ಮೋದಿ-ಬೈಡೆನ್ ಮೊದಲ ಮಾತುಕತೆ: ಕೋವಿಡ್19, ಹವಾಮಾನ ಬದಲಾವಣೆ ಸೇರಿದಂತೆ ಹಲವು ವಿಚಾರಗಳ ಚರ್ಚೆ
Team Udayavani, Nov 18, 2020, 7:51 AM IST
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ, ಅಮೆರಿಕ ಅಧ್ಯಕ್ಷರಾಗಿ ಚುನಾಯಿತರಾಗಿರುವ ಜೋ ಬೈಡೆನ್ ಅವರೊಂದಿಗೆ ದೂರವಾಣಿ ಮೂಲಕ ಮಾತುಕತೆ ನಡೆಸಿದ್ದಾರೆ. ಅಮೆರಿಕ ಅಧ್ಯಕ್ಷ ಚುನಾವಣೆಯ ಬಳಿಕ ಇದೇ ಮೊದಲ ಬಾರಿಗೆ ಇಬ್ಬರು ವಿಶ್ವನಾಯಕರು ಹಲವು ವಿಚಾರಗಳ ಕುರಿತು ಚರ್ಚೆ ನಡೆಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿದ ಪ್ರಧಾನಿ ಮೋದಿ “ಯು.ಎಸ್ ಅಧ್ಯಕ್ಷರಾಗಿ ಆಯ್ಕೆಯಾದ ಜೋ ಬೈಡೆನ್ ಅವರೊಂದಿಗೆ ಫೋನ್ ಮೂಲಕ ಮಾತನಾಡಿ ಅಭಿನಂದನೆ ಸಲ್ಲಿಸಿದ್ದೇನೆ. ಇಂಡೋ-ಯುಎಸ್ ಕಾರ್ಯತಂತ್ರದ ಸಹಭಾಗಿತ್ವಕ್ಕೆ ನಮ್ಮ ದೃಢವಾದ ನಿರ್ಧಾರವನ್ನು ತಳೆದಿದ್ದೇವೆ. ಕೋವಿಡ್ -19 ಸಾಂಕ್ರಾಮಿಕ, ಹವಾಮಾನ ಬದಲಾವಣೆ, ಮತ್ತು ಇಂಡೋ-ಪೆಸಿಫಿಕ್ ಪ್ರದೇಶದಲ್ಲಿ ಸಹಕಾರ ಸೇರಿದಂತೆ ಉಭಯ ರಾಷ್ಟ್ರಗಳ ಆದ್ಯತೆಯ ಬಗ್ಗೆ ಚರ್ಚಿಸಲಾಗಿದೆ” ಎಂದರು.
Spoke to US President-elect @JoeBiden on phone to congratulate him. We reiterated our firm commitment to the Indo-US strategic partnership and discussed our shared priorities and concerns – Covid-19 pandemic, climate change, and cooperation in the Indo-Pacific Region.
— Narendra Modi (@narendramodi) November 17, 2020
ಇದೇ ಸಂದರ್ಭದಲ್ಲಿ ಅಮೆರಿಕ ಉಪಾಧ್ಯಕ್ಷೆಯಾಗಿ ಆಯ್ಕೆಯಾದ ಕಮಲಾ ಹ್ಯಾರಿಸ್ ಅವರಿಗೆ ನಾನು ಆತ್ಮೀಯ ಅಭಿನಂದನೆಗಳನ್ನು ತಿಳಿಸಿದ್ದೇನೆ. ಅವರ ಯಶಸ್ಸು ಇಂಡೋ-ಯುಎಸ್ ಸಂಬಂಧಗಳಿಗೆ ಅಪಾರ ಶಕ್ತಿಯ ಮೂಲವಾಗಿದೆ ಮಾತ್ರವಲ್ಲದೆ, ಭಾರತೀಯ-ಅಮೇರಿಕನ್ ಸಮುದಾಯದ ಸದಸ್ಯರಿಗೆ ಹೆಮ್ಮೆ ಮತ್ತು ಸ್ಫೂರ್ತಿಯ ಸಂಗತಿಯಾಗಿದೆ ಎಂದು ಪ್ರಧಾನಿ ತಿಳಿಸಿದ್ದಾರೆ.
I also conveyed warm congratulations for VP-elect @KamalaHarris. Her success is a matter of great pride and inspiration for members of the vibrant Indian-American community, who are a tremendous source of strength for Indo-US relations.
— Narendra Modi (@narendramodi) November 17, 2020
ಪ್ರಧಾನಿ ನರೇಂದ್ರ ಮೋದಿ, ಕೊನೆಯ ಬಾರಿಗೆ ಜೋ ಬೈಡೆನ್ ಅವರನ್ನು ವಾಷಿಂಗ್ಟನ್‌ನಲ್ಲಿ ಸೆಪ್ಟೆಂಬರ್ 30, 2014 ರಂದು ಭೇಟಿಯಾಗಿದ್ದರು. ಈ ವೇಳೆ ಬರಾಕ್ ಒಬಾಮಾ ಅಧ್ಯಕ್ಷರಾಗಿದ್ದರೇ, ಜೋ ಬೈಡೆನ್ ಉಪಾಧ್ಯಕ್ಷರಾಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.