UAE ; ಐತಿಹಾಸಿಕ ಕಾರ್ಯಕ್ರಮಕ್ಕಾಗಿ ಫೆ.13-14 ರಂದು ಪ್ರಧಾನಿ ಮೋದಿ ಯುಎಇಯಲ್ಲಿ
Team Udayavani, Feb 10, 2024, 8:10 PM IST
ಹೊಸದಿಲ್ಲಿ: ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರದಿಂದ ಯುಎಇ(ಯುನೈಟೆಡ್ ಅರಬ್ ಎಮಿರೇಟ್ಸ್ )ಗೆ ಎರಡು ದಿನಗಳ ಮಹತ್ವದ ಭೇಟಿ ನೀಡಲಿದ್ದು, ಈ ಸಂದರ್ಭದಲ್ಲಿ ಅಬುಧಾಬಿಯಲ್ಲಿ ಮೊದಲ ಹಿಂದೂ ದೇವಾಲಯವನ್ನು ಉದ್ಘಾಟಿಸಲಿದ್ದಾರೆ.
ಯುಎಇ ಅಧ್ಯಕ್ಷ ಶೇಖ್ ಮೊಹಮ್ಮದ್ ಬಿನ್ ಜಾಯೆದ್ ಅಲ್ ನಹ್ಯಾನ್ ಅವರೊಂದಿಗೆ ಉಭಯ ದೇಶಗಳ ನಡುವಿನ ಕಾರ್ಯತಂತ್ರದ ಸಹಭಾಗಿತ್ವವನ್ನು ಇನ್ನಷ್ಟು ಆಳಗೊಳಿಸಲು, ವಿಸ್ತರಿಸಲು ಮತ್ತು ಬಲಪಡಿಸಿ ಪರಸ್ಪರ ಹಿತಾಸಕ್ತಿಯ ಪ್ರಾದೇಶಿಕ ಮತ್ತು ಅಂತಾರಾಷ್ಟ್ರೀಯ ವಿಷಯಗಳ ಕುರಿತು ಅಭಿಪ್ರಾಯಗಳನ್ನು ವಿನಿಮಯ ಮಾಡಿಕೊಳ್ಳುವ ಸಲುವಾಗಿ ಉನ್ನತ ಮಟ್ಟದ ಮಾತುಕತೆ ನಡೆಸಲಿದ್ದಾರೆ.
ಇದು 2015 ರಿಂದ ಯುಎಇಗೆ ಪ್ರಧಾನ ಮಂತ್ರಿ ಮೋದಿ ಅವರ ಏಳನೇ ಭೇಟಿಯಾಗಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ (MEA) ಶನಿವಾರ ತಿಳಿಸಿದೆ.
ಪ್ರಧಾನಿ ಮೋದಿ ಅವರು ಯುಎಇ ಉಪಾಧ್ಯಕ್ಷ ರಕ್ಷಣಾ ಸಚಿವ ಶೇಖ್ ಮೊಹಮ್ಮದ್ ಬಿನ್ ರಶೀದ್ ಅಲ್ ಮಕ್ತೌಮ್ ಅವರನ್ನು ಭೇಟಿಯಾಗಲಿದ್ದಾರೆ.ಆಹ್ವಾನದ ಮೇರೆಗೆ, ಪ್ರಧಾನ ಮಂತ್ರಿಗಳು ಗೌರವ ಅತಿಥಿಯಾಗಿ ದುಬೈನಲ್ಲಿ ನಡೆಯಲಿರುವ ವಿಶ್ವ ಸರಕಾರಿ ಶೃಂಗಸಭೆ 2024 ರಲ್ಲಿ ಭಾಗವಹಿಸುತ್ತಾರೆ ಮತ್ತು ವಿಶೇಷ ಪ್ರಧಾನ ಭಾಷಣವನ್ನು ಮಾಡುತ್ತಾರೆ” ಎಂದು ಎಂಇಎ ತಿಳಿಸಿದೆ.
ಅಬುಧಾಬಿಯ ಮೊದಲ ಹಿಂದೂ ದೇವಾಲಯವನ್ನು (BAPS Mandir) ಮೋದಿ ಉದ್ಘಾಟಿಸಲಿದ್ದಾರೆ. ಜಾಯೆದ್ ಸ್ಪೋರ್ಟ್ಸ್ ಸಿಟಿಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಯುಎಇಯಲ್ಲಿರುವ ಭಾರತೀಯ ಸಮುದಾಯವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.
“ಭಾರತ ಮತ್ತು ಯುಎಇಗಳು ಬಲವಾದ ರಾಜಕೀಯ, ಸಾಂಸ್ಕೃತಿಕ ಮತ್ತು ಆರ್ಥಿಕ ಸಂಬಂಧಗಳ ಆಧಾರದ ಮೇಲೆ ನಿಕಟ ಮತ್ತು ಬಹುಮುಖಿ ಗಾಢ ಸಂಬಂಧಗಳನ್ನು ಹೊಂದಿವೆ” ಎಂದು ಎಂಇಎ ಹೇಳಿದೆ.
“ಸುಮಾರು 3.5 ಮಿಲಿಯನ್ ಭಾರತೀಯ ಸಮುದಾಯವು ಯುಎಇಯಲ್ಲಿ ಅತಿದೊಡ್ಡ ವಲಸಿಗ ಜನಸಂಖ್ಯೆಯಾಗಿದೆ. ಆತಿಥೇಯ ದೇಶದ ಅಭಿವೃದ್ಧಿಯಲ್ಲಿ ಭಾರತೀಯರ ಸಕಾರಾತ್ಮಕ ಮತ್ತು ಮೆಚ್ಚುಗೆಯ ಕೊಡುಗೆಯು ನಮ್ಮ ಅತ್ಯುತ್ತಮ ದ್ವಿಪಕ್ಷೀಯ ಭಾಗೀದಾರಿಕೆಯ ಪ್ರಮುಖ ಆಧಾರವಾಗಿದೆ,” ಎಂದು ಎಂಇಎ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ
Mudhol: ಸಾಲಬಾಧೆಗೆ ಹೆದರಿ ರೈತ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ
Belegavi: ‘ನಾ ಡ್ರೈವರ್’ ಹಾಡಿನ ಗಾಯಕ ಮಾಳು ನಿಪನಾಳನಿಂದ ಯುವಕನ ಮೇಲೆ ಹಲ್ಲೆ
Horoscope: ಉದ್ಯೋಗ ಸ್ಥಾನದಲ್ಲಿ ಎರಡೂ ಬಗೆಯ ಅನುಭವಗಳು ಆಗಲಿದೆ
MUDA Case: ತನಿಖೆ ಸಿಬಿಐಗೆ ವಹಿಸಲು ಹೈಕೋರ್ಟ್‌ಗೆ ಅರ್ಜಿ; ಇಂದು ವಿಚಾರಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.