ಇಂದು ಕಾಶ್ಮೀರದ ಜೆಡ್-ಮೋರ್ ಸುರಂಗ ಲೋಕಾರ್ಪಣೆ; ಪ್ರಧಾನಿ ಮೋದಿಯಿಂದ ಚಾಲನೆ
ಲಡಾಖ್ಗೆ ಸಂಪರ್ಕ ಸುಲಭವಾಗಿಸುವ ಸರ್ವಋತು ಸುರಂಗ
Team Udayavani, Jan 13, 2025, 6:55 AM IST
ಶ್ರೀನಗರ: ಲಡಾಖ್ಗೆ ಸೇನಾ ಸಂಪರ್ಕವನ್ನು ಸುಲಭವಾಗಿಸುವ, ರಾಷ್ಟ್ರೀಯ ಭದ್ರತೆಯ ನಿಟ್ಟಿನಲ್ಲಿ ಪ್ರಮುಖವೆನಿಸಿರುವ ಝೆಡ್-ಮೋರ್(ಘಮೋರ್) ಸುರಂಗವು ಲೋಕಾರ್ಪಣೆಗೆ ಸಜ್ಜಾಗಿದೆ. ಶ್ರೀನಗರ- ಲೇಹ್ ರಾಷ್ಟ್ರೀಯ ಹೆದ್ದಾರಿಯಲ್ಲಿ 2,400 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗಿರುವ ಈ 6.5 ಕಿ.ಮೀ. ಉದ್ದದ ಈ ಸುರಂಗವನ್ನು ಸೋಮವಾರ ಪ್ರಧಾನಿ ಮೋದಿ ಉದ್ಘಾಟಿಸಲಿದ್ದಾರೆ.
ವ್ಯೂಹಾತ್ಮಕವಾಗಿ ಪ್ರಾಮುಖ್ಯ ಪಡೆದಿರುವ ಲಡಾಖ್ ಪ್ರದೇಶಕ್ಕೆ ಈ ಸುರಂಗವು ವರ್ಷಪೂರ್ತಿ ಸಂಪರ್ಕ ಕಲ್ಪಿಸಲಿದೆ. ಪ್ರಧಾನಿ ಮೋದಿ ಭೇಟಿ ಹಿನ್ನೆಲೆಯಲ್ಲಿ ಕಾಶ್ಮೀರದಾದ್ಯಂತ ಬಿಗಿ ಭದ್ರತೆ ಏರ್ಪಡಿಸಲಾಗಿದ್ದು, ಸುರಂಗ ಲೋಕಾರ್ಪಣೆ ಬಳಿಕ ಅವರು ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.
ಪ್ರಾಮುಖ್ಯವೇನು?
ಪಾಕ್, ಚೀನ ಜತೆ ಲಡಾಖ್ ಗಡಿ ಹಂಚಿಕೊಂಡಿರುವ ಕಾರಣ ಈ ಸುರಂಗವು ರಾಷ್ಟ್ರೀಯ ಭದ್ರತೆ ನಿಟ್ಟಿ ನಲ್ಲಿ ಪ್ರಮುಖ ಪಾತ್ರ ವಹಿಸಲಿದೆ. ಈ ಸುರಂಗ ಹಾಗೂ ನಿರ್ಮಾಣ ಹಂತದಲ್ಲಿರುವ ಝೋಜಿಲಾ ಸುರಂಗವು ಭವಿಷ್ಯದಲ್ಲಿ ಲಡಾಖ್ಗೆ ಸರ್ವಋತು ಸಂಪರ್ಕ ಒದಗಿಸಲಿದೆ. ನಾಗರಿಕರು ಮತ್ತು ಸೇನಾ ಸಂಚಾರ (ಸೇನಾ ಸಿಬಂದಿ, ಸಲಕರಣೆಗಳು ಹಾಗೂ ಇತರ ಪೂರೈಕೆಗಳು)ಕ್ಕೆ ಇದರಿಂದ ಅನುಕೂಲ ಆಗಲಿದೆ. ಜತೆಗೆ, ದೇಶದ ಉಳಿದ ಭಾಗಗಳ ಜತೆ ಲಡಾಖ್ ಸಂಪರ್ಕ ಹೊಂದಲು, ಆ ಮೂಲಕ ವ್ಯಾಪಾರ-ವಹಿವಾಟು ಹೆಚ್ಚಿಸಿಕೊಳ್ಳಲು ಸಾಧ್ಯವಾ ಗಲಿದೆ. ಪ್ರವಾಸೋದ್ಯಮಕ್ಕೂ ಉತ್ತೇಜನ ನೀಡಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Stones Thrown: ಕುಂಭಮೇಳಕ್ಕೆ ಭಕ್ತರನ್ನು ಕರೆದೊಯ್ಯುತ್ತಿದ್ದ ರೈಲಿಗೆ ಕಲ್ಲು ತೂರಾಟ…
Maha Kumabha Mela: ಮಹಾ ಕುಂಭಮೇಳಕ್ಕೆ 2022ರಿಂದಲೇ ಸಿದ್ಧತೆ
SpaDeX Mission: ಎರಡು ಉಪಗ್ರಹ 3 ಮೀ. ಸನಿಹಕ್ಕೆ ತಂದ ಇಸ್ರೋ!
ಗಣರಾಜ್ಯೋತ್ಸವ ಬಳಿಕ ಇಂಡೋನೇಷ್ಯಾ ಅಧ್ಯಕ್ಷ ಪಾಕಿಸ್ಥಾನಕ್ಕೆ ಭೇಟಿಯಿಲ್ಲ?
UP Government; ಹೆಲ್ಮೆಟ್ ಹಾಕದಿದ್ದರೆ ಪೆಟ್ರೋಲ್ ಇಲ್ಲ: ಉತ್ತರ ಪ್ರದೇಶ ಸರಕಾರ ಆದೇಶ
MUST WATCH
ಹೊಸ ಸೇರ್ಪಡೆ
BBK11: ವಾರದ ಮಧ್ಯದಲ್ಲೇ ಒಬ್ಬ ಸ್ಪರ್ಧಿ ಔಟ್; ರಜತ್ ಮೇಲೆ ಭವ್ಯಾ, ಮೋಕ್ಷಿತಾ ಟಾರ್ಗೆಟ್
Stones Thrown: ಕುಂಭಮೇಳಕ್ಕೆ ಭಕ್ತರನ್ನು ಕರೆದೊಯ್ಯುತ್ತಿದ್ದ ರೈಲಿಗೆ ಕಲ್ಲು ತೂರಾಟ…
Mudhol: ಹಸುಗಳ ಕೆಚ್ಚಲು ಕೊಯ್ದು ವಿಕೃತಿ ಮೆರೆದವರನ್ನು ಕೂಡಲೇ ಬಂಧಿಸಿ: ಪ್ರಮೋದ್ ಮುತಾಲಿಕ್
Maha Kumabha Mela: ಮಹಾ ಕುಂಭಮೇಳಕ್ಕೆ 2022ರಿಂದಲೇ ಸಿದ್ಧತೆ
SpaDeX Mission: ಎರಡು ಉಪಗ್ರಹ 3 ಮೀ. ಸನಿಹಕ್ಕೆ ತಂದ ಇಸ್ರೋ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.