪಾತ್ರವಾಗಿದೆ.
ಕಳೆದ ವರ್ಷದ ಎಪ್ರಿಲ್ನಲ್ಲೇ ಕೋಲ್ಕತಾ ಮೆಟ್ರೋ ಸುರಂಗ ಮಾರ್ಗದ ಹೂಗ್ಲಿ ನದಿಯ ಕೆಳಗೆ ನೀರಿನಾಳದಲ್ಲಿ ಮೆಟ್ರೋ ರೈಲು ಓಡಿಸುವಲ್ಲಿ ಯಶಸ್ವಿಯಾಗಿತ್ತು. ಇದರಿಂದ ಹೌರಾ- ಕೋಲ್ಕತಾ ಅವಳಿ ಸಿಟಿ ಸಂಪರ್ಕ ಸುಗಮವಾಗಲಿದೆ.
ಇದನ್ನೂ ಓದಿ: Daily Horoscope: ಉದ್ಯೋಗದಲ್ಲಿ ಮೇಲಿನವರಿಗೆ ತೃಪ್ತಿ, ನ್ಯಾಯಾಲಯ ವ್ಯವಹಾರದಲ್ಲಿ ಜಯ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಪತ್ನಿಗಾಗಿ ಕೆಲಸದಿಂದ ನಿವೃತ್ತಿ ಪಡೆದ ಪತಿ; ಬೀಳ್ಕೊಡುಗೆ ಕಾರ್ಯಕ್ರಮದಲ್ಲೇ ಪತ್ನಿ ಮೃತ್ಯು
Uttarakhand: ಕಂದಕಕ್ಕೆ ಬಿದ್ದ ಬಸ್ ನಾಲ್ವರು ಮೃ*ತ್ಯು; 20ಕ್ಕೂ ಅಧಿಕ ಮಂದಿಗೆ ಗಾಯ
Uttar Pradesh: 16 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾ*ಚಾರ; ಇಬ್ಬರ ಬಂಧನ
Atul Subhash Case: ಮೊಮ್ಮಗನನ್ನು ನೀಡದಿದ್ದರೆ ಆತ್ಮಹತ್ಯೆ; ಅತುಲ್ ತಂದೆ
Delhi: ನಕಲಿ ಕೇಸ್ ನಲ್ಲಿ ಸಿಎಂ ಅತಿಶಿ ಬಂಧನಕ್ಕೆ ಇ.ಡಿ, ಸಿಬಿಐಗೆ ಬಿಜೆಪಿ ಆದೇಶ: ಕೇಜ್ರಿ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಪತ್ನಿಗಾಗಿ ಕೆಲಸದಿಂದ ನಿವೃತ್ತಿ ಪಡೆದ ಪತಿ; ಬೀಳ್ಕೊಡುಗೆ ಕಾರ್ಯಕ್ರಮದಲ್ಲೇ ಪತ್ನಿ ಮೃತ್ಯು
Manipal: ಹಿರಿಯ ವೈದ್ಯೆ ಡಾ. ಆಶಾ ಭಟ್ ನಿಧನ
Banahatti: ತಾಂತ್ರಿಕ ಸೌಲಭ್ಯಗಳನ್ನು ನೀಡುವ ನಿಟ್ಟಿನಲ್ಲಿ ಬದ್ಧಳಾಗಿದ್ದೇನೆ: ಉಮಾಶ್ರೀ
Road Mishap; ದ್ವಿಚಕ್ರ ವಾಹನ-ಲಾರಿ ನಡುವೆ ಅಪಘಾತ: ದಂಪತಿ ಸಾವು
ಕಾಲ್ತುಳಿತ ಪ್ರಕರಣ: ಅಲ್ಲು, ʼಪುಷ್ಪ-2ʼ ತಂಡದಿಂದ ರೇವತಿ ಕುಟುಂಬಕ್ಕೆ 2 ಕೋಟಿ ರೂ. ಪರಿಹಾರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.